Breaking News

admin

ಶಿವನ ದರ್ಶನಕ್ಕೆ ಹೋದವರು ಶಿವನ ಪಾದ ಸೇರಿದರು

ನುಪಾಡಾ(ಒಡಿಶಾ): ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್​ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ ಘಟನೆ ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್​ ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಛತ್ತೀಸ್​ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ …

Read More »

ಉಕ್ರೇನ್ ನಲ್ಲಿ ಬಂಧನವಾಗಿರುವ ಭಾರತೀಯರಿಗೆ ಧೈರ್ಯ ತುಂಬಿದ ಸಿಂಧಿಯಾ

ಬುಕಾರೆಸ್ಟ್: ಯುದ್ಧಪೀಡಿತ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವುದನ್ನು ಕಾರ್ಯಕ್ಕೆ ಕೇಂದ್ರ ಸರ್ಕಾರ ವೇಗ ನೀಡಿದೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಭೇಟಿಯಾಗಿ ಧೈರ್ಯ ತುಂಬಿದ ಕೇಂದ್ರ ಸಚಿವ ಸಿಂಧಿಯಾ ಅದರಂತೆ ರೊಮೇನಿಯಾದ ಬುಕಾರೆಸ್ಟ್​ ತಲುಪಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅಲ್ಲಿನ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಅಲ್ಲದೇ, ಶೀಘ್ರವೇ ತಮ್ಮನ್ನು ತಾಯ್ನಾಡಿಗೆ ಕರೆದೊಯ್ಯಲಾಗುವುದು ಎಂದು ಧೈರ್ಯ ತುಂಬಿದರು.

Read More »

ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಪ್ರಕಾಶ ಅಂತ್ಯ ಸಂಸ್ಕಾರ

ನಿಪ್ಪಾಣಿ: ತುಮಕೂರು ಬಳಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಸಾವಿಗೀಡಾದ, ವಾಯುಸೇನೆಯಲ್ಲಿ ನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕಿನ ಬೆನಾಡಿ ಗ್ರಾಮದ ಪ್ರಕಾಶ ರಾಮಚಂದ್ರ ದೇಶಿಂಗೆ (33) ಅವರ ಅಂತ್ಯಸಂಸ್ಕಾರ ವಾಯುಸೇನೆಯಿಂದ ಸಕಲ ಗೌರವಗಳೊಂದಿಗೆ ಮಂಗಳವಾರ ಸ್ವಗ್ರಾಮದಲ್ಲಿ ನಡೆಯಿತು. ಆಕಾಶದತ್ತ ಗುಂಡು ಹಾರಿಸಿ ವಾಯುಸೇನೆಯ ಸಿಬ್ಬಂದಿ ಪ್ರಕಾಶ ಅವರಿಗೆ ಗೌರವ ಸಲ್ಲಿಸಿದರು. ಅವರ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕುಟುಂಬದವರು ದುಃಖದ ಕಡಲಲ್ಲಿ ಮುಳುಗಿದ್ದಾರೆ.

Read More »

ಪ್ರಧಾನಿ ವಿರುದ್ಧ ಆರೋಪ ಮಾಡಿದ ಡಿಕೆಶಿ

ಕೀವ್ : ಉಕ್ರೇನ್‌ನಲ್ಲಿ ನವೀನ್ ಸಾವಿನ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ತೆರಳಿದ್ದಾರೆ. ನಮ್ಮಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ನಮ್ಮ ಸಾಕಷ್ಟು ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ವಿಶ್ವದ ಇತರೆ ದೇಶಗಳು ತಮ್ಮ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಂಡಿದ್ದರೆ, ನಮ್ಮ ದೇಶದ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ. ಕೇಂದ್ರ ಸರ್ಕಾರ ನಿನ್ನೆಯಷ್ಟೇ …

Read More »

ರಸ್ತೆ ಅಪಘಾತ : ಯುವತಿ ಸಾವು

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ ಸಾವನ್ನಪ್ಪಿದ್ದಾರೆ.ಯುವತಿಯನ್ನು ಗಾಯತ್ರಿ ಪ್ಯೆ ಎಂದು ಗುರುತಿಸಲಾಗಿದ್ದು, ಇವರು ಹುಬ್ಬಳ್ಳಿಯಿಂದ ಆಗಮಿಸುತ್ತಿದ್ದರು. ಅನಂತರ ಹಿಂತಿರುಗುವ ವೇಳೆ ಉಡುಪಿಯಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಪ್ಯೆ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನವೀನ್ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಗಳು ನಡೆಯುತ್ತಿವೆ : ಬೊಮ್ಮಾಯಿ

ಬೆಂಗಳೂರು: ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್ ಜ್ಞಾನಗೌಡ ಎಂಬ ವಿದ್ಯಾರ್ಥಿ ಮೆಟ್ರೋ ನಿಲ್ದಾಣದಿಂದ ಹೊರ ಬರುವಾಗ ಶೆಲ್ ದಾಳಿಗೆ ಬಲಿಯಾಗಿದ್ದಾರೆ.ಮೃತ ನವೀನ್ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ನವೀನ್ ತಂದೆ ಶೇಖರ್ ಗೌಡರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬೊಮ್ಮಾಯಿ ಕುಟುಂಬದವರು ನನಗೆ ಪರಿಚಿತರು ಎಂದರು. ಹಾವೇರಿ ಸಿಎಂ ತವರು ಜಿಲ್ಲೆಯಾಗಿದೆ. ಕುಟುಂಬದವರೊಂದಿಗೆ …

Read More »

ಉಕ್ರೇನ್‌ನಿಂದ 55 ವಿದ್ಯಾರ್ಥಿಗಳು ಕರ್ನಾಟಕಕ್ಕೆ ವಾಪಸ್

ಬೆಂಗಳೂರು: ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಅಡಿಯಲ್ಲಿ ಯುದ್ಧಪೀಡಿತ ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಹಾವೇರಿ ಮೂಲದ ನವೀನ್ ಶೇಖರಪ್ಪ ಗ್ಯಾನಗೌಡರ್ ಎಂಬ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಕರ್ನಾಟಕ ಮೂಲದ 694 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಮಂಗಳವಾರದ ತನಕ 8 ಬ್ಯಾಚ್‌ಗಳಲ್ಲಿ 55 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಈ ಕುರಿತು ಮಾಹಿತಿ ನೀಡಿದೆ.

Read More »

ಕಾರಜೋಳಗೆ ತಿರುಗೇಟು ನೀಡಿದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್‌ ಪಾದಯಾತ್ರೆಯಿಂದ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್‌ ಹೋರಾಟದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಎಂದಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ.ಹಾಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾನೂ ಜಲಸಂಪನ್ಮೂಲ ಸಚಿವನಾಗಿದ್ದೆ. ಅಲ್ಪ ಸ್ವಲ್ಪ ಪರಿಜ್ಞಾನ ಇದೆ. ಗೋವಿಂದ ಕಾರಜೋಳ …

Read More »

ಕಾಂಗ್ರೆಸ್‌- ಜೆಡಿಎಸ್‌ ಪಕ್ಷದ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ : ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್‌- ಜೆಡಿಎಸ್‌ ಇವೆರಡೂ ಪಕ್ಷಗಳ ಜನಹಿತ ಬಯಸುವ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಬೇರೆ ಜಿಲ್ಲೆಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಮತ್ತು ಅವರ ಬೆಂಬಲಿಗರ ಹಾಗೂ ಕಾಂಗ್ರೆಸ್‌ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಅವರ ಸೇರ್ಪಡೆಯಿಂದ …

Read More »

ಉಕ್ರೇನ್ ನಲ್ಲಿ ನಿಧನ ಹೊಂದಿದ ನವೀನ್ ಗೆ ಸಂತಾಪ ಸೂಚಿಸಿದ ಎಚ್ ಡಿಕೆ

ಬೆಂಗಳೂರು: ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್​ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್​ ಮಾಡಿರುವ ಹೆಚ್​ಡಿಕೆ, ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ.ಯುದ್ಧ ದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿ …

Read More »