ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್ಆರ್ಎಸ್ ಮೈದಾನದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ನಡೆದಿದ್ದು, ಸಮಾವೇಶದಲ್ಲಿ ಭಾಷಣ ಮಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು , ಈ ಬಾರಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಉತ್ಸಾಹದಿಂದಾ ಹೇಳಿದರು. ಸಂಡೂರು ಪಟ್ಟಣದಲ್ಲಿರುವ ಎಸ್ಆರ್ಎಸ್ ಮೈದಾನದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಕಾರ್ಯಕರ್ತರ ಹಾಗೂ ಅಭಿಮಾನಿಗಳನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಘೋಷಣೆ ಕೂಗಿದರು. ನಂತರ ಪ್ರತಿಧ್ವನಿಯಾಗಿ …
Read More »BSNL ದಿಂದಾ ರಿಲಾಯನ್ಸ್ ಜಿಯೋಗೆ ಪೋರ್ಟ್, ಸರ್ಕಾರದಿಂದಾ ಆದೇಶ
ರಾಜ್ಯದೆಲ್ಲೆಡೆ ಸರಿಯಾಗಿ ನೆಟ್ವರ್ಕ್ ಸಿಗುತ್ತಿಲ್ಲ ಎಂಬ ಕಾರಣಕ್ಕೆ, ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿರುವ ದಶಕಗಳಿಂದ ಬಳಸುತ್ತಿರುವ ಬಿಎಸ್ಎನ್ಎಲ್ ನಂಬರ್ಗಳನ್ನು ಹಂತ ಹಂತವಾಗಿ ರಿಲಾಯನ್ಸ್ ಜಿಯೋಗೆ ಪೋರ್ಟ್ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಪೊಲೀಸ್ ಇಲಾಖೆಯಲ್ಲಿ ಒಟ್ಟು 38,347 ಬಿಎಸ್ಎನ್ಎಲ್ ನಂಬರ್ ಬಳಸಲಾಗುತ್ತಿದ್ದು , ಪೋರ್ಟ್ ಮಾಡುವ ಮುನ್ನ ಕೆಲವು ಷರತ್ತುಗಳನ್ನು ಪಾಲಿಸಬೇಕೆಂದು ಹೇಳಲಾಗಿದೆ. ಅಲ್ಲದೇ, ಬಾಕಿಯಿರುವ ಹಣ ಪಾವತಿಸಬೇಕು. ಈ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ತಿಳಿಸಲಾಗಿದೆ.
Read More »ನನ್ನ ಸ್ಪರ್ಧೆ ನಿರ್ಧಾರ ಮಾಡೋಕೆ ಅವರ್ಯಾರು? ಬಿಎಸ್ವೈ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಮಾಜಿ ಸಿಎಂ ಯಡಿಯೂರಪ್ಪನವರು ಚುನಾವಣೆಯಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದು, ನಿನ್ನೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ತಮ್ಮ ವಿದಾಯದ ಭಾಷಣ ಮಾಡಿದ್ದಾರೆ. ಬಿಎಸ್ವೈಗೆ ವಯಸ್ಸಾಗಿದೆ ಎಂದು ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿದ್ರು. ಅದಕ್ಕಾಗಿ ಅವರು ವಿದಾಯದ ಭಾಷಣ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಯಡಿಯೂರಪ್ಪನವರಿಗೆ ನನ್ನ ಮೇಲೆ ಪ್ರೀತಿ ಇದೆ. ಅವರಿಗೆ ದೇವರು ಆಯುಷ್ಯ, ಆರೋಗ್ಯ ನೀಡಲೆಂದು ಪ್ರಾರ್ಥಿಸುತ್ತೇನೆ. ಇದೇ ಕಾರಣಕ್ಕೆ ಬಿಎಸ್ವೈ ಬಾದಾಮಿಯಿಂದ ಸ್ಪರ್ಧಿಸಲಿ, ಎಂದು …
Read More »ನಂಬರ್ ಪ್ಲೇಟ್ ಇಲ್ಲದ ಬೈಕ್ ಸವಾರರಿಗೆ ಶಾಕ್
ನಂಬರ್ ಪ್ಲೇಟ್ ಇಲ್ಲದ ಬೈಕ್ ಸೇರಿ ಮಾಡಿಫೈ ಸೈಲೆನ್ಸರ್ ಅಳವಡಿಸಿಕೊಂಡು ಬೇಕ್ಕಾಬಿಟ್ಟಿಯಾಗಿ ತಿರುಗಾಟ ಮಾಡುತ್ತಿದ್ದ ಬೈಕ್ ಸವಾರರ ವಿರುದ್ಧ ಹುಬ್ಬಳ್ಳಿ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಿಸಿಮುಟ್ಟಿಸಿದ್ದಾರೆ. ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ 26 ಬೈಕ್, ದಕ್ಷಿಣ ಸಂಚಾರಿ ಠಾಣೆಯಲ್ಲಿ 8 ಬೈಕ್, ಪೂರ್ವ ಸಂಚಾರಿ ಠಾಣೆಯಲ್ಲಿ 7 ಬೈಕ್ ಹಾಗೂ ಧಾರವಾಡ ಸಂಚಾರಿ ಠಾಣೆಯಲ್ಲಿ 9 ದ್ವಿಚಕ್ರ ವಾಹಮ ಸೇರಿ ಒಟ್ಟು 50 ದೋಷಪೂರಿತ …
Read More »ಮತದಾನ ನಮ್ಮೆಲ್ಲರ ಹಕ್ಕು,ಮತದಾನ ಮಾಡುವುದು ಪವಿತ್ರ ಕೆಲಸ
ಗದಗ ಬೆಟಗೇರಿ ನಗರದ ರೇಲ್ವೆ ನಿಲ್ದಾಣದಲ್ಲಿ ಬುಧವಾರದಂದು ವಿದ್ಯುನ್ಮಾನ ಮತ ಯಂತ್ರದ ಬಗ್ಗೆ ಪ್ರಯಾಣಿಕರು ಸೇರಿದಂತೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುತ್ತಾ ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಿ ಚುನಾವಣಾ ಸೆಕ್ಟರ್ ಅಧಿಕಾರಿ ಶಿವಕುಮಾರ್ ಕುರಿಯವರು ದೇಶದ ಪ್ರಜಾಪ್ರಭುತ್ವ ಬಲಿಷ್ಟಗೊಳಿಸಲು ಎಲ್ಲರೂ ಮತದಾನ ಮಾಡುವುದು ಅವಶ್ಯವಾಗಿದೆ ಎಂದು ತಿಳಿಸಿದರು. ಮತದಾನ ನಮ್ಮೆಲ್ಲರ ಹಕ್ಕು ಹಾಗೂ ಮತದಾನ ಮಾಡುವುದು ಪವಿತ್ರ ಕೆಲಸವಾಗಿದೆ. ಅರ್ಹ ಮತದಾರರು ಮತದಾನದಿಂದ ವಂಚಿತರಾಗದೇ ಮತ ಚಲಾಯಿಸಬೇಕು. ಇ.ವಿ.ಎಂ. ಹಾಗೂ …
Read More »ರಾಜ್ಯಮಟ್ಟದ ಚಕ್ಕಡಿ ಖಾಲಿ ಗಾಡಾ ಓಡಿಸುವ ಸ್ಪರ್ಧೆ
ಪ್ರತಿ ವರ್ಷದಂತೆ ಈ ವರ್ಷವು ಕುಂದಗೋಳ ರೈತ ಸಮಾಜ ಬಾಂಧವರಿಂದ ಫೆ.25 ರಂದು ಶನಿವಾರ ರಾಜ್ಯಮಟ್ಟದ ಚಕ್ಕಡಿ ಖಾಲಿ ಗಾಡಾ ಓಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಕುಂದಗೋಳ ಮೂರಂಗಡಿ ಕೂಟ ಮಾರುತಿ ಸಮಿತಿ ತಿಳಿಸಿದೆ. ಈ ಚಕ್ಕಡಿ ಖಾಲಿಗಾಡಾ ಸ್ಪರ್ಧೆಯನ್ನು, ಈ ಬಾರಿ ಕುಂದಗೋಳ ಪಟ್ಟಣದ ಹೊರವಲಯದ ದೇವನೂರು ರಸ್ತೆಯಲ್ಲಿ ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ,ದ್ವೀತಿಯ ಬಹುಮಾನ 40 ಸಾವಿರ ,ತೃತೀಯ ಬಹುಮಾನ 30 ಸಾವಿರ …
Read More »ಹೃದಯದ ಮೇಲೆ ಬೃಹದಾಕಾರದ ಗಡ್ಡೆ, ಹುಬ್ಬಳ್ಳಿ ಕಿಮ್ಸ್ ವೈದ್ಯರಿಂದಾಗಿ ಪ್ರಾಣಾಪಾಯದಿಂದ ಪಾರಾದ ಬಡ ಮಹಿಳೆ
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಚಿತ್ರ ಕಾಯಿಲೆಗಳಿಂದ ಜನರು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಈಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಇಂತಹದೇ ಒಂದು ವಿಚಿತ್ರ ಕಾಯಿಲೆಗೆ ಯಶಸ್ವಿ ಚಿಕಿತ್ಸೆ ನೀಡದ್ದಾರೆ.ಅದು ಸಾಮಾನ್ಯ ಕಾಯಿಲೆ ಆಗಿರಲಿಲ್ಲ.ಕೆಲ ಕ್ಷಣ ಉಸಿರಾಟವೇ ನಿಂತು ಹೋಗಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವಿನ ಕದ ತಟ್ಟಿದ್ರು. 10 ಲಕ್ಷ ಜನರಲ್ಲಿ ಕಾಣಸಿಕೊಳ್ಳೋ ಈ ವಿರಳ ಕಾಯಿಲೆಗೆ ಅವರು ತುತ್ತಾಗಿದ್ದು ಬಹಳ ವಿಚಿತ್ರ. ಖಾಸಗಿ ಆಸ್ಪತ್ರೆಯಲ್ಲಿ ಕಾಯಿಲೆ ವಾಸಿ …
Read More »ರೈತನೊಬ್ಬ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಕುಂದಗೋಳ ತಾಲೂಕಿನ ಬು.ತರ್ಲಘಟ್ಟದಲ್ಲಿ ರೈತನೊರ್ವ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಂಡುಬಂದಿದೆ.ರೈತ ಫಕ್ಕೀರಯ್ಯ ಗುರುನಂಜಯ್ಯ ಸಂಶಿಮಠ ಸುಮಾರು 5 ಲಕ್ಷ ರೂಪಾಯಿ ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಾಲ ತೀರಿಸಲಾಗದೆ ಇಂದು ಬು.ತರ್ಲಘಟ್ಟ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಘಟನೆಗೆ ಸಂಬಂಧಿಸಿದಂತೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Read More »ದೇವೇಗೌಡ ಕುಟುಂಬದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳಬೇಕೆಂದು ಸಂವಿಧಾನದಲ್ಲಿ ಏನಾದ್ರೂ ಬರೆದಿದೆಯಾ, ಸಂವಿಧಾನದಲ್ಲಿ ಪ್ರಜೆಗಳಿಂದ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಅಂತ ಇದೆ. ಆದರೆ ಇವರು ತಿಳಿದುಕೊಂಡಿರೋದು ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಕ್ಕೋಸ್ಕರ ಅನ್ಕೊಂಡಿದ್ದಾರೆ ಅಂತಾ ಮಂಡ್ಯದಲ್ಲಿ ಹೆಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ಧ ವಿಧಾನಸಭೆಯಲ್ಲಿ ಯಡಿಯೂರಪ್ಪ ವಾಗ್ದಾಳಿ. ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಗೆಲ್ಲುವ ವಿಶ್ವಾಸ ಇಲ್ಲ. ಹಾಗಾಗಿ ಕ್ಷೇತ್ರ ಹುಡುಕಾಟ ನಡೆಸಿದ್ದಾರೆ ಎಂದ ಯಡಿಯೂರಪ್ಪ. ಎಲ್ಲೇ ನಿಂತರೂ ಗೆಲ್ತೇನೆ ಅಂತಾ ಸಿದ್ದರಾಮಯ್ಯ ಹೇಳುತ್ತಾರೆ. ಹಾಗಿದ್ರೆ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ಸೋತ್ರು. ಸಿದ್ದರಾಮಯ್ಯ ಮತ್ತೆ ಬಾದಾಮಿ ಕ್ಷೇತ್ರಕ್ಕೆ ಯಾಕೆ ಹೋಗ್ತಿಲ್ಲ ಎಂದು ವ್ಯಂಗವಾಗಿ ಮಾತನಾಡಿದ ಬಿಎಸ್ ಯಡಿಯೂರಪ್ಪ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ. ವಿಧಾನಸಭೆಯಲ್ಲಿ ಮಾಜಿ ಸಿಎಂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





