Breaking News

admin

ಟಿಡಿಪಿ ಮುಖಂಡ ಯದ್ಲಪತಿ ವೆಂಕಟ ರಾವ್‌ ನಿಧನ

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಯದ್ಲಪತಿ ವೆಂಕಟ ರಾವ್‌ ಹೈದರಾಬಾದ್‌ನಲ್ಲಿ ಸೋಮವಾರ ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನಲ್ಲಿರುವ ಅವರ ಪುತ್ರಿಯ ಮನೆಯಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

Read More »

ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು. ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಬೆಳಗ್ಗೆ ಕೊನೆಯುಸಿರೆಳೆದರು.

Read More »

ಜೂನ್‌ ಅಂತ್ಯದಲ್ಲಿ 4ನೇ ಕೋವಿಡ್ ಅಲೆ ಪ್ರಾರಂಭ

ಹೈದರಾಬಾದ್‌ : ದೇಶದಲ್ಲಿ ಕೋವಿಡ್‌ 3ನೇ ಅಲೆ ಇನ್ನೇನು ಅಂತ್ಯಕ್ಕೆ ಸಮೀಪಿಸಿದೆ ಅನ್ನುವಷ್ಟರಲ್ಲೇ, 2022ರ ಜೂನ್‌ ಅಂತ್ಯದ ವೇಳೆಗೆ ದೇಶದ ಮೇಲೆ ಸೋಂಕಿನ 4ನೇ ದಾಳಿಯ ಸಾಧ್ಯತೆ ಇದೆ ಎಂದು ಐಐಟಿ ಕಾನ್ಪುರದ ತಜ್ಞರ ತಂಡ ಎಚ್ಚರಿಸಿದೆ. ಒಂದು ವೇಳೆ 4ನೇ ಅಲೆ ಕಾಣಿಸಿಕೊಂಡಿದ್ದೇ ಆದಲ್ಲಿ ಅದರ ಪರಿಣಾಮಗಳು, ಆಗ ಹುಟ್ಟಿಕೊಳ್ಳಬಹುದಾದ ಹೊಸ ರೂಪಾಂತರಿಯ ತೀವ್ರತೆ, ಕೋವಿಡ್‌ ಲಸಿಕೆ ವಿತರಣೆಯ ಸ್ಥಿತಿಗತಿ, ಬೂಸ್ಟರ್‌ ಡೋಸ್‌ ನೀಡಿಕೆ ಅವಲಂಬಿಸಿರುತ್ತದೆ ಎಂದು ಹೇಳಿದೆ. …

Read More »

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಹಿನ್ನೆಲೆ ಸಭೆ ಕರೆದ ಮೋದಿ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಮುಂದುವರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸತತ 2 ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ಮೋದಿ, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕುರಿತು ಚರ್ಚೆ ನಡೆಸಿದ್ದಾರೆ. ತ್ವರಿತಗತಿಯಲ್ಲಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉಕ್ರೇನ್‌ನ ನೆರೆಯ ರಾಷ್ಟ್ರಗಳ ಸಹಕಾರಕ್ಕೆ ಕೂಡ ಸೂಚನೆ ನೀಡಿದ್ದಾರೆ.

Read More »

ಶಿವಮೊಗ್ಗದಲ್ಲಿ ಇಂದಿನಿಂದ ಶಾಲೆ ಕಾಲೇಜ್ ಪ್ರಾರಂಭ

ಶಿವಮೊಗ್ಗ: ಹಿಜಾಬ್‌ ವಿವಾದ, ಕರ್ಫ್ಯೂ ಹಿನ್ನೆಲೆಯಲ್ಲಿ 15 ದಿನದಿಂದ ಶಿವಮೊಗ್ಗ ನಗರದಲ್ಲಿ ಬಂದ್‌ ಆಗಿದ್ದ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭ ಗೊಳ್ಳಲಿದೆ. ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಕೆಲ ಕಾಲೇಜುಗಳಲ್ಲಿ ಕಲ್ಲು ತೂರಾಟ, ಭಗವಾಧ್ವಜ ಹಾರಾಟ ವಿವಾದ ನಡೆದಿತ್ತು. ಹಲವೆಡೆ ಘರ್ಷಣೆಗಳು ಕೂಡ ನಡೆದಿದ್ದವು. ವಿದ್ಯಾರ್ಥಿನಿಯರು ಹಿಜಾಬ್‌ಗ ಅವಕಾಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಕೂಡ ನಡೆಸಿದ್ದರು. ಇದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿಭಂಗವಾಗಿತ್ತು. ಇದನ್ನು ಹತೋಟಿಗೆ ತರಲು ಕೆಲ ದಿನ ಶಾಲೆಗಳಿಗೆ ರಜೆ …

Read More »

ವಾಣಿಜ್ಯ ನಗರಿಗೆ ಸಚಿವ ನಿತಿನ್ ಗಡ್ಕರಿ ಆಗಮನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬೈಪಾಸ್‌ ಷಟ್ಫಥ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಸೋಮವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ನಗರಕ್ಕೆ ಬರಲಿದ್ದಾರೆ. ಗಬ್ಬೂರಿನ ಟ್ರಕ್‌ ಟರ್ಮಿನಲ್‌ನಲ್ಲಿ ಮಧ್ಯಾಹ್ನ 1.30ಕ್ಕೆ ಕಾರ್ಯಕ್ರಮ ಆಯೋಜನೆಯಾಗಿದೆ. ಇದೇ ವೇಳೆ ಧಾರವಾಡದ ಕ್ಷೇತ್ರ ಸಂಪರ್ಕ ಕಾರ್ಯಾಲಯದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವರು.

Read More »

ಬಿಡದಿ ನಗರಕ್ಕೆ ತಲುಪಿದ ಮೇಕೆದಾಟು ಪಾದಯಾತ್ರೆ

ರಾಮನಗರ : ಮೊದಲ ದಿನದ ಮೇಕೆದಾಟು ಪಾದಯಾತ್ರೆ ರೇಷ್ಮೆ ನಗರಿ ರಾಮನಗರದಿಂದ ಆರಂಭವಾಗಿ 16 ಕಿ.ಮಿ. ಸಂಚರಿಸಿ ಬಿಡದಿ ನಗರ ತಲುಪಿದೆ. ಮೊದಲ ದಿನದ ಮೇಕೆದಾಟು ಪಾದಯಾತ್ರೆ ಯಶಸ್ವಿಮೊದಲ ದಿನದಲ್ಲಿ ಹೊರಟ ಪಾದಯಾತ್ರೆಯು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿತು. ಜಾನಪದ ಕಲಾ ತಂಡಗಳು ಕೂಡ ಪಾದಯಾತ್ರೆಗೆ ಸಾಥ್ ನೀಡಿದ್ದವು. ನಂತರ ಮಧ್ಯಾಹ್ನ ಮಾಯಗನಹಳ್ಳಿಯಲ್ಲಿ ಭೋಜನ ಮುಗಿಸಿದ ಮುಖಂಡರು, ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಪಾದಯಾತ್ರೆ ಮುಂದುವರೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ …

Read More »

ರಾಜ್ಯದಲ್ಲಿ 366 ಕೊರೋನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 27) ಹೊಸದಾಗಿ 366 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,40,795 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,94,333 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,936 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,488 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು …

Read More »

ಉಕ್ರೇನ್‌ನಲ್ಲಿರುವ ಭಾರತೀಯರ ಸುರಕ್ಷಿತ ಸ್ಥಳಾಂತರ ಕಾರ್ಯ ಆರಂಭಗೊಂಡಿದೆ : ಮೋದಿ

ಉತ್ತರಪ್ರದೇಶ :ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರ ಸುರಕ್ಷಿತ ಸ್ಥಳಾಂತರ ಕಾರ್ಯ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ಭಾರತೀಯರನ್ನು ಸುರಕ್ಷಿತವಾಗಿ ಕರೆ ತರಲು ಅವಿರತ ಶ್ರಮ ವಹಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿದ ಅವರು, ಈ ವಿಚಾರ ತಿಳಿಸಿದ್ದಾರೆ. ನಾಗರಿಕ ವಿಮಾನ ಕಾರ್ಯಾಚರಣೆಗಳಿಗಾಗಿ ಉಕ್ರೇನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಸ್ಥಳಾಂತರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದರು. ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ದೇಶವನ್ನು ‘ಆತ್ಮನಿರ್ಭರ್’ ಮಾಡುವ ಮೂಲಕ ಬಲಪಡಿಸುವ ಸಮಯ ಬಂದಿದೆ …

Read More »

ಪ್ರತಿಯೊಬ್ಬರಿಗೆ ಮಾತೃ ಭಾಷೆಯನ್ನು ಹೆಮ್ಮೆಯಿಂದ ಬಳಸಬೇಕು: ಮೋದಿ

ನವದೆಹಲಿ: ಪ್ರತಿಯೊಬ್ಬರು ತಮ್ಮ ಮಾತೃ ಭಾಷೆಯನ್ನು ಹೆಮ್ಮೆಯಿಂದ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಅಲ್ಲದೆ ಇಂಥ ಬೆಳವಣಿಗೆಯು, ಇಡೀ ಹೊಸ ತಲೆಮಾರಿಗೆ ಮತ್ತು ಇಡೀ ಜಗತ್ತಿಗೆ ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ಪರಿಚಯಿಸುತ್ತದೆ ಎಂದು ಹೇಳಿದ್ದಾರೆ. ಮಾಸಿಕ ‘ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಸ್ವಾತಂತ್ರ್ಯಾನಂತರದ 75 ವರ್ಷಗಳ ನಂತರವೂ ತಮ್ಮ ಭಾಷೆ, ವಸ್ತ್ರ, ಆಹಾರ ಮತ್ತು ಪಾನೀಯಗಳ ಹಿರಿಮೆ ಬಗೆಗಿನ ಗೊಂದಲ ಮತ್ತು …

Read More »