ಬಸ್ತಿ: ‘ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್ಪಿಯು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್ಪಿ ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ ಎಂದು ಹೇಳಿದ್ದರು. ಬಿಎಸ್ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಈ ಎರಡೂ ಹೇಳಿಕೆಗಳ …
Read More »ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಫೆ. 28ರವರೆಗೆ ವಿಸ್ತರಣೆ : ಡಾ.ಸೆಲ್ವಮಣಿ
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ನಿಯಂತ್ರಿಸೋದಕ್ಕಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಫೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಫೆಬ್ರವರಿ 28ರ ಬೆಳಿಗ್ಗೆ 9 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
Read More »ವಕೀಲ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಕೆ
ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ʼಭ್ರಷ್ಟಾಚಾರದ ವಿರುದ್ಧ ನಾವುʼ ವೇದಿಕೆ ಅಡಿ ಪ್ರತಿಭಟನೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಮತ್ತು ಇತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ …
Read More »ಯುದ್ಧಪೀಡಿತ ಉಕ್ರೇನ್ನಲ್ಲಿ ರಾಜ್ಯದ 346 ವಿದ್ಯಾರ್ಥಿಗಳು ಬಂಧನ
ಬೆಂಗಳೂರು: ಯುದ್ಧಪೀಡಿತ ಉಕ್ರೇನ್ನಲ್ಲಿ ಇಲ್ಲಿಯವರೆಗೂ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರ ಮನೋಜ್ ರಂಜನ್ ತಿಳಿಸಿದ್ದಾರೆ. ಉಕ್ರೇನ್ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, ಸಂಬಂಧಿಕರು, ಸ್ನೇಹಿತರ ಬಳಗದಿಂದ ಕರೆಗಳು ಬರುತ್ತಿವೆ. ಆ ಆಧಾರದಲ್ಲಿ ಉಕ್ರೇನ್ನಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬಹುದು …
Read More »ಹರ್ಷ ಹತ್ಯೆಗೆ ಬಳಸಿದ್ದ ಎರಡು ಕಾರುಗಳ ಜಪ್ತಿ
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಬಳಸಿದ್ದ ಎರಡು ಕಾರುಗಳನ್ನು ತನಿಖಾ ತಂಡ ಶುಕ್ರವಾರ ಜಪ್ತಿ ಮಾಡಿದೆ. ಹಂತಕರು ಹತ್ಯೆ ಮಾಡುವ ಮೊದಲು ಒಂದು ಕಾರು, ನಂತರ ಅಲ್ಲಿಂದ ಪರಾರಿಯಾಗಲು ಮತ್ತೊಂದು ಕಾರು ಬಳಸಿರುವುದು ತನಿಖೆಯಿಂದ ದೃಢಪಟ್ಟಿದೆ. ಜಾರ್ಖಂಡ್ ರಾಜ್ಯದಲ್ಲಿ ನೋಂದಣಿಯಾದ ಸಂಖ್ಯಾಫಲಕ ಇರುವ ಬಿಳಿ ಬಣ್ಣದ ಸ್ವಿಫ್ಟ್ ಕಾರನ್ನು ಹಾಗೂ ಬೆಂಗಳೂರಿನ ಕೆಂಗೇರಿಯ ನೋಂದಣಿ ವಿಳಾಸ ಹೊಂದಿರುವ ಕೆಂಪು ಬಣ್ಣದ ಹುಂಡೈ ಐ-20 ಕಾರನ್ನು ಬಳಸಿದ್ದಾರೆ. ಹತ್ಯೆಯ ದಿನ …
Read More »ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು: ಹಿಜಾಬ್ ವಿವಾದದ ಕುರಿತಂತೆ ನ್ಯಾಯಾಧೀಶರನ್ನು ನಿಂಧಿಸಿ, ಫೇಸ್ ಬುಕ್ ನಲ್ಲಿ ಮಾಡಿದ ಆರೋಪದಲ್ಲಿ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಟ ಚೇತನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಂದು ಆ ದಿನಗಳ ಖ್ಯಾತಿಯ ನಟ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನಗರದ 32ನೇ ಎಸಿಎಂಎಂ ಕೋರ್ಟ್ ನ ನ್ಯಾಯಾದೀಶ ಮಧುಕರ್ ನೆಲಕುಂದ್ರೆ ಅವರು, ನಟ ಚೇತನ್ ಗೆ 1 ಲಕ್ಷ …
Read More »ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ವೆಬ್ ಪೋರ್ಟಲ್ ಪ್ರಾರಂಭ
ಬೆಂಗಳೂರು : ಉಕ್ರೇನ್-ರಷ್ಯಾ ಬಿಕ್ಕಟ್ಟು ತೀವ್ರವಾಗಿದ್ದು, ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕುರಿತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನೋಜ್ ರಾಜನ್ ಮಾಹಿತಿ ನೀಡಿದ್ದು, ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ http://ukraine.karnataka.tech ವೆಬ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ವೆಬ್ ಪೋರ್ಟಲ್ ಮೂಲಕ ಯುದ್ಧಪೀಡಿತ …
Read More »ಬೆಳಗ್ಗೆಯಿಂದಲೂ ಸಿಡಿಯುತ್ತಿರುವ ಬಾಂಬ್ಗಳ ಸದ್ದು ನಮ್ಮನ್ನು ಆತಂಕಕ್ಕೆ ತಳ್ಳಿದೆ
ಬಾಗಲಕೋಟೆ : ಸೋಮವಾರ ರಾತ್ರಿ ರಷ್ಯಾ ದೇಶ ಯುದ್ಧ ಘೋಷಿಸುತ್ತಿದ್ದಂತೆ ಉಕ್ರೇನ್ ಅಕ್ಷರಶಃ ನಲುಗಿದ್ದು, ಅಲ್ಲಿರುವ ಭಾರತೀಯರ ಪೈಕಿ ಕರ್ನಾಟಕದ 135 ವಿದ್ಯಾರ್ಥಿಗಳು ಕಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ (ಕೆಎನ್ಎಂಯು) ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲರ ಸುರಕ್ಷತೆ ಬಗ್ಗೆ ಪಾಲಕರಲ್ಲಿ ಆತಂಕ ಮೂಡಿದೆ. ಸದ್ಯದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆಯ 22 ಜನ ಉಕ್ರೇನ್ನಲ್ಲಿದ್ದು, ಅವರೆಲ್ಲರಿಗೂ ಅಪಾಯ ಎದುರಾಗದಿರಲಿ ಎಂಬ ಪ್ರಾರ್ಥನೆ ಎಲ್ಲರದಾಗಿದೆ. ಮಗಳು ಫೋನ್ನಲ್ಲಿ ಮಾತನಾಡುತ್ತಲೇ ಸೈರನ್ ಸದ್ದು ಆಯಿತು. …
Read More »ಸುಟ್ಟ ಸ್ಥಿತಿಯಲ್ಲಿ ಸೆಕ್ಯುರಿಟಿ ಗಾರ್ಡ್ ಮೃತ ದೇಹ ಪತ್ತೆ
ಹುಬ್ಬಳ್ಳಿ : ಸೆಕ್ಯುರಿಟಿ ಗಾರ್ಡ್ ಓರ್ವರ ಮೃತ ದೇಹ ಭೀಕರವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಐಟಿ ಪಾರ್ಕ್ ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿಯದಲ್ಲಿ ನಡೆದಿದೆ. ಮೃತ ದುರ್ದೈವಿ ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಎಂದು ತಿಳಿದು ಬಂದಿದ್ದು, ಇತ ಮೂಲತಃ ಕುಂದಗೋಳ ತಾಲೂಕಿನ ಹಿತೇನರ್ತಿ ಗ್ರಾಮದ ನಿವಾಸಿಯಾಗಿದ್ದ, ಸದ್ಯ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಪತ್ನಿ ಹಾಗೂ ಇಬ್ಬರ ಮಕ್ಕಳೊಂದಿಗೆ ವಾಸವಾಗಿದ್ದ …
Read More »ಉಕ್ರೇನ್ ನಲ್ಲಿ ಬಾಂಬ್ ಸ್ಫೋಟ : ಧಾರವಾಡ ವಿದ್ಯಾರ್ಥಿನಿ ಚೈತ್ರಾ ಸುರಕ್ಷಿತ
ಹುಬ್ಬಳ್ಳಿ: ಉಕ್ರೇನ್ನಲ್ಲಿ ಕಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ಮೂರನೇ ವರ್ಷ ಓದುತ್ತಿದ್ದ, ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿ ಸುರಕ್ಷಿತವಾಗಿದ್ದಾರೆ. ಕಾರ್ಕಿವ್ ವಿ.ವಿ. ಒಂದು ಕಿ.ಮೀ. ಸಮೀಪದಲ್ಲಿ ದಾಳಿ ನಡೆದಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಪ್ರತಿ ಕ್ಷಣವನ್ನು ಕಳೆಯುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





