ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗು ಗಾಯಕನಾಗಿರುವ ರಘು ದೀಕ್ಷಿತ್ ಅವರ ತಾಯಿ ವಿಧಿವಶರಾಗಿದ್ದಾರೆ. ಸದ್ಯ ರಘು ದೀಕ್ಷಿತ್ ತಂಡ ದುಬೈನಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನ ನೀಡುತ್ತಿದೆ. ಮ್ಯೂಸಿಕ್ ಶೋ ಮುಗಿಯುತ್ತಿದ್ದಂತೆಯೇ ರಘು ದೀಕ್ಷಿತ್ ದುಬೈನಿಂದ ಭಾರತಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಘು ದೀಕ್ಷಿತ್ ಮೈಸೂರಿನಲ್ಲಿರುವ ಮನೆಗೆ ತೆರಳಲಿದ್ದಾರೆ. ಮೈಸೂರಿನಲ್ಲಿ ರಘು ದೀಕ್ಷಿತ್ ತಾಯಿ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
Read More »ಹರ್ಷ ದೇಶಕ್ಕೋಸ್ಕರ ಬಂದ ದೇಶಕ್ಕೋಸ್ಕರ ಹೋದ
ಶಿವಮೊಗ್ಗ: ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರು ಸುದ್ದಿಗೋಷ್ಠಿ ನಡೆಸಿ, ಸಾಂತ್ವನ ಹೇಳಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ತಂದೆ, ತಾಯಿ ಹಾಗು ಅಕ್ಕ ಈ ವೇಳೆ ಮಾತನಾಡಿದರು. ‘ನನಗೇನು ಮಾಡಬೇಕು, ಹೇಳಬೇಕು ಗೊತ್ತಾಗ್ತಿಲ್ಲ. ಹರ್ಷ ದೇಶಕ್ಕೋಸ್ಕರ ಬಂದ ದೇಶಕ್ಕೋಸ್ಕರ ಹೋದ. ಎಲ್ಲರಲ್ಲೂ ಹರ್ಷನನ್ನು ಕಾಣುತ್ತಿದ್ದೇನೆ. ಎಲ್ಲರಿಗೂ ನಾವು ಚಿರಋಣಿ’ ಎಂದು ತಾಯಿ ಪದ್ಮ ಭಾವುಕರಾದರು. ‘ಎಲ್ಲ ಅಣ್ಣ-ತಮ್ಮಂದಿರಲ್ಲಿ ನನ್ನ ಸಹೋದರನನ್ನು ಕಾಣುತ್ತಿದ್ದೇವೆ. ನಮ್ಮ ಮೇಲೆ ಪ್ರೀತಿ ತೋರುತ್ತಿರುವುದಕ್ಕೆ ನಿಮಗೆಲ್ಲ …
Read More »ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ
ಮುಂಬೈ: ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿದ ಬೆನ್ನಲ್ಲೇ ಭಾರತದ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡುಬಂದಿದೆ. ಮುಂಬೈ ಷೇರು ಸೂಚ್ಯಂಕ 1,457 ಅಂಶಗಳಷ್ಟು ಕುಸಿದಿದ್ದು, 55,774 ಅಂಶಗಳಲ್ಲಿ ವಹಿವಾಟು ಆರಂಭಿಸಿತು. ನಿಫ್ಟಿ 391 ಅಂಶ ಕುಸಿತ ಕಂಡು, 16,671 ಅಂಶಗಳಲ್ಲಿ ವಹಿವಾಟು ಆರಂಭಿಸಿತು. ಆರಂಭಿಕ ವಹಿವಾಟಿನಲ್ಲಿ. ಸೆನ್ಸೆಕ್ಸ್ ಮತ್ತು ನಿಫ್ಟಿಯ ಎಲ್ಲಾ ಷೇರುಗಳು ಕೆಂಪು ಬಣ್ಣದಲ್ಲಿ ವಹಿವಾಟು ಆರಂಭಿಸಿದವು. ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ …
Read More »ಆಫ್ಲೈನ್ ಪರೀಕ್ಷೆಗಳನ್ನು ಸಲ್ಲಿಕೆ ಮನವಿಗೆ ಸುಪ್ರೀಂ ಕೋರ್ಟ್ ನಿರಾಕರಣೆ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ಹಾಗೂ ಇತರ ಶಿಕ್ಷಣಾ ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಯ ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠವು, ‘ಈರೀತಿಯ ಅರ್ಜಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಸುಳ್ಳು ಭರವಸೆಗಳನ್ನು ಮೂಡಿಸುವುದರ ಜತೆಗೆ ಗೊಂದಲಗಳನ್ನು ಮೂಡಿಸುತ್ತದೆ’ ಎಂದು ಹೇಳಿತು.
Read More »ನಿವೃತ್ತ ಸರ್ಕಾರಿ ನೌಕರರಿಗೆ ಬಿಗ್ ಶಾಕ್
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ, ಮರಣೋತ್ತರ ಸರ್ಕಾರಿ ನೌಕರರ ತಡವಾಗಿ ಪಾವತಿಯಾದ ಪಿಂಚಣಿ, ಉಪದನ ಹಾಗೂ ಗಳಿಕ ರಜೆ ನಗದೀಕರಣಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಲಾಗಿದೆ. ಶೇ.8ರಷ್ಟಿದ್ದಂತ ಬಡ್ಡಿದರವನ್ನು ಪರಿಷ್ಕರಿಸಿ ಶೇ.5.4ಕ್ಕೆ ನಿಗದಿ ಪಡಿಸಲಾಗಿದೆ. ಈ ಮೂಲಕ ನಿವೃತ್ತಿ, ಮರಣೋತ್ತರ ಸೌಲಭ್ಯಗಳ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಸೇವೆಯಿಂದ ನಿವೃತ್ತಿ ಹೊಂದಿದ …
Read More »ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು : ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು ಹಾಗೂ ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳು ಇಲ್ಲ ಎಂಬುದರ ಸೂಚಕವಾಗಿವೆ. ಅನೇಕ ಕಡೆ ಕೇಂದ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಸೂಚನೆಗಳನ್ನು ಮಂಡಿಸಿದ ಬಿಜೆಪಿಯ ಶಾಸಕರು ಮೋದಿಯವರನ್ನು ಮತ್ತು ಕೇಂದ್ರದ ಯೋಜನೆಗಳನ್ನು ಶ್ಲಾಘಿಸುವುದಕ್ಕಷ್ಟೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕಳಪೆ …
Read More »ಹರ್ಷ ಕೊಲೆ ಪ್ರಕರಣ ಸಂಬಂಧಿಸಿದಂತೆ ನನ್ನನ್ನೂ ಬಂಧಿಸಲಿ : ಡಿಕೆಶಿ ಸವಾಲು
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕ ಹರ್ಷ ಕೊಲೆಗೆ ನನ್ನ ಪ್ರಚೋದನೆ ಇದೆ ಎಂದು ಸಚಿವರು ಹೇಳಿದ್ದಾರೆ. ಹೀಗಾಗಿ ನನ್ನನ್ನೂ ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ಟ್ವೀಟರ್ ಖಾತೆ ಮೂಲಕ ತಮ್ಮ ಹೇಳಿಕೆ ದಾಖಲಿಸಿರುವ ಅವರು, ಹರ್ಷ ಕೊಲೆಯಲ್ಲಿ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆಯೂ ಇದೆ ಎಂದು ಹೇಳಿರುವುದರಿಂದ ನನ್ನನ್ನೂ ಬಂಧಿಸಲಿ ಎಂದು ಹೇಳಿದರು. ಇನ್ನು ಸಚಿವರೇ ನಿಷೇಧಾಜ್ಞೆ ಮುರಿದು ಪಾರ್ಥಿವ …
Read More »ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ ಸಿಎಂ
ಬೆಂಗಳೂರು: ಕಾಂಗ್ರೆಸ್ನವರು ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರ ನೀತಿ ಪಾಠ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು, …
Read More »ಕೋವಿಡ್ ಲಸಿಕೆ ವಿತರಣೆಯಲ್ಲಿ ಕರ್ನಾಟಕ ಮತ್ತೊಂದು ಸಾಧನೆ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೋವಿಡ್ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ.5.21 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಅವರಲ್ಲಿ 4.69 ಕೋಟಿ ಮಂದಿ ಎರಡನೇ ಡೋಸ್ ಹಾಗೂ …
Read More »ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಲು ಹಿಂದೇಟು : ರಿಯಾಜ್ ಅಹಮದ್ ಆರೋಪ
ಶಿವಮೊಗ್ಗ: ‘ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಸಚಿವ ಕೆ.ಎಸ್. ಈಶ್ವರಪ್ಪ, ನಗರ ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ ಅವರು ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಒಂದು ಸಮುದಾಯದ ಜೀವಿಸುವ ಹಕ್ಕನ್ನೇ ಕಿತ್ತುಕೊಳ್ಳುವಂತೆ ಅಪಪ್ರಚಾರ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕೋರಿ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದೇವೆ. ಆದರೆ, ಎಫ್ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಶಿವಮೊಗ್ಗ ಪೀಸ್ ಆರ್ಗನೈಶೇಷನ್ ಅಧ್ಯಕ್ಷ ರಿಯಾಜ್ ಅಹಮದ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





