Breaking News

admin

ಹರ್ಷ ಕುಟುಂಬಕ್ಕೆ ಶಾಸಕರಿಂದ ನೆರವು

ಮಲ್ಪೆ: ಶಿವಮೊಗ್ಗದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಭೇಟಿ ನೀಡಿ ತಾಯಿ ಹಾಗೂ ಕುಟುಂಬಸ್ಥರನ್ನು ಸಂತೈಸಿದರು. ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಮೊತ್ತದ ಚೆಕ್‌ ನೀಡಿದ್ದಲ್ಲದೆ ಸಂಕಷ್ಟದ ಸಂದರ್ಭದಲ್ಲಿ ಸಮಸ್ತ ಹಿಂದೂ ಸಮಾಜ ಕುಟುಂಬದ ಜತೆ ನಿಲ್ಲುವ ಭರವಸೆ ನೀಡಿದರು..

Read More »

ಮಾ. 24ರಂದು ಕಲಬುರಗಿ ಪ್ರಧಾನಿ ಭೇಟಿ

ಕಲಬುರಗಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸ್ವಾಮಿತ್ವ ಹಕ್ಕುಪತ್ರ ವಿತರಣೆ’ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 24ರಂದು ಕಲಬುರಗಿ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ‘ರಾಜ್ಯದ ಶಿವಮೊಗ್ಗ, ವಿಜಯನಗರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸ್ವಾಮಿತ್ವ ಹಕ್ಕುಪತ್ರ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ.ಕಲಬುರಗಿ ತಾಲ್ಲೂಕಿನ ಭೀಮಳ್ಳಿ ಗ್ರಾಮದಲ್ಲಿ ಕೂಡ ಈ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಪ್ರಧಾನಿ ಭೇಟಿಯ ಬಗ್ಗೆ ನಮಗೆ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಯಶವಂತ್‌ ಗುರುಕರ್‌ ತಿಳಿಸಿದ್ದಾರೆ.

Read More »

ಕಾಂಗ್ರೆಸ್‌ಗೆ ಸವಾಲು ಹಾಕಿದ ಸಿಎಂ

ವಿಧಾನ ಪರಿಷತ್ತು: “ನೀವು ಈಗ ನಡೆಸುತ್ತಿರುವ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯವನ್ನು ಇಟ್ಟುಕೊಂಡೇ ಜನರ ಮುಂದೆ ಬನ್ನಿ. ನಾವು ಅಭಿವೃದ್ಧಿ ಮಂತ್ರದೊಂದಿಗೆ ಬರುತ್ತೇವೆ. ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಸವಾಲು ಹಾಕಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಮಂಡನೆ ವೇಳೆ ಮಾತನಾಡಿದ ಅವರು, “ರಾಜಕೀಯ ಲಾಭಕ್ಕಾಗಿ ನೀವು (ಕಾಂಗ್ರೆಸ್‌) ಅಧಿವೇಶನದಲ್ಲಿ ಈ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೀರಿ. ವಾಸ್ತವವಾಗಿ ಸಚಿವರು ಹೇಳಿದೆ …

Read More »

ಈಶ್ವರಪ್ಪ ಸಂಪುಟದಿಂದ ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಕೇಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವ ಹೇಳಿಕೆ ನೀಡಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕಾಂಗ್ರೆಸ್‌ ಶಾಸಕರ ನಿಯೋಗವು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲ ತಾವರಚಂದ್‌ ಗೆಹ್ಲೋತ್‌ ಅವರಿಗೆ ಮನವಿ ಸಲ್ಲಿಸಿತು.

Read More »

ಕಾಂಗ್ರೆಸ್ ಪಕ್ಷ ವಿರುದ್ದ ವಾಗ್ದಾಳಿ ನಡೆಸಿದ ಸಿಎಂ

ಬೆಂಗಳೂರು: ರಾಜಕಾರಣದ ಮುಸುಕು ಕಾಂಗ್ರೆಸ್‌ ಮುಖಂಡರು ಮತ್ತವರ ಪಕ್ಷದ ಮೇಲೆ ಬಿದ್ದಿದ್ದು, ಅವರಿಗೆ ಭವಿಷ್ಯ ಇಲ್ಲ. ಕನಿಷ್ಠ ಪ್ರತಿಪಕ್ಷವಾಗಿಯಾದರೂ ಕೆಲಸ ಮಾಡುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತ ಪಕ್ಷವಾಗಿ ಕೆಲಸ ಮಾಡಲು ಯೋಗ್ಯರಲ್ಲ ಎಂದು ಕಾಂಗ್ರೆಸ್‌ ಅನ್ನು 2018ರಲ್ಲಿ ಜನರು ತೀರ್ಮಾನಿಸಿ ತಿರಸ್ಕರಿಸಿದರು. ಕನಿಷ್ಠ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿತ್ತು. ಆದರೆ, ಪ್ರತಿಪಕ್ಷವಾಗಿಯೂ ವಿಫಲವಾಗಿದೆ. ರಾಜಕಾರಣದ(Politics) ಮುಸುಕು …

Read More »

ಗ್ರಾಮೀಣ ಜನತೆಗೆ ಸಿಹಿ ಸುದ್ದಿ

ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.

Read More »

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಕೆಪಿಎಸಿ ಲಲಿತಾ ನಿಧನರಾಗಿದ್ದಾರೆ.ಅವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಲಲಿತಾ ಅವರನ್ನು ಕೆಲವು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆಸೆಯಂತೆ ಮನೆಗೆ ಕರೆತರಲಾಯಿತು. ಇದೀಗ ತಮ್ಮ ಪುತ್ರ ಸಿದ್ಧಾರ್ಥ್ ಅವರ ಕೊಚ್ಚಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

Read More »

ಅಪರೂಪದ ಕಾಯಿಲೆ 31 ಲಕ್ಷ ರೂ. ನೀಡಿ ಮಾನವೀಯತೆ ಮರೆದ ಭಾರತ ಕ್ರಿಕೆಟಿಗ

ಮುಂಬಯಿ: ಅಪರೂಪದ ರಕ್ತದ ಕಾಯಿಲೆಗೆ ಚಿಕಿತ್ಸೆ ನೀಡಲು ಅಸ್ಥಿ ಮಜ್ಜೆಯ ಕಸಿ ಅಗತ್ಯವಿರುವ 11 ವರ್ಷದ ಉದಯೋನ್ಮುಖ ಕ್ರಿಕೆಟಿಗನಿಗೆ 31 ಲಕ್ಷ. ರೂ. ನೆರವು ನೀಡುವ ಮೂಲಕ ಭಾರತ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಕೆ.ಎಲ್‌. ರಾಹುಲ್‌ ಮಾನವೀಯತೆ ಮೆರೆದಿದ್ದಾರೆ. “ವರದ್‌ ನಲವಡೆ ಅವರ ಸ್ಥಿತಿಯ ಬಗ್ಗೆ ನನಗೆ ತಿಳಿದಾಗ ನನ್ನ ತಂಡವು “ಗಿವ್‌ ಇಂಡಿಯಾ’ದೊಂದಿಗೆ ಸಂಪರ್ಕದಲ್ಲಿತ್ತು. ಇದರಿಂದ ನಾವು ಅವರಿಗೆ ಸಹಾಯ ಮಾಡಲು ಸಾಧ್ಯವಾಯಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದಕ್ಕೆ ನನಗೆ …

Read More »

ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು : ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್‌, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ ಎಂದರು.

Read More »

ಟ್ವೀಟ್ ಆರೋಪ : ನಟ ಚೇತನ್ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನ್ಯಾಯಾಧೀಶರನ್ನು ನಿಂಧಿಸಿದಂತ ಪ್ರಕರಣ ಸಂಬಂಧ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ. 8 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಅಕ್ಷೇಪಾರ್ಯ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ನಿನ್ನೆ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ 8 ನೇ ಎಸಿಎಂಎಂ ಕೋರ್ಟ್ ನಟ ಚೇತನ್ ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Read More »