ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಪರಿಷತ್ ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ …
Read More »ಹರ್ಷ ಕುಟುಂಬಕ್ಕೆ 1 ಲಕ್ಷ ರೂ ನೆರವು ಘೋಷಿಸಿದ ಅರವಿಂದ ಲಿಂಬಾವಳಿ
ಬೆಂಗಳೂರು : ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಅರವಿಂದ ಲಿಂಬಾವಳಿ ಒಂದು ಲಕ್ಷ ರೂ ನೆರವು ಘೋಷಿಸಿದ್ದಾರೆ. ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ. ಹರ್ಷರವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂ ಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆಘಾತಕಾರಿ ಘಟನೆಯಲ್ಲಿ ತಮ್ಮ …
Read More »ಶಿವಮೊಗ್ಗ ನಗರದಲ್ಲಿ ಶಾಲೆ ಕಾಲೇಜು ಬಂದ್
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ …
Read More »ಆಟೋ ರಿಕ್ಷಾ ನಿಲ್ದಾಣ ತೆರವು : ಚಾಲಕರ ಸಂಘದಿಂದ ಪ್ರತಿಭಟನೆ
ಹುಬ್ಬಳ್ಳಿ: ಹಳೇಬಸ್ ನಿಲ್ದಾಣದ ಮುಂಭಾಗದಲ್ಲಿ ರಾತ್ರೋ ರಾತ್ರಿ ಆಟೋ ರಿಕ್ಷಾ ನಿಲ್ದಾಣಗಳನ್ನು ತೆರವು ಮಾಡಿರುವುದನ್ನು ಖಂಡಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ ನಗರದಲ್ಲಿಂದು ಪ್ರತಿಭಟನೆ ನಡೆಸಿತು. ಇಲ್ಲಿನ ಚೆನ್ನಮ್ಮ ವೃತ್ತದಿಂದ ಹು-ಧಾ ಮಹಾನಗರ ಪಾಲಿಕೆಯವರೆಗೆ ಪ್ರತಿಭಟನಾ ರ್ಯಾಲಿ ಬಂದರು. ಈ ವೇಳೆ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮಾತನಾಡಿ, ಈಗಾಗಲೇ ಹತ್ತಾರು ಬಾರಿ ಸ್ಮಾರ್ಟ್ ಸಿಟಿ ಅಡಿಯಲ್ಲಿ 155 ಹೊಸ ಆಟೋ ನಿಲ್ದಾಣವನ್ನು ಮಾಡಿಕೊಡಬೇಕೆಂದು ಮನವಿಕೊಟ್ಟರೂ ಈವರೆಗೆ …
Read More »ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸಬೇಕೆಂದು ಮಾ.1ರಿಂದ ಜಾಥಾ ಪ್ರಾರಂಭ
ಹುಬ್ಬಳ್ಳಿ: ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಮಾ.1 ರಿಂದ 15 ರವರೆಗೆ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಪರಿವರ್ತನ ಸಮೂದಾಯದ ಸಂಚಾಲಕ ಎಸ್.ಆರ್.ಹಿರೇಮಠ ತಿಳಿಸಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುದಿಲ್ಲ ಎಂದು ಪ್ರಧಾನಿಯವರು ಘೋಷಿಸಿದ್ದಾರೆ ಆದರೂ ಕೂಡಾ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮಾತ್ರ ಈ ಕಾಯಿದೆಗಳನ್ನು ರದ್ದುಗೊಳಸಿಲು ಹಿಂದೆಟ್ಡು …
Read More »ಸಬ್ ಇನ್ಸ್ಪೆಕ್ಟರ್ ಹುದ್ದೆಯ ಎಕ್ಸಾಂನಲ್ಲಿ ಅಕ್ರಮ ಖಂಡಿಸಿ ಪ್ರತಿಭಟನೆ
ಧಾರವಾಡ : ಸಬ್ ಇನ್ಸ್ಪೆಕ್ಟರ್ ಹುದ್ದೆಯ ಎಕ್ಸಾಂ ನಲ್ಲಿ ಅಕ್ರಮ ನಡೆದಿರುವ ಘಟನೆ ಖಂಡಿಸಿ ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಪರೀಕ್ಷೆಯಲ್ಲಿ ಬ್ಲೂಟೂತ್ ಸೇರಿದಂತೆ ಇನ್ನಿತರ ಹೈಟೆಕ್ ತಂತ್ರಜ್ಞಾನ ಬಳಸಿ ಪರೀಕ್ಷೆಯಲ್ಲಿ ಹಲವು ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಪಾಸಾಗಿದ್ದು ಅಕ್ರಮ ಎಸಗಿದ್ದಾರೆ. ಕೂಡಲೇ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು. …
Read More »ಅಡುಗೆ ಅನಿಲ ಪೈಪ್ ಲೈನ್ನಲ್ಲಿ ಸೋರಿಕೆ: ರಸ್ತೆಯ ಅಗ್ನಿಯ ರೌದ್ರ ನರ್ತನ
ಹುಬ್ಬಳ್ಳಿ: ಅಡುಗೆ ಅನಿಲದ ಪೈಪ್ ಲೈನ್ನಲ್ಲಿ ಸೋರಿಕೆ ಉಂಟಾದ ಪರಿಣಾಮ ಏಕಾಏಕಿ ಬೆಂಕಿ ಕಾಣಿಕೊಂಡು ಅಗ್ನಿಯ ರೌದ್ರ ನರ್ತನ ತಾಳಿದ ಘಟನೆ ಹುಬ್ಬಳ್ಳಿಯ ತೆಂಗಿನಕಾಯಿ ಲೇಔಟ್ನಲ್ಲಿ ನಡೆದಿದೆ. ಗ್ಯಾಸ್ ಲಿಕೇಜ್ ಆಗಿರುವ ಪರಿಣಾಮ ಜನರ ಆತಂಕಗೊಂಡು ಮನೆಯಿಂದ ಹೊರ ಬಂದಿದ್ದಾರೆ. ಇನ್ನೂ ಜನರು ಹೊರ ಬರುತ್ತಿದ್ದಂತೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆ ಮನೆಗೆ ಸಂಪರ್ಕ ಕಲ್ಪಿಸುವ ಅಡುಗೆ ಅನಿಲದ ಪೈಪ್ ಲೈನ್ ಇದಾಗಿದೆ. …
Read More »ಕ್ಷುಲ್ಲಕ ಕಾರಣಕ್ಕೆ ಎಎಸ್ಐ ಮೇಲೆ ಹಲ್ಲೆ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯವರು ಎಎಸ್ಐವೊಬ್ಬರಿಗೆ ಇಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯ ಸಹದೇವನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುರಾಣಿಕಮಠ ಎಂಬ ಎಎಸ್ಐ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಯೊಡೆದು ತೀವ್ರ ರಕ್ತಸ್ರಾವವಾಗಿದೆ. ಸಹದೇವನಗರದಲ್ಲಿನ ಪುರಾಣಿಕಮಠ ಅವರ ಮನೆಯ ಪಕ್ಕದಲ್ಲಿರುವ ಭರತೇಶ ಎಂಬಾತನೇ ಇಟ್ಟಿಗೆಯಿಂದ ಹೊಡೆದಿದ್ದು, ಎಎಸ್ಐ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ …
Read More »ರಾಷ್ಟ್ರಧ್ವಜದ ಈಶ್ವರಪ್ಪ ಹೇಳಿಕೆ : 5ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಹೋರಾಟ
ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ಸಚಿವ ಕೆ ಎಸ್ ಈಶ್ವರಪ್ಪರನ್ನು ವಜಾಗೊಳಿಸಲು ಕಳೆದ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ಹೋರಾಟ 5ನೇ ದಿನಕ್ಕೂ ಕಾಲಿಟ್ಟಿದೆ. ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ …
Read More »ಬಜರಂಗದಳ ಕಾರ್ಯಕರ್ತನ ಬರ್ಬರವಾಗಿ ಹತ್ಯೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ
ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆ, ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ. ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ.ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ಲಾಠಿ ಚಾರ್ಜ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





