Breaking News

admin

ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಡಿ.ಕೆ. ಸುರೇಶ್

ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿರುವುದಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಕುಟುಂಬದವರು. ಅವರಿಗೆ ಇರುವಷ್ಟು ಬುದ್ಧಿ, ತಿಳಿವಳಿಕೆ ರಾಜ್ಯದಲ್ಲಿ ಯಾರಿಗೂ ಇಲ್ಲ. ರಾಜ್ಯಕ್ಕಾಗಿ, ರಾಷ್ಟ್ರಕ್ಕಾಗಿ ಕುಮಾರಸ್ವಾಮಿಯವರು ಏನು ಹೇಳುತ್ತಾರೆಯೋ ಅದನ್ನು ಕೇಳಬೇಕು. ಪ್ರಶ್ನಿಸಬಾರದು ಎಂದು ಟಾಂಗ್ ಕೊಟ್ಟಿದ್ದಾರೆ.

Read More »

ಇತಿಮಿತಿಯಲ್ಲಿ ಬಜೆಟ್ ಮಂಡನೆ : ಬೊಮ್ಮಾಯಿ

ದಾವಣಗೆರೆ: ಕೋವಿಡ್‌ನಿಂದ ಆರ್ಥಿಕ ಹಿಂಜರಿತ ಹೆಚ್ಚಾಗಿದೆ. ಇತಿಮಿತಿಯಲ್ಲಿ, ಆರ್ಥಿಕ ಚೌಕಟ್ಟಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆ ಈಡೇರಿಸಲು ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆ ಜಿಲ್ಲೆಯ ಬೇಡಿಕೆಗಳ ಪಟ್ಟಿ ನೀಡಿದ್ದಾರೆ. ಈ ಬಾರಿಯ ಬಜೆಟ್‌ ಗಾತ್ರ ಕುರಿತು ಬಜೆಟ್‌ ಮಂಡನೆ ದಿನವೇ ಹೇಳುವುದಾಗಿ ಗೌಪ್ಯತೆ ಕಾಪಾಡಿಕೊಂಡರು.

Read More »

ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ : ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಖಾನಾಪುರ: ತಾಲ್ಲೂಕಿನ ರಾಜವಾಳಾ ಗೌಳಿವಾಡಾ ಶಾಲೆಯ ಶಿಕ್ಷಕರ ವಿರುದ್ಧ ಶನಿವಾರ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಗೌಳಿವಾಡಾ ಶಾಲೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ನಿಂತು ಶನಿವಾರ ಮಧ್ಯಾಹ್ನ 12ರವರೆಗೆ ಶಾಲೆ ಇದ್ದರೂ ಶಿಕ್ಷಕರು ಬೇಗ ಕೊಠಡಿಗಳಿಗೆ ಬೀಗ ಜಡಿದು ತೆರಳಿದ್ದನ್ನು ಖಂಡಿಸಿದ ದೃಶ್ಯಗಳು ಹರಿದಾಡುತ್ತಿವೆ.1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಶಿಕ್ಷಕರು ನಿಯಮಿತವಾಗಿ ಶಾಲೆಗೆ ಬರುವುದಿಲ್ಲ, ಮಧ್ಯಾಹ್ನ ಬೇಗ ಮನೆಗೆ ತೆರಳುತ್ತಾರೆ, …

Read More »

ರಾಜ್ಯದಲ್ಲಿ 1,001 ಕೊರೊನಾ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು (ಫೆ.20, ಭಾನುವಾರ) 1,001 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು 485 ಜನರಿಗೆ ಕೊರೊನಾ ದೃಢಪಟ್ಟಿದ್ದು, ಕೊರೊನಾದಿಂದ 12 ಜನ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,36,586 ಕೊರೊನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 38,84,120 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,780 ಜನರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 18 …

Read More »

ಪಂಜಾನ್ ನಲ್ಲಿ ಶಾಂತಿ, ಸರಳೆಯಿಂದ ನಡೆದ ಮತದಾನ

ಚಂಡೀಗಡ/ಲಖನೌ: ಪಂಜಾಬ್ ವಿಧಾನಸಭೆಯ ಎಲ್ಲ 117 ಕ್ಷೇತ್ರಗಳು ಹಾಗೂ ಉತ್ತರ ಪ್ರದೇಶದ 59 ಕ್ಷೇತ್ರಗಳಿಗೆ ಭಾನುವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು.ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ 68ರಷ್ಟು ಮತ ಚಲಾವಣೆಯಾಗಿದೆ.2017ರಲ್ಲಿ ಶೇ 77.36ರಷ್ಟು ಮತದಾನವಾಗಿತ್ತು. ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಶೇ 57ರಷ್ಟು ಮತದಾನವಾಗಿದೆ. ಈ ಕ್ಷೇತ್ರಗಳಲ್ಲಿ 2017ರಲ್ಲಿ ಶೇ 62ರಷ್ಟು ಮತದಾನವಾಗಿತ್ತು. ಐದು ಪ್ರಮುಖ ಪಕ್ಷಗಳು ಸ್ಪರ್ಧಿಸುವ ಕಾರಣ …

Read More »

ಇಂದಿನಿಂದ ಪಿಯು ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆ ಪ್ರಾರಂಭಬಾಗಲ

ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷ ಹೊತ್ತಿ ಉರಿಯುತ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆಯಬೇಕಿರುವ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಈ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸ್‌ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Read More »

ದೆಹಲಿಯಲ್ಲಿ ಫೆ. 25 ರಂದು ಕಾಂಗ್ರೆಸ್‌ ನಾಯಕರ ಮೀಟಂಗ್

ಬೆಂಗಳೂರು: ಕಾರ್ಯತಂತ್ರ ರೂಪಿಸಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಈ ಬಗ್ಗೆ ಚರ್ಚಿಸಲು ಇದೇ 25ರಂದು ದೆಹಲಿಗೆ ಬರುವಂತೆ ಪಕ್ಷದ ರಾಜ್ಯ ಮುಖಂಡರಿಗೆ ಆಹ್ವಾನ ನೀಡಿದೆ. 25ರಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಜ್ಯಸಭೆ ಕಾಂಗ್ರೆಸ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. …

Read More »

ಕಾಂಗ್ರೆಸ್ ನಾಯಕರ ಹೋರಾಟಕ್ಕೆ ನಾನು ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ : ಈಶ್ವರಪ್ಪ

ಶಿವಮೊಗ್ಗ: ಕಲಾಪ ಸಂದರ್ಭ ನಾನು ಆಡಿದ ಮಾತನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ನಾನು ಯಾವುದೇ ಕಾರಣಕ್ಕೆ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಅದಕ್ಕೆ ಯಾರಾದರೂ ಅವಮಾನ ಮಾಡಿದರೆ ಸಹಿಸಲಾಗದು. ಅಂತಹವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ. ಹೀಗಾಗಿ, ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ಸಮಯ ಹಾಳು ಮಾಡುವುದು …

Read More »

ಮೇಕೆದಾಟು ಪಾದಯಾತ್ರೆ 5 ದಿನಕ್ಕೆ ಮಾತ್ರ ಸೀಮಿತ : ಡಿ.ಕೆ. ಸುರೇಶ್‌

ರಾಮನಗರ: ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಇದೇ 27ರಂದು ಬೆಳಿಗ್ಗೆ 9ಕ್ಕೆ ರಾಮನಗರದಲ್ಲಿ ಚಾಲನೆ ದೊರೆಯಲಿದ್ದು, 7 ದಿನಗಳ ಬದಲಿಗೆ 5 ದಿನಕ್ಕೆ ನಡಿಗೆಯನ್ನು ಸೀಮಿತಗೊಳಿಸಲಾಗುವುದು ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು. ಭಾನುವಾರ ಸಂಜೆ ಕೆಂಗಲ್‌ನಲ್ಲಿ ನಡೆದ ಪಾದಯಾತ್ರೆ ಪೂರ್ವಭಾವಿ ಸಭೆಯ ವೇಳೆ ಪತ್ರಕರ್ತರಿಗೆ ಅವರು ಮಾಹಿತಿ ನೀಡಿದರು. ‘ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆಗೆ ನಿರ್ಧರಿಸಿದ್ದೆವು. ಆದರೆ ರಾಜ್ಯ ಬಜೆಟ್‌ ಇರುವ ಕಾರಣ ಅಲ್ಲಿ ಮೂರು …

Read More »

ಅಶ್ವಿನಿ ಪುನೀತ ರಾಜಕುಮಾರ್ ಗೆ ಪಿತೃ ವಿಯೋಗ

ಬೆಂಗಳೂರು: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಶ್ವಿನಿ ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವನಾಥ್ ನಿಧನರಾಗಿದ್ದಾರೆ. ಪುನೀತ್ ರಾಜಕುಮಾರ್ ಅಗಲಿಕೆ ಆಘಾತದಿಂದ ಹೊರ ಬರುವ ಮೊದಲೇ ತಂದೆಯನ್ನು ಅಶ್ವಿನಿ ಕಳೆದುಕೊಂಡಿದ್ದಾರೆ. ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕ್ಕಮಗಳೂರು ಮೂಲದ ರೇವನಾಥ್ ಅವರು ಅಳಿಯ ಪುನೀತ್ ಅಗಲಿಕೆ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

Read More »