ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಮೊಬೈಲ್ ನಂಬರ್ ಸಂಗ್ರಹಿಸಿ ಮೆಸೆಂಜರ್ ಹಾಗೂ ವಾಟ್ಸ್ಆಯಪ್ ಮೂಲಕ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಹಾಸನ ಮೂಲದ ಆರೋಪಿ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿವಾಸಿ ಹರೀಶ್(32) ಪೋಲಿಸ್ ರುಬಂಧಿಸಿದ್ದಾರೆ. ಜೆಸಿಬಿ ಚಾಲಕನಾಗಿರುವ ಹರೀಶ್, ಇತ್ತೀಚೆಗೆ ಬಿಳೆಕಹಳ್ಳಿ ನಿವಾಸಿಯೊಬ್ಬರ ಪತ್ನಿಗೆ ಕಳೆದ ಮೂರು ತಿಂಗಳಿಂದ ಪದೇ ಪದೇ ಕರೆ ಮಾಡುತ್ತಿದ್ದು, ಜತೆಗೆ ವಾಟ್ಸ್ಆಯಪ್ ಮೂಲಕ ಪೋರ್ನ್ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ. …
Read More »ರಾಜ್ಯದಲ್ಲಿ 1,333 ಕೋವಿಡ್ ದೃಢ
ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಇಳಿಕೆಯ ಜೊತೆ ಜೊತೆಗೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲೂ ಕುಸಿತ ಕಂಡು ಬಂದಿದೆ. ಶುಕ್ರವಾರ 1,333 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 19 ಮಂದಿ ಮೃತರಾಗಿದ್ದಾರೆ.4,890 ಮಂದಿ ಚೇತರಿಸಿಕೊಂಡಿದ್ದಾರೆ. ಜನವರಿ 3 ರಂದು 1,290 ಪ್ರಕರಣ ದಾಖಲಾದ ಬಳಿಕದ ಅತ್ಯಂತ ಕನಿಷ್ಠ ಪ್ರಕರಣ ವರದಿಯಾಗಿದೆ. 83,555 ಕೋವಿಡ್ ಪರೀಕ್ಷೆ ನಡೆದಿದ್ದು ಶೇ.1.59ರ ಪಾಸಿಟಿವಿಟಿ ದರ ದಾಖಲಾಗಿದೆ. 26 ದಿನ (ಜನವರಿ 23)ರ ಬಳಿಕ ಮೊದಲ ಬಾರಿಗೆ …
Read More »ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು
ಮಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಗಳೂರು ನಗರದ ಉರ್ವಾದ ನಿವಾಸಿ ರಾಜೇಶ್ (30) ಮೃತ ವ್ಯಕ್ತಿ. ನಗರದ ಜ್ಯೋತಿ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು ಕದ್ದೊಯುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಗಳ ಪೈಕಿ ರಾಜೇಶ್ಗೆ ರಾತ್ರಿ ವೇಳೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಪಾಸಣೆ ನಡೆಸಿದ ವೈದ್ಯರಿಂದ ರಾಜೇಶ್ …
Read More »ಹಿರಿಯ ನಟ ರಾಜೇಶ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.
Read More »2 ಕೋಟಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ : ಮನ್ಸುಖ್ ಮಾಂಡವೀಯಾ
ನವದೆಹಲಿ: ದೇಶದಾದ್ಯಂತ 15ರಿಂದ 18ರ ವಯೋಮಾನದ ಸುಮಾರು 2 ಕೋಟಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ. ಈ ವಯೋಮಾನದ 2 ಕೋಟಿ ಯುವಜನರು ಕೋವಿಡ್ ವಿರುದ್ಧ ಈಗ ಲಸಿಕೆ ಪಡೆಯುವ ಮೂಲಕ ಯುವ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಲಸಿಕಾ ಅಭಿಯಾನ ನಡೆಸಿದಂತಾಗಿದೆ ಎಂದು ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.
Read More »ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು : ಬಿ.ಸಿ.ನಾಗೇಶ್
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಗಲಾಟೆ ಎಲ್ಲವೂ ಸರಿಯಾಗಲಿದೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1 ರಿಂದ 12 ನೇ ತರಗತಿ ಮಕ್ಕಳಿಗೆ ಸಮವಸ್ತ್ರ ಇದೆ.ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಸ್ವಲ್ಪ ಗೊಂದಲ ಇದೆ. ನಿನ್ನೆ ಮುಸ್ಲಿಂ ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಅವರು ಕೋರ್ಟ್ ಆದೇಶ ಪಾಲಿಸಲು ಮುಖಂಡರಿಗೆ ಹೇಳಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸುವ …
Read More »ಸಿಡಿ ಪ್ರಕರಣ : ಮತ್ತೇ ಸಂಕಷ್ಟಕ್ಕೆ ಸಿಲಿಕಿದ ರಮೇಶ್ ಜಾರಕಿಹೊಳಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಕ್ಲೀನ್ ಚಿಟ್ ನೀಡಿ ಹೈಕೋರ್ಟ್ ಗೆ ಸಲ್ಲಿಸಿರುವ ವರದಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ. ಎಸ್ ಐಟಿ ರಚನೆ ಸಮರ್ಪಕವಾಗಿ ಆಗಿಲ್ಲ. ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ. …
Read More »ಹಿಜಾಬ್ ಬಗ್ಗೆ ವಿವಾದಾತ್ಮಕ ಹೇಳಿಕೆ : ಕಾಂಗ್ರೆಸ್ ನಾಯಕ ವಿರುದ್ಧ ಎಫ್ಐಆರ್ ದಾಖಲು
ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಮುಕ್ರಂಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ಮೇಲೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇ ಕಾಂಗ್ರೆಸ್ ಮುಖಂಡನ ವಿರುದ್ಧ ಐಪಿಸಿ 153,294 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮುಕ್ರಂಖಾನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ …
Read More »ನಳೀನ್ ಕುಮಾರ್ ಕಟೀಲ್ ವಿರುದ್ಧ ಗಂಭೀರ ಆರೋಪ ಮಾಡಿದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನಗೆ ನೇರವಾಗಿ ಜೀವ ಬೆದರಿಕೆ ಕರೆ ಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ಕರೆ ಮಾಡಿ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನಳೀನ್ ಕುಮಾರ್ ಕಟೀಲ್ ನೇರವಾಗಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಬೆದರಿಕೆಗಳಿಗೆ ಹೆದರುವವರಲ್ಲ. ನಮ್ಮ ಪೂರ್ವಜರೇ ಬ್ರಿಟೀಷರ ಗುಂಡಿಗೆ ಹೆದರಿಲ್ಲ ಇನ್ನು …
Read More »ಈಶ್ವರಪ್ಪ ರಾಜೀನಾಮೆಗೆ ಒತ್ತಾಯ : ಸೋಮವಾರಕ್ಕೆ ಮುಂದೂಡಿದ ವಿಧಾನಪರಿಷತ್ ಕಲಾಪ
ಬೆಂಗಳೂರು: ಇಂದು ಸದನ ಆರಂಭವಾಗುತ್ತಿದ್ದಂತೆ ಆಡಳಿತ, ವಿಪಕ್ಷಗಳ ಗಲಾಟೆ ಜೋರಾಗಿದ್ದು, ಆ ಕಾರಣಕ್ಕಾಗಿ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು. ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪಟ್ಟು ಹಿಡಿದರು.ಇದರಿಂದ ವಾಗ್ವಾದ ಏರ್ಪಟ್ಟಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು, ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಬಿಜೆಪಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





