ಬೆಂಗಳೂರು: ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ರ್ನಾಟಕ ಹೈಕೋರ್ಟ್ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಪೀಠ, ಈ ಅರ್ಜಿಯನ್ನು ಪರಿಗಣಿಸಲು ಸಮ್ಮತಿಸಿದೆ. ಕರ್ನಾಟಕದಲ್ಲಿನ ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ನಡುವೆ ಹೊಸ ಅರ್ಜಿ …
Read More »ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್ ಕೋಡ್ ಇಲ್ಲ : ಬಿ.ಸಿ ನಾಗೇಶ್
ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್ ಕೋಡ್ ಇಲ್ಲ. ಡ್ರೆಸ್ ಕೋಡ್ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಇಲ್ಲ. ಡ್ರೆಸ್ ಕೋಡ್ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು.
Read More »ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸದನದಲ್ಲಿ ಅಹೋರಾತ್ರಿ ಹೋರಾಟ
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ …
Read More »500 ಕೋಟಿ ರೂ. ವೆಚ್ಚದ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಗ್ರಿನ್ ಸಿಗ್ನಲ್
ಚಿತ್ರದುರ್ಗ : ಚಿತ್ರದುರ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆನೀಡಿದೆ. ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದರು.
Read More »ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿಕೆ ಮಾಜಿ ಸಿಎಂ
ಬೆಂಗಳೂರು: ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಸಹ ಹಾಳು ಮಾಡಬಾರದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಮತ್ತು ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಆದರೆ, ಬಿಜೆಪಿ ಆರ್ಎಸ್ಎಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟ ಇಟ್ಟುಕೊಂಡು ಹೋರಾಟ ಮಾಡುತ್ತಿವೆ. …
Read More »ಮನಮೋಹನ್ ಸಿಂಗ್ ವಿರುದ್ಧ ನಿರ್ಮಲಾ ಸೀತಾರಾಮನ್ ತೀವ್ರ ವಾಗ್ದಾಳಿ
ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ಆರ್ಥಿಕತೆಯನ್ನು ಹಳಿಗೆ ತರಲು ಸಾಕಷ್ಟು ಪ್ರಯತ್ನಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇದು ನನಗೆ ನೋವುಂಟುಮಾಡುತ್ತದೆ” ಎಂದು ಹೇಳಿರುವ ಸೀತಾರಾಮನ್, ಚುನಾವಣಾ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆಗಳು ಭಾರತವನ್ನು ಕೆಳಕ್ಕೆ ತಲುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ …
Read More »ವಿಧಿ ಆಟ : ಕಲ್ಲು ಕುಸಿದು ಕಾರ್ಮಿಕ ಸಾವು
ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ ಗಣಿಯಲ್ಲಿ ಸುಮಾರು 800 ಅಡಿ ಆಳದಲ್ಲಿ ಕೆಲಸ ಮಾಡುವ ವೇಳೆ ದುರ್ಘಟನೆರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ. ಮೇಲ್ಭಾಗದಿಂದ ಕಲ್ಲು ಕುಸಿದು ಕಾರ್ಮಿಕ ಯಲ್ಲಪ್ಪ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣವೆಂದು ಆರೋಪಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ …
Read More »ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು …
Read More »ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 …
Read More »ಮೂಕ ಪ್ರಾಣಿಯನ್ನು ಬೀಡಿದ ಕಾಮುಕ : ವಿಡಿಯೋ ವೈರೆಲ್
ರಾಜಸ್ಥಾನ : ಪಾಪಿಗಳು ಕರುವಿನ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ರಾಜಸ್ಥಾನದ ಅಲ್ವಾರ್ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರು ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ವಾರ್ ಜಿಲ್ಲೆಯ ಭಿವಾಡಿ ಪ್ರದೇಶದ ಚುಹಾದ್ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಹಸುವಿನ ಜೊತೆ ನಾಲ್ವರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಪೊಲೀಸರು ನಾಲ್ವರನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ರಸ್ತೆಯಲ್ಲಿ ಮಲಗಿದ್ದ ಕರುವಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





