Breaking News

admin

ಈಶ್ವರಪ್ಪ ರಾಜೀನಾಮೆ ನೀಡುವದಷ್ಟೇ ಅಲ್ಲ, ಸಂಪುಟದಿಂದ ವಜಾ ಮಾಡಬೇಕು : ಡಿಕಶಿ

ಬೆಂಗಳೂರು : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಸದನದಲ್ಲೇ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್‌ ಈಶ್ವರಪ್ಪರನ್ನು ವಜಾ ಮಾಡಬೇಕು. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ಎಂದು ಹೇಳಿದ್ದಾರೆ.

Read More »

ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು : ಬೊಮ್ಮಾಯಿ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಐಎಂಎ ಪ್ರಕರಣದ ಕುರಿತು ಪ್ರಶ್ನೆ ಮಾಡಿದರು. ಐಎಂಎ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು ಅಂತ …

Read More »

ರಾಜ್ಯದಲ್ಲಿ 1,579 ಕೋವಿಡ್ ದೃಢ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದ್ದು, ಇಂದು 1,579 ಮಂದಿಗೆ ಕೋವಿಡ್ ದೃಢಪಟ್ಟಿದ್ರೆ,23 ಜನ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 769 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,579 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 1.74 %ಕ್ಕೆ ತಲುಪಿದೆ’ ಎಂದಿದ್ದಾರೆ. ಬೆಂಗಳೂರಿನಲ್ಲಿ 7 …

Read More »

ಬಸ್ಸು ಬೈಕ್ ಗೆ ಡಿಕ್ಕಿ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವು

ಆಲಮಟ್ಟಿ: ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಸಂಭವಿಸಿದೆ. ಮೃತರನ್ನು ನಿಡಗುಂದಿ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ.ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ.ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ. ಯಲಗೂರ ಕ್ರಾಸ್ ನಿಂದ ಆಲಮಟ್ಟಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಖಾಸಗಿ ಬಸ್ಸು ಮತ್ತು ಆಲಮಟ್ಟಿಯಿಂದ ಅಬ್ಬಿಹಾಳ ಗ್ರಾಮಕ್ಕೆ ಹೋಗುತ್ತಿದ್ದ ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದಿರುವದರಿಂದ …

Read More »

ಏಕಾಏಕಿ ಹಿಜಾಬ್​ ತೆಗೆಯಿರಿ ಅಂದರೆ ಹೇಗೆ ಸಾಧ್ಯ? : ಜಮೀರ್ ಅಹಮದ್​

ಬೆಂಗಳೂರು : ಮುಸ್ಲಿಂ ವಿದ್ಯಾರ್ಥಿಗಳು ನೂರಾರು ವರ್ಷಗಳಿಂದ ಹಿಜಾಬ್ ಧರಿಸುತ್ತಿದ್ದಾರೆ. ಏಕಾಏಕಿ ಹಿಜಾಬ್​ ತೆಗೆಯಿರಿ ಅಂದರೆ ಹೇಗೆ ಸಾಧ್ಯ? ನಾವು ಕೋರ್ಟ್ ಆದೇಶವನ್ನ ಪಾಲನೆ ಮಾಡುತ್ತಿದ್ದೇವೆ, ಎಂದು ಬೆಂಗಳೂರಿನಲ್ಲಿ ಶಾಸಕ ಜಮೀರ್ ಅಹಮದ್​ ಹೇಳಿಕೆ ನೀಡಿದ್ದಾರೆ. ಕಳೆದ ತಿಂಗಳು ಕೇಸರಿ ಶಾಲು ಎಲ್ಲಿಂದ ಬಂತು,? ಕೆಲವು ಕಾಲೇಜುಗಳಲ್ಲಿ ಷಡ್ಯಂತ್ರ ನಡೆಯುತ್ತಿದೆ. ಕಾಣದ ಕೈಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಲವು ವಿದ್ಯಾರ್ಥಿಗಳಿಗೆ ಒಳಗೆ ಹೋಗಲು ಬಿಡುತ್ತಿಲ್ಲ. ರಾಜ್ಯ ಸರ್ಕಾರ ಆದೇಶವನ್ನ …

Read More »

ಈಶ್ವರಪ್ಪಗೆ ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮ್ಮ ಗೊತ್ತಿದೆ : ಡಿಕೆಶಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದು, ಸಚಿವರ ಹೇಳಿಕೆ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ, ರಾಷ್ಟ್ರದ್ರೋಹದ ಕೆಲಸ ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.ಆದರೆ ತಿರಂಗಾ ಯಾತ್ರೆ ಮಾಡಿರುವ …

Read More »

ಈಶ್ವರಪ್ಪ ರಾಜಿನಾಮೆ ಕೊಡುವಂತೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಭಿತ್ತಿಪತ್ರ ಹಿಡಿದು ಕಲಾಪದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ವಿಧಾನಪರಿಷತ್ ಕಲಾಪದ ವೇಳೆಯೂ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯದ ಪ್ರತಿಧ್ವನಿ ಕೇಳಿಬಂದಿದೆ. ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಷತ್ ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದು, ಸಚಿವ ಈಶ್ವರಪ್ಪ ವಿರುದ್ಧ …

Read More »

ಫೆ. 25 ರಂದು ರಾಜ್ಯಾದ್ಯಂತ ಓಲ್ಡ್ ಮಾಂಕ್ ಬಿಡುಗಡೆ

ಹುಬ್ಬಳ್ಳಿ : ಓಲ್ಡ್ ಮಾಂಕ್ ಚಲನಚಿತ್ರವು ಇದೇ ದಿನಾಂಕ ೨೫ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಟ ಹಾಗೂ ನಿರ್ದೇಶಕ ಎಂ.ಜಿ. ಶ್ರೀನಿವಾಸ ಹೇಳಿದರು. ನಗರದ ಬಿವಿಬಿ ಕಾಲೇಜಿನಲ್ಲಿ ಚಿತ್ರದ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಚಿತ್ರದಲ್ಲಿ ಒಟ್ಟು ೪ ಹಾಡುಗಳು ಇದ್ದು, ಈಗಾಗಲೇ ಗಿಚ್ಚ ಗಿಲಿಗಿಲಿ ಹಾಡು ಜನಪ್ರೀಯಗೊಂಡಿದ್ದು,, ಉತ್ತರ ಕರ್ನಾಟಕದ ಜಾನಪದ ಶೈಲಿಯ ಹಾಡು ಇದಾಗಿದ್ದು ಯುವಕರ ಹಾಟ್ ಫೇವರೆಟ್ ಆಗಿದೆ. ಓಲ್ಡ್ ಮಾಂಕ್ …

Read More »

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ಫೆ.19ರಂದು ಪ್ರತಿಭಟನೆ

ಬೆಂಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮವನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ವತಿಯಿಂದ ಫೆಬ್ರವರಿ 19ರಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಅಧ್ಯಕ್ಷ ಎನ್ ಮೂರ್ತಿ ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಮಾನ್ಯ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲರು …

Read More »

ಕುಟುಂಬ ಕಲಹ : ಪೊಲೀಸ್ ಪೇದೆಯ ಪತ್ನಿ ಸಾವು

ಚಿಕ್ಕಬಳ್ಳಾಪುರ : ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆ ಮತ್ತು ಅವರ ಪತ್ನಿ ಆತ್ಮಹತ್ಯೆ ಯತ್ನಿಸಿದ್ದು ಪೇದೆಯ ಪತ್ನಿ ಮೃತಪಟ್ಟಿದ್ದು ಪೇದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಣಕನೂರು ಬಳಿ ಸಂಭವಿಸಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಕುಮಾರ್ ಮತ್ತು ಅವರ ಪತ್ನಿ ಸ್ನೇಹ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಪೇದೆ ಸುರೇಂದ್ರ ಕುಮಾರ್ ಅವರು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಅದರಿಂದ …

Read More »