ನವದೆಹಲಿ: ಕಳೆದ 24 ಗಂಟೆಯಲ್ಲಿ 30,757 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದ್ದು, 24 ಗಂಟೆಯಲ್ಲಿ 541 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 3,32,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 67,538 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,10,984 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ …
Read More »ಹಿಜಾಬ್ ವಿವಾದ : ವಿವಾದಾತ್ಮಕ ಹೇಳಿಕೆಗೆ ಹೆಚ್ಚಿದ ಆಕ್ರೋಶ
ಕಲಬುರಗಿ: ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ನಮ್ಮ ಮಕ್ಕಳ ಹಿಜಾಬ್ ಗೆ ಅಡ್ಡಿಪಡಿಸಿದರೆ ತುಂಡುತುಂಡು ಮಾಡುತ್ತೇವೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುಕ್ರಂಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Read More »ಈಶ್ವರಪ್ಪ ಸಚಿವ ಸ್ಥಾನಕ್ಕೆ ವಜಾ ಮಾಡುವಂತೆ ಮಾಜಿ ಸಿಎಂ ಒತ್ತಾಯ
ಬೆಂಗಳೂರು: ರಾಷ್ಟ್ರ ಧ್ವಜವನ್ನು ಅವಮಾನಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಗುರುವಾರ ಬೆಳಗ್ಗೆ 11 ಗಂಟೆಯೊಳಗಾಗಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಜತೆಗೆ ಪೊಲೀಸರು ಸುಮೊಟೋ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಹಾಗೂ ಬಿಜೆಪಿಯೂ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಹೀಗಾಗಿ ಬಿಜೆಪಿಯ ವಿರುದ್ಧ …
Read More »ಸದನದಲ್ಲಿ ನಡೆದ ಘಟನೆಗಳು 2023 ರ ಚುನಾವಣೆಯ ಟ್ರೈಲರ್ : ಕುಮಾರಸ್ವಾಮಿ
ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ನಡೆದ ವಿದ್ಯಮಾನ ಪ್ರಜಾಪ್ರಭುತ್ವವನ್ನೇ ಅಣಕಿಸುವಂತೆ ಇದ್ದು, 2023 ರ ಚುನಾವಣೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದರ ತೋರಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದನದಲ್ಲಿ ನಡೆದ ಘಟನೆಗಳು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಕನ್ನಡಿಗರ ಹಣವನ್ನು ಪೋಲು ಮಾಡುತ್ತಿವೆ. ರಾಜ್ಯದಲ್ಲಿ ಈಗ ಉದ್ಭವಿಸಿರುವ ಶೈಕ್ಷಣಿಕ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಲು ನಮಗೆ ಅವಕಾಶವೇ ಸಿಗಲಿಲ್ಲ’ ಎಂದರು.
Read More »ರತನ್ ಟಾಟಾಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ
ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್ನ ಅಧ್ಯಕ್ಷರಾದ ರತನ್ ಟಾಟಾ ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ‘ಅಸ್ಸಾಂ ಬೈಭವ್’ ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು. ಪ್ರಶಸ್ತಿಯು …
Read More »ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 …
Read More »ಮಾಜಿ ಶಾಸಕ ಜಿ.ವಿ.ಮಂಟೂರ ನಿಧನನಾ
ಬಾಗಲಕೋಟೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಗಲಕೋಟೆಯ ಮಾಜಿ ಶಾಸಕ ಜಿ.ವಿ.ಮಂಟೂರ (92) ಗುರುವಾರ ಬೆಳಗ್ಗೆ 5.30ಕ್ಕೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟೆ ತಾಲೂಕಿನ ಸ್ವಗ್ರಾಮ ಖಜ್ಜಿಡೋಣಿಯಲ್ಲಿ ಮಂಟೂರ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಕ್ಕೆ ನಡೆಯಲಿದೆ. ಮಂಟೂರ ಅವರರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಜಿ.ವಿ.ಮಂಟೂರ ಬಾಗಲಕೋಟೆ ಕ್ಷೇತ್ರದಲ್ಲಿ ಎರಡು ಸಲ ಶಾಸಕರಾಗಿದ್ದರು.
Read More »ಈಶ್ವರಪ್ಪ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ : ಬೊಮ್ಮಾಯಿ
ಬೆಂಗಳೂರು: ಕೇಸರಿ ಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತಂತೆ ಈಗಾಗಲೇ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂಬುದಾಗಿ ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂಬುದನ್ನೂ ತಿಳಿಸಿದ್ದಾರೆ. ಆದರೆ, ಅವರ ಹೇಳಿಕೆಯ ಆಯ್ದ ಭಾಗಗಳನ್ನು …
Read More »ವೀರಶೈವ ಸಂಪ್ರದಾಯದಂತೆ ಪತ್ನಿ ಸಮಾಧಿ ಪಕ್ಕದಲ್ಲಿ ಕಣವಿ ಅಂತ್ಯ ಸಂಸ್ಕಾರ
ಧಾರವಾಡ: ಇಂದು ನಿಧನರಾದ ಕವಿ ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಸಂಸ್ಕಾರ ಧಾರವಾಡ ಹೊರವಲಯದಲ್ಲಿರುವ ಕಣವಿ ಕುಟುಂಬದ ಸೃಷ್ಟಿ ಫಾರ್ಮ್ ಹೌಸ್ನಲ್ಲಿ ವೀರಶೈವ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಅವರ ಹಿರಿಯ ಪುತ್ರ ಶಿವಾನಂದ ಕಣವಿ ಅವರು ಅಂತಿಮ ವಿಧಿ-ವಿಧಾನಗಳನ್ನು ಕೈಗೊಂಡರು. ಕಣವಿ ಅವರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಅವರ ಸಮಾಧಿ ಬಳಿಯೇ ಅವರ ಅಂತಿಮಕ್ರಿಯೆ ನಡೆಸಲಾಯಿತು. ಸರ್ಕಾರದ ಸಕಲ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನಡೆದಿದ್ದು, ಪೊಲೀಸರು ಗಾಳಿಯಲ್ಲಿ …
Read More »ಕೆಸಿಡಿ ಆವರಣದಲ್ಲಿ ಕಣವಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕವಿ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 1 ರಿಂದ 3ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ. ಕಣವಿ ಅವರ ಅಂತ್ಯಕ್ರಿಯೆ ಸಂಜೆ 5ಕ್ಕೆ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ನಡೆಸಲು ಅವರ ಕುಟುಂಬ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





