ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು. ಕಣವಿ ಅವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರ ಕುಟುಂಬ ವರ್ಗದವರ ಇಚ್ಛೆಯಂತೆ ಕೆಲಗೇರಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು. ಬಸವರಾಜ ಬೊಮ್ಮಾಯಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಧಾರವಾಡಕ್ಕೆ ಬರಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು. ಹೆಲಿಕಾಪ್ಟರ್ ನಲ್ಲಿ …
Read More »ಹಿಜಾಬ್ ವಿವಾದ ಹಿನ್ನಲೆ ಕಾಲೇಜಿಗೆ ಕಮೀಷನರ್ ಭೇಟಿ : ಸೆಕ್ಷನ್ 144 ಜಾರಿ
ಹುಬ್ಬಳ್ಳಿ : ಹುಬ್ಬಳ್ಳಿಯ ಜೆಸಿ ನಗರದಲ್ಲಿರುವ ವುಮೆನ್ಸ್ ಕಾಲೇಜ್ ನಲ್ಲಿ ಆರಂಭವಾದ ಹಿಜಾಬ್ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಸದ್ಯ ಕಾಲೇಜಿಗೆ ಭೇಟಿ ಕೊಟ್ಟ ಪೊಲೀಸ್ ಕಮೀಷನರ್ ಲಾಬುರಾಮ ಕಾಲೇಜಿನ ಸುತ್ತ ಸೆಕ್ಷನ್ 144 ಜಾರಿ ಮಾಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ಒಂದು ದಿನ ರಜೆ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ, ಪೊಲೀಸ್ ಕಮೀಷನರ್ ಕಾಲೇಜಿಗೆ ಭೇಟಿ ನೀಡಿ ಬಿಗಿ ಬಂದು ಬಸ್ತ್ ಮಾಡಿದ್ದಾರೆ. ಬಳಿಕ ಕಾಲೇಜು …
Read More »ಹುಬ್ಬಳ್ಳಿ ಯಲ್ಲಿ ಮತ್ತೇ ಮುಂದುವರೆದ ಹಿಜಾಬ್ ವಿವಾದ : ಕಾಲೇಜುಗೆ ರಜೆ ಘೋಷಣೆ
ಹುಬ್ಬಳ್ಳಿ : ನಾವು ನೀವೆಲ್ಲಾ ಒಂದೇ ಎನ್ನುವ ಭಾವೈಕ್ಯತೆ ಸಾರವನ್ನು ಸಾರುವ ಮೂಲಕ ಇತರರಿಗೆ ಮಾದರಿಯಾಗಿದ್ದ ಹುಬ್ಬಳ್ಳಿ ಧಾರವಾಡ ಏಕಾಏಕಿ ಆರಂಭವಾದ ಹಿಜಾಬ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಲ್ಲಿಯ ಜೆಸಿ ನಗರದಲ್ಲಿರುವ ವುಮೆನ್ಸ್ ಕಾಲೇಜಿನಲ್ಲಿ ಇಂದು ಬೆಳಗ್ಗೆಯಿಂದ ಆರಂಭವಾದ ಹಿಜಾಬ್ ಗಲಾಟೆಯಿಂದಾಗಿ ಸದ್ಯ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಇನ್ನು ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರಿಗೆ ಕಾಲೇಜಿನಲ್ಲಿ ಎಂಟ್ರಿ ನೀಡದಕ್ಕೆ ವಿದ್ಯಾರ್ಥಿನಿಯರು ಹೋರಾಟ ಆರಂಭಿಸುತ್ತಿದ್ದಂತೆ …
Read More »ಹುಬ್ಬಳ್ಳಿಯಲ್ಲಿ ಮತ್ತೇ ಏರಿದ ಹಿಜಾಬ್ ವಿವಾದ ಕಾವು : ವುಮೇನ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ
ಹುಬ್ಬಳ್ಳಿ : ಹಿಜಾಬ್ ವಿವಾದದ ನಡೆವೆಯೂ ಕಾಲೇಜುಗಳ ಪುನಾರಂಭವಾಗಿದ್ದು, ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ ಘಟನೆ ಇಲ್ಲಿನ ಜೆ.ಸಿ. ನಗರದ ವುಮೇನ್ಸ್ ಕಾಲೇಜಿನ ಆವರಣದಲ್ಲಿ ನಡೆದಿದೆ. ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಒಳಗೆ ಬನ್ನಿ ಇಲ್ಲದಿದ್ದರೆ ಕಾಲೇಜು ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದನ್ನು ಖಂಡಿಸಿ ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿ ವಾಂಟ್ …
Read More »ಸಾಹಿತ್ಯ ಲೋಕದ ಕಳಿಚಿದ ಹಿರಿಯ ಕೊಂಡಿ : ನಾಡೋಜ ಚೆನ್ನವೀರ ಕಣವಿ ನಿಧನ
ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತೆ ಆಗಿದೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ. ಚೆನ್ನವೀರ ಕಣವಿ …
Read More »ಹಿರಿಯ ಗಾಯಕ ಬಪ್ಪಿ ಲಾಹಿರಿ ನಿಧನ
ನವದೆಹಲಿ: ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಾಹಿರಿ ಅವರು ಬುಧವಾರ ಬೆಳಿಗ್ಗೆ ನಿಧನರಾದರು. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಗಾಯಕ, ಸಂಯೋಜಕ ಬಪ್ಪಿ ಲಾಹಿರಿ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Read More »ಜವರಾಯನ ಅಟ್ಟಹಾಸ : ಅಪಘಾತದಲ್ಲಿ 4 ವಿದ್ಯಾರ್ಥಿಗಳು ಸಾವು, 2 ಗಂಭೀರ ಗಾಯ
ಬೆಂಗಳೂರು: ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಗಾರ್ಡನ್ ಸಿಟಿ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, …
Read More »ಶಾಲೆ, ಪದವಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ : ಅಶ್ವತ್ಥನಾರಾಯಣ
ಚಾಮರಾಜನಗರ: ಪದವಿ ಕಾಲೇಜ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಪು ಧರಿಸಿ ಬರಬಹುದು .ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಸಮವಸ್ತ್ರ ಕಡ್ಡಾಯವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ. ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಪದವಿ ಕಾಲೇಜುಗಳಲ್ಲಿ ಅಂತಹ ನಿಯಮವಿಲ್ಲ. ವಿದ್ಯಾರ್ಥಿಗಳು ಇಷ್ಟದ ಉಡುಪು ಧರಿಸಿ ಬರಬಹುದು ಎಂದು ಹೇಳಿದ್ದಾರೆ.
Read More »ಸೆಲ್ಫಿ ಹುಚ್ಚಿಗೆ ಬಲಿಯಾದ ಯುವಕರ ಪ್ರಾಣ
ಗುರುಗ್ರಾಮ ( ನವದೆಹಲಿ) : ರೈಲು ಹಳಿಗಳ ಮೇಲೆ ಸೆಲ್ಫಿ ತೆಗೆದು ದುಸ್ಸಾಹಸ ಮಾಡುತ್ತಿದ್ದ ದೂರದಿಂದ ರೈಲು ಬರುತ್ತಿರುವಾಗ ರೈಲು ಬರುವುದು ಕಾಣಿಸುವ ಜತೆಗೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ಹಳಿಯ ಮೇಲೆ ನಿಂತಿದ್ದ ನಾಲ್ವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯ ಸರಾಯ್ ರೋಹಿಲ್ಲಾದಿಂದ ರಾಜಸ್ಥಾನದ ಅಜ್ಮೀರ್ಗೆ ಹೋಗುವ ಜನ ಶತಾಬ್ದಿ ಎಕ್ಸ್ಪ್ರೆಸ್ ಗುರುಗ್ರಾಮ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ …
Read More »ದೇಶದಲ್ಲಿ ಶೇ.11 ರಷ್ಟು ಕೊರೋನಾ ಹೊಸ ಪ್ರಕರಣ ಏರಿಕೆ
ನವದೆಹಲಿ : ದೇಶದಲ್ಲಿ ನಿನ್ನೆಗಿಂತ ಶೇ.11 ರಷ್ಟು ಕೊರೋನಾ ಹೊಸ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ನಿನ್ನೆ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಮಹಾಮಾರಿಗೆ ಬಲಿಯಾಗಿದ್ದರು. ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





