ಚಾಮರಾಜನಗರ : ಯಾರು ಏನೇ ಹೇಳಿದರೂ ಧರ್ಮವನ್ನು ದೊಡ್ಡಮಟ್ಟದಲ್ಲಿ ಬೆಳೆಸಬೇಕು, ಧರ್ಮ ಉಳಿಸಲು ಎಲ್ಲರೂ ಒಂದಾಗಬೇಕು. ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆಯು ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ಚಾಮರಾಜನಗರದ ನಂದಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿ, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ-ಉತ್ತರವಿದೆ. ಆದ್ದರಿಂದ, ಧರ್ಮ ರಕ್ಷಣೆ …
Read More »ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ ನಿಧನ
ಮಂಡ್ಯ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ (94) ಅವರು ತಡರಾತ್ರಿ 2.15ರ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ಹೊಳಲು ಗ್ರಾಮದ ತಮ್ಮ ನಿವಾಸದಲ್ಲಿ ಚೌಡಯ್ಯ ಅವರು ನಿಧನರಾಗಿದ್ದಾರೆ.1928ರಲ್ಲಿ ಜನಿಸಿದ ಚೌಡಯ್ಯ ಅವರು ಕೃಷಿ ವಿಭಾಗದಲ್ಲಿ ಬಿಎಸ್ಸಿ ಪದವಿ ಶಿಕ್ಷಣ ಪಡೆದಿದ್ದರು. ಇವರು 4 ಬಾರಿ ಕೆರಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಕಾವೇರಿ ಹೋರಾಟದಲ್ಲಿ …
Read More »ಮಲಗಿದ್ದಲೇ ಹಾರಿ ಹೋದ ವಿದ್ಯಾರ್ಥಿಯ ಪ್ರಾಣ ಪಕ್ಷಿ
ಮಂಗಳೂರು (ದ.ಕನ್ನಡ): ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಆಸ್ಪತ್ರೆಯ ರೆಸ್ಟ್ ರೂಮ್ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದ ಮನಕುಲ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿ ನಾಗೇಶ್ (23) ಸಾವನ್ನಪ್ಪಿದ ವಿದ್ಯಾರ್ಥಿ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಾತ್ರಿ ರೆಸ್ಟ್ ರೂಮ್ನಲ್ಲಿ ಮಲಗಿದ್ದು, ಬೆಳಗ್ಗೆ ನೋಡಿದಾಗ ಮೃತಪಟ್ಟಿದ್ದಾರೆ.
Read More »ರೈತರಿಗೆ ಸಿಹಿ ಸುದ್ದಿ
ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ ಪೋಡಿ, ಹದ್ದುಬಸ್ತು, 11ಇ ನಕ್ಷೆ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.2072 ಭೂಮಾಪಕರಿಗೆ ಪರವಾನಿಗೆ ನೀಡಲಾಗುವುದು. ಮನೆಬಾಗಿಲಿಗೆ ಕಂದಾಯ ಇಲಾಖೆ ದಾಖಲೆಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಹೇಳಿದ್ದಾರೆ.
Read More »ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಬಿಡುಗಡೆ
ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಜಾಮೀನಿನ ಮೇಲೆ ಜೈಲಿನಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಲಖಿಂಪುರ ಖೇರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್ ಮಿಶ್ರಾ ಅವರ ಬೆಂಗಾವಲು ಪಡೆಯ ವಾಹನ ಹರಿದು ನಾಲ್ಕು ಮಂದಿ ರೈತರು, ಒಬ್ಬ ಸ್ಥಳೀಯ ಪತ್ರಕರ್ತ ಸೇರಿ ಎಂಟು ಮಂದಿ …
Read More »ಹಿಜಾಬ್ ವಿವಾದಕ್ಕೆ ಮತ್ತೊಂದು ತಿರುವು : ವಿಭಿನ್ನ ರೀತಿಯಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳು
ದಾವಣಗೆರೆ: ಹಿಜಾಬ್ ಜತೆ ಇದೀಗ ಮತ್ತೊಂದು ಹೊಸ ವಿವಾದ ಶುರುವಾಗಿದೆ.ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆ ವಿಭಾಗದಲ್ಲಿ ಹೊಸದೊಂದು ಘಟನೆ ನಡೆದಿದೆ. ತಲೆಗೆ ಬಿಳಿ ಟೊಪ್ಪಿಗೆ (ತಖೀಯಾ) ಧರಿಸಿ ಮುಸ್ಲಿಂ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ನಮಾಜ್ ಸಂದರ್ಭದಲ್ಲಿ ಮುಸ್ಲಿಮರು ಧರಿಸುವ ಬಿಳಿ ಟೊಪ್ಪಿಗೆ ಧರಿಸಿ ಬಂದಿದ್ದಾರೆ. ಟೊಪ್ಪಿಗೆ ಧರಿಸಿಯೇ ವಿದ್ಯಾರ್ಥಿಗಳು ತರಗತಿ ಪ್ರವೇಶಿಸಿದ್ದಾರೆ. ಹೊಸ ಬಗೆಯ ಸಂಘರ್ಷಕ್ಕೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ …
Read More »ಜಮೀರ್ ಅಹ್ಮದ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್
ಬಾಗಲಕೋಟೆ: ಹಿಜಾಬ್ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಹಿಜಾಬ್ ಧರಿಸದೇ ಇದ್ದರೆ ರೇಪ್ ಆಗುತ್ತೆ ಎಂಬ ಜಮೀರ್ ಹೇಳಿಕೆ ಅತ್ಯಂತ ನಿರ್ಲಜ್ಜದ ಹೇಳಿಕೆ.ಈ ದೇಶದಲ್ಲಿ ಹಿಂದೂ ಮಹಿಳೆಯರು ಹಿಜಾಬ್ ಇಲ್ಲದೇ ಜೀವನ ಮಾಡುತ್ತಿದ್ದಾರೆ. ಅವರು ಸುರಕ್ಷಿತರಾಗಿಯೇ ಇದ್ದಾರೆ. ಹೀಗಿರುವಾಗ ಹಿಜಾಬ್ ಇಲ್ಲದಿದ್ದರೆ ಅತ್ಯಾಚಾರವಾಗುತ್ತದೆ ಎಂಬ ರೀತಿಯಲ್ಲಿ ಶಾಸಕರು …
Read More »ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡುವಂತೆ ಕುಟುಂಬ ನಿರ್ಧಾರ
ಬೆಂಗಳೂರು : ಇಲ್ಲಿಯ ಸೇಂಟ್ ಜಾನ್ ಆಸ್ಪತ್ರೆಗೆ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಭಾರ್ಗವಿ ಅವರ ಸ್ವಗೃಹದಲ್ಲಿಯೇ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿತ್ತು. ನಂತರ ಅಲ್ಲಿಂದ ಪಾರ್ಥಿವ ಶರೀರವನ್ನು ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಯಿತು. ದೇಹದಾನ ಮತ್ತು ಕಣ್ಣುದಾನ ಮಾಡಬೇಕು ಎನ್ನುವುದು ಸ್ವತಃ ಭಾರ್ಗವಿ ನಾರಾಯಣ್ ಅವರ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಕುಟುಂಬವು ಅವರ ಆಸೆಯನ್ನು ಈಡೇರಿಸಿದೆ ಎಂದು ನಟ, ನಿರ್ದೇಶಕ …
Read More »ಫೆ.16 ರಿಂದ ಪಿಯುಸಿ, ಪದವಿ ತರಗತಿಗಳು ಆರಂಭ
ಬೆಂಗಳೂರು :ಪಿಯುಸಿ, ಪದವಿ ತರಗತಿಗಳು ಫೆ.16 ಬುಧವಾರದಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ ಸಮವಸ್ತ್ರ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಸಿಎಂ ‘ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದೆ.ಸಭೆ ಬಳಿಕ ಮಾತನಾಡಿದ ಸಚಿವರು ಫೆ.16 ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಕಾಲೇಜು ಪ್ರಾರಂಭಿಸಿದ್ದೇವೆ, ಹೈಕೋರ್ಟ್ ಆದೇಶ ಪಾಲಿಸಬೇಕು. ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ …
Read More »ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಲ್ಕರ್ ಐಸಿ ನೇಮಕ
ದೆಹಲಿ: ಟಾಟಾ ಸನ್ಸ್ ಟರ್ಕಿಯ ಏರ್ಲೈನ್ಸ್ನ ಮಾಜಿ ಅಧ್ಯಕ್ಷ ʻಇಲ್ಕರ್ ಐಸಿʼ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ. ನಿಯಮಿತ ಚರ್ಚೆಗಳ ನಂತರ ಮಂಡಳಿಯು ಏರ್ ಇಂಡಿಯಾದ CEO ಮತ್ತು MD ಆಗಿ ಇಲ್ಕರ್ ಐಸಿಯ ನೇಮಕವನ್ನು ಅನುಮೋದಿಸಿದೆ. ಈ ನೇಮಕಾತಿಯು ಅಗತ್ಯ ನಿಯಂತ್ರಣ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ ಎಂದು ಟಾಟಾ ಸನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





