ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.
Read More »ಮಡಿದಿಯನ್ನೇ ಕೊಲೆ ಮಾಡಿ ಪೋಲಿಸ್ ಠಾಣೆಗೆ ಹೋದ ಪತಿರಾಯಚಿತ್ರ
ಚಿತ್ರದುರ್ಗ: ಪತಿ, ಪತ್ನಿಯರ ನಡುವೆ ಹೊಂದಾಣಿಕೆ ಜೀವನ ಸಾಧ್ಯವೇ ಇಲ್ಲ ಅನ್ನುವಂತ ಸಂದರ್ಭಗಳಲ್ಲಿ ಇಬ್ಬರೂ ದೂರಾಗಿ ಅವರವರ ಪಾಡಿಗೆ ಬದುಕು ಸಾಗಿಸೋದನ್ನೂ ಕಂಡಿದ್ದೇವೆ. ಆದರೇ ಗಂಡನೇ ಸರ್ವಸ್ವ ಅಂತ ತಿಳಿದು ಬಂದ ಪತ್ನಿಯನ್ನ ಸಂಭಾಳಿಸಲಾಗದ ಪತಿ ಮಾನವೀಯತೆ ಮರೆತು ಕ್ರೌರ್ಯ ಮರೆದು ಹತ್ಯೆ ಮಾಡಿದ್ದಾನೆ. ಎರಡನೇ ಮದುವೆ ಪ್ರಶ್ನಿಸಿ, ಸಂಶಯಿಸಿ ಪತಿ ಜೊತೆ ನಿತ್ಯ ಗಲಾಟೆ ಮಾಡುತ್ತಿದ್ದ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯ …
Read More »ಸರ್ಕಾರ ವಿರುದ್ಧ ಆರೋಪ ಮಾಡಿದ ಡಿಕೆಶಿ
ಗದಗ: ‘ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ.ಅಲ್ಲದೇ, ವಿವಾದ ರಾಜ್ಯದೆಲ್ಲೆಡೆ ವ್ಯಾಪಿಸಲು ಸರ್ಕಾರವೇ ಪ್ರೋತ್ಸಾಹ ನೀಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾನುವಾರ ಆರೋಪಿಸಿದರು. ‘ರಾಜ್ಯದಲ್ಲಿರುವಂತೆ ತಾಂತ್ರಿಕ, ಶೈಕ್ಷಣಿಕ, ಸಾಂಸ್ಕೃತಿಕ ಶ್ರೀಮಂತಿಕೆ ಬೇರೆಲ್ಲೂ ಇಲ್ಲ. ಇಂತಹ ವಾತಾವರಣದಲ್ಲಿ ಈಗ ವಿವಾದ ಹುಟ್ಟಿಕೊಂಡಿದೆ. ಬಿಜೆಪಿ ಸರ್ಕಾರದಿಂದಲೇ ರಾಜ್ಯಕ್ಕೆ ಕಪ್ಪುಚುಕ್ಕೆ ಬಿದ್ದಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು. ‘ಸಂವಿಧಾನ ಮತ್ತು ರಾಷ್ಟ್ರಧ್ವಜವೇ ಕಾಂಗ್ರೆಸ್ ಪಕ್ಷದ ಧರ್ಮ. ತಲೆಕೆಟ್ಟ ಕೆ.ಎಸ್.ಈಶ್ವರಪ್ಪ, …
Read More »ಡಾ. .ಚೆನ್ನವೀರ ಕಣವಿ ಆರೋಗ್ಯ ಚೇತರಿಕೆ : ಸಿಎಂ ಭರವಸೆ
ಧಾರವಾಡ : ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ, ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ.ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು. ಧಾರವಾಡದ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗೆ ಭೇಟಿ ನೀಡಿ,ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕವಿ …
Read More »ಸಾಲ ವಾಪಸ್ ಕೇಳಲು ಹೋದ ಮಹಿಳೆ ಮೇಲೆ ಹಲ್ಲೆ
ಧಾರವಾಡ: ಸಾಲ ವಾಪಸ್ ಕೊಡಿ ಎಂದು ಕೇಳಲು ಹೋದವಳ ಮೇಲೆ ಹಲ್ಲೆ ನಡೆಸಿರುವ ಘಟನೆ ಹಿರೇಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಕೌಸಲ್ಯ ಎಂಬ ಮಹಿಳೆ ಸುಶೀಲವ್ವಳ ಬಳಿ ಕರಾರು ಪತ್ರದೊಂದಿಗೆ 2 ಲಕ್ಷ ರೂ. ಸಾಲ ಪಡೆದುಕೊಂಡಿದ್ದಳು. ಈ ಸಾಲವನ್ನು ವಾಪಸ್ ಕೇಳಲು ಹೋದಾಗ ಕೌಸಲ್ಯ ತನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾಳೆ ಎಂದು ಸುಶೀಲವ್ವ ಆರೋಪಿಸಿದ್ದಾಳೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ …
Read More »ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಹೇಳಿಕೆ ನೀಡಿರುವ ಈಶ್ವರಪ್ಪವಿರುದ್ಧ ಕ್ರಮ ಕೈಗೊಳ್ಳಿ , ಇಲ್ಲದಿದ್ದರೆ ನಾನೇ ದೂರು ದಾಖಲಿಸುವೆ : ಸಿಎಂ ಇಬ್ರಾಹಿಂ
ಹುಬ್ಬಳ್ಳಿ : ಮುಂದಿನ ದಿನಗಳಲ್ಲಿ ದೆಹಲಿಯ ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿರುವ ಕರ್ನಾಟಕದ ಮಂತ್ರಿ ಈಶ್ವರಪ್ಪ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಯಾವಾಗ. ಬೊಮ್ಮಾಯಿ ಅವರು ಕ್ರಮ ಕೈಗೊಳ್ಳದಿದ್ದರೆ, ನಾನೇ ಬೆಂಗಳೂರಿಗೆ ತೆರಳಿ ಈಶ್ವರಪ್ಪ ವಿರುದ್ದ ದೂರು ದಾಖಲಿಸುತ್ತೇನೆ ಎಂದು ಸಿಎಂ ಇಬ್ರಾಹಿಂ ಸಿಎಂ ಬೊಮ್ಮಾಯಿ ಅವರಿಗೆ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಹೆಣ್ಣು ಮಕ್ಕಳು …
Read More »ಉದ್ಯೋಗದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣು
ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮನು (22) ಎಂಬಾತ ನೌಕರಿ ಸಿಗದಿದ್ದಕ್ಕೆ ಜಿಗುಪ್ಸೆಗೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ. ಈತ ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದು, ಯಾವುದೇ ನೌಕರಿ ಸಿಗದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಕ್ರಿಮಿನಾಶಕ ಸೇವಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …
Read More »ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ
ನವದೆಹಲಿ: 2022 – ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಿಯಾಂಕಾ ಗಾಂಧಿ ಕೂಡ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಗೆಲುವಿಗಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಭಾನುವಾರ ಪಂಜಾಬ್ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಿಯಾಂಕಾ ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿದ್ದಾರೆ.
Read More »ಕೋರ್ಟ್ ನಲ್ಲಿ ಗಲಾಟೆ ಪ್ರಕರಣ : 14 ದಿನಗಳು ವಕೀಲ ಜಗದೀಶ್ ನ್ಯಾಯಾಂ ಬಂಧನ
ಬೆಂಗಳೂರು: ಕೋರ್ಟ್ ಅಂಗಳದಲ್ಲಿ ಗಲಾಟೆ ಆರೋಪಕ್ಕೆ ಸಂಬಂದಪಟ್ಟಂತೆ ಪೋಲಿಸರು ವಶಕ್ಕೆ ಪಡೆದಿದ್ದ ವಕೀಲ ಜಗದೀಶ್ ಅವರನ್ನುಇದರ ಅನ್ವಯ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಮೂರ್ತಿಗಳು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಶನಿವಾರ ಪ್ರಕರಣವೊಂದರ ಸಂಬಂಧ ಜಗದೀಶ್ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯಕ್ಕೆ ಆಗಮಸಿದ್ದರು, ಈ ವೇಳೆಯಲ್ಲಿ ಕೋರ್ಟ್ ಅಂಗಳದಲ್ಲಿ ಗಲಾಟೆಯಾಗಿತ್ತು, ಈ ಗಲಾಟೆಗೆ ಸಂಬಂಧಪಟ್ಟಂತೆ ವಕೀಲ ಜಗದೀಶ್ ತಮ್ಮ ಫೇಸ್ಬುಕ್ ನಲ್ಲಿ ಕೆಲವರ ಬಗ್ಗೆ ಆರೋಪಿಸಿದ್ದರು, …
Read More »ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡುವುದಿಲ್ಲ : ಸಿ ಎಂ ಇಬ್ರಾಹಿಂ
ಹುಬ್ಬಳ್ಳಿ: ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡುವುದಿಲ್ಲ. ನಾನು ನಾಳೆ ರಾಜೀನಾಮೆ ನೀಡಿದರೇ ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳುವ ಮೂಲಕ ಸಿಎಮ್ ಇಬ್ರಾಹಿಂ ಯೂಟರ್ನ್ ಹೊಡೆದಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡೋಲ್ಲ. ಈ ವೇಳೆ ರಾಜೀನಾಮೆ ಕೊಟ್ಟರೆ ಬಿಜೆಪಿಯಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತದೆ. ಹೀಗಾಗಿ ಬಜೆಟ್ ಅಧಿವೇಶನದ ನಂತರ ರಾಜೀನಾಮೆ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಇಬ್ರಾಹಿಂ ಹೇಳಿದರು. ಹೈಕಮಾಂಡ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





