Breaking News

admin

ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ನಗರದ ಹಿಂಡಲಗಾ ಗಣಪತಿ ಮಂದಿರದ ಬಳಿ ನಡೆದಿದೆ . ತಾಯಿ ಕೃಷಾ (36), ಮಗಳು ಭವಿರಾ (4) ಶವ ಪತ್ತೆಯಾಗಿದ್ದು , ಮಗ ‌ ವಿರೇನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ . ಎಸ್ ​ ಡಿಆರ್ ​ ಎಫ್ ತಂಡದಿಂದ ವಿರೇನ್ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ . ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

49 ವರ್ಷದ ಸಂಸದ 18 ವಯೋಮಿತಿ ಪೋರಿಯ ಜೊತೆ 3 ನೇ ವಿವಾಹ

49-ವರ್ಷ ವಯಸ್ಸಿನ ಸಂಸದ 18 ವರ್ಷ ವಯಸ್ಸಿನ ಸಾದಿಯಾ ದಾನಿಯಾ ಶಾ ಜೊತೆಗೆ ಮೂರನೇ ಮದುವೆಯಾಗಿದ್ದಾರೆ. ಪಾಕಿಸ್ತಾನದ ಆಡಳಿತಾರೂಢ ಪಿಟಿಐ ಪಕ್ಷದ ಸಂಸದ ಹಾಗೂ ಟಿವಿ ಹೋಸ್ಟ್ ಡಾ. ಆಮೀರ್‌ ಲಿಯಾಕತ್‌ ಹುಸೇನ್ ಮದುವೆಯಾಗಿದ್ದಾರೆ. ಈ ವಿಚಾರವೀಗ ಪಾಕಿಸ್ತಾನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಜೋಡಿ ಬುಧವಾರ ಮದುವೆಯಾಗಿದೆ. ಇದೇ ದಿನ ಆಮೀರ್‌ಗೆ ಆತನ ಎರಡನೇ ಮಡದಿ ವಿಚ್ಛೇದನ ನೀಡಿದ್ದಾರೆ. “ಕಳೆದ ರಾತ್ರಿ ಸಯಿದಾ ದಾನಿಯಾ ಶಾ, ಜೊತೆಗೆ ಮದುವೆ …

Read More »

ದೇಶದಲ್ಲಿ ಇಳಿಕೆ ಕಂಡ ಕೊರೋನಾ ಪ್ರಕರಣ

ನವದೆಹಲಿ: ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕಿನ  ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿವೆ. ಇಂದು ಹೊಸದಾಗಿ 50,407 ಮಂದಿಗೆ ಕೋವಿಡ್  ದೃಢಪಟ್ಟಿದೆ. ಸೋಂಕಿನಿಂದಾಗಿ 804 ಜನರು ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 50,407 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ 804 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.

Read More »

ಟಿಪ್ಪು ಎಕ್ಸ್​ಪ್ರೆಸ್ ಹೆಸರು ಬದಲಾಯಿಸುವಂತೆ ಪ್ರತಾಪ್ ಸಿಂಹ ಮನವಿ

ಮೈಸೂರು : ಟಿಪ್ಪು ಎಕ್ಸ್ ಪ್ರೆಸ್ ರೈಲು ಹೆಸರು ಬದಲಾಯಿಸುವ ಸಂಬಂದ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ದೆಹಲಿಯಲ್ಲಿ ಭೇಟಿಯಾಗಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಲು ಒತ್ತಾಯ ಮಾಡಲಾಗಿದೆ.

Read More »

ಮಾ. 4 ರಂದು ಸಿಎಂ ಚೊಚ್ಚಲ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇದಾದ ನಂತರ ಸಂಘ ಸಂಸ್ಥೆಗಳ ಜೊತೆಗೆ ಸಭೆ ನಡೆಸಿ ಪ್ರಸ್ತಾವನೆ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 25ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ 4ರಂದು ಬಜೆಟ್ ಅಧಿವೇಶನ ಶುರುವಾಗಲಿದೆ …

Read More »

ಶಿಕ್ಷಕರ ವರ್ಗಾವಣೆ ಕುರಿತು ದಿನಾಂಕ ಪ್ರಕಟ

ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ಅಥವಾ ಪರಸ್ಪರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ಹಮ್ಮಿಕೊಳ್ಳಲು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ. ಇದೇ ಫೆ. 14 ಮತ್ತು 16 ರಂದು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಎಸ್.ಎಸ್.ಎ ಸಭಾಂಗಣ, ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದ್ದು, ಸಂಬಂಧಪಟ್ಟ ಶಿಕ್ಷಕರು ದಾಖಲೆಗಳೊಂದಿಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಲು ತಿಳಿಸಿದೆ.

Read More »

ನನ್ನ ದೆಹಲಿ ಪ್ರವಾಸಕ್ಕೆ ಯಾವುದೇ ರಾಜಕೀಯ ಬಣ್ಣ ಬೇಡ’

ಹುಬ್ಬಳ್ಳಿ: ನನ್ನ ದೆಹಲಿ ಪ್ರವಾಸಕ್ಕೆ ಯಾವುದೇ ರಾಜಕೀಯ ಬಣ್ಣ ಬೇಡ. ನಾನು ಈ ಹಿಂದೆ ತಿಳಿಸಿದಂತೆ ಸಂಪುಟಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದಿಂದ ನೆರವು, ಸಬ್ಸಿಡಿ ನೀಡುವ ಕುರಿತು ಮತ್ತು ನಗರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ನಾನು ದೆಹಲಿ ಪ್ರವಾಸ ಕೈಗೊಂಡಿದ್ದೆ. ಅಲ್ಲಿ ಸಚಿವ ಪಿಯುಷ್ ಗೋಯಲ್, ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. …

Read More »

ಹಿಜಾಬ್ ವಿವಾದ ನ್ಯಾಯಾಲಯ ತೀರ್ಪುಗೆ ಸರ್ಕಾರ ಬದ್ದರಾಗಬೇಕು: ಸಭಾಪತಿ ಹೊರಟ್ಟಿ

ಹುಬ್ಬಳ್ಳಿ : ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ.ನ್ಯಾಯಾಲಯದ ಬಗ್ಗೆ ನಾವು ಮಾತನಾಡಕ್ಕೆ ಆಗಲ್ಲಾ, ಏನು ತೀರ್ಪು ಬರತ್ತೋ ಅದನ್ನು ಸರ್ಕಾರ ಪಾಲಿಸಬೇಕು. ಯಾರೂ ಬಣ್ಣದ ಬಟ್ಟೆಗಳನ್ನು ಧರಿಸದಿರುವಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ನೇ ತರಗತಿವರೆಗೆ ಈಗಾಗಲೇ ಸಮವಸ್ತ್ರ ಇದೆ. ಆದರೆ ಕಾಲೇಜಿನ ಸಮಾಜಶಾಸ್ತ್ರದ ಕುರಿತು ಏನು ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕು. ನ್ಯಾಯಾಲಯ ನೀಡಿದ …

Read More »

ಸಾಸ್ವಿಹಳ್ಳಿ ಗ್ರಾಮದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ

ಅಣ್ಣಿಗೇರಿ: ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ದಿಂದ ಬಂದಂತ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಶೋಭಾ ಹಾಗೂ PHCO ಮೇನಕಪುರದ ಅವರು ಗ್ರಾಮದಲ್ಲಿ ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಉತ್ತಮ ಆರೋಗ್ಯ ಹೊಂದಿರುವ ಶಿಶುಗಳಿಗ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ ಮಕ್ಕಳ ಆರೋಗ್ಯ ಯಾವ ರೀತಿಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ಸೂಚನೆಗಳನ್ನು ಪೋಷಕರಿಗೆ ನೀಡಿದರು .ಈ ವೇಳೆ ಆಶಾ …

Read More »

ಖಾಕಿ ಪಡೆ ವಾಹನಗಳಿಗೆ ಚಾಲನೆ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ

ಹುಬ್ಬಳ್ಳಿ : ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನಗಳನ್ನು ನೀಡಲಾಗುವುದು. ಇಲಾಖೆಗಳು ತಮಗೆ ಬೇಡಿಕೆಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿ ಅವರು …

Read More »