Breaking News

admin

ಯತ್ನಾಳ್‌ಗೆ ಎಚ್ಚರಿಕೆ ನೀಡಿದ ಇಸ್ಮಾಯಿಲ್ ತಮಟಗಾರ

ಧಾರವಾಡ: ಯತ್ನಾಳ್‌ಗೆ ತಾಕತ್ತಿದ್ದರೆ ಧಾರವಾಡಕ್ಕೆ ಬಂದು ಮಾತಾಡಲಿ. ಅವರ ಚೊಣ್ಣ ಬಿಚ್ಚಿ ಹೊಡೆಯದಿದ್ದರೆ ನನ್ನ ಹೆಸರು ಇಸ್ಮಾಯಿಲ್ ಅಲ್ಲ ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸವಾಲ್ ಹಾಕಿದ್ದಾರೆ. ಮುಸ್ಲಿಂ ಮಹಿಳೆಯರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿತಾಗಿ ಮಾತಾಡಿದ್ದನ್ನು ಖಂಡಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಇಸ್ಮಾಯಿಲ್ ತಮಟಗಾರ, ಬಿಜೆಪಿಯವರು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ, ಹಿಂದೆ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದಿದ್ದರು. ತ್ರಿಬಲ್ ತಲಾಖ್ …

Read More »

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದಿನ ಜೆಡಿಎಸ್ ಅಭ್ಯರ್ಥಿ ನಾನೇ : ಕುಮಾರಸ್ವಾಮಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದಿನ ಜೆಡಿಎಸ್ ಅಭ್ಯರ್ಥಿ ನಾನೇ . ಕುಟುಂಬ ರಾಜಕಾರಣ ಹೆಸರಲ್ಲಿ ನಮ್ಮ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಾನು, ನಮ್ಮ ಸಹೋದರರು ಬೇರೆಯಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂದು ಕಾರ್ಯಕರ್ತರು ಪ್ರಶ್ನಿಸಿದಾಗ, ನಾನೇ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ನಾನು ನನ್ನ ಪತ್ನಿ, ನನ್ನ …

Read More »

ಹಿಜಾಬ್ ವಿವಾದ ಕುರಿತು ಮಹತ್ವದ ತೀರ್ಮಾನ ನೀಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೀಠ ಬುಧವಾರ ಸಿಜೆ ಅಂಗಳಕ್ಕೆ ರವಾನಿಸಿದ ಬೆನ್ನಲ್ಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೂ ಸೇರಿ ಮೂವರು ನ್ಯಾಯ ಮೂರ್ತಿಗಳನ್ನೊಳಗೊಂಡ ಪೂರ್ಣಪೀಠ ರಚನೆಯಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರನ್ನೊಳಗೊಂಡ ಈ ಪೂರ್ಣಪೀಠ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ನಡೆಸಿದೆ. ಸದ್ಯ ಪ್ರಕರಣ ಸಂಬಂಧ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವ …

Read More »

ಹಿಜಾಬ್ ವಿವಾದ ಕುರಿತು ಮನನೊಂದು ಆತ್ಮಹತ್ಯೆಗೆ ಯತ್ನ

ಕೊಡಗು: ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ.ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

Read More »

ರಾಹುಲ್ ಗಾಂಧಿ ವಿರುದ್ಧ ಆರ್‌ಎಸ್‌ಎಸ್ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಮುಂದೂಡಿಕೆ

ಥಾಣೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹೂಡಿರುವ ಮಾನನಷ್ಟ ಮೊಕದ್ದಮೆ ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 22ಕ್ಕೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನ್ಯಾಯಾಲಯ ಮುಂದೂಡಿದೆ. 2014ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಭಿವಂಡಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಆರ್‌ಎಸ್‌ಎಸ್ನವರು ಎಂದು ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಆರ್‌ಎಸ್‌ಎಸ್ನ ರಾಜೇಶ್ ಕುಂಟೆ …

Read More »

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದರಾಗೋಣ : ಬೊಮ್ಮಾಯಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು. ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ ಎಂದರು.

Read More »

ಪ್ರಧಾನಿ ವಿರುದ್ಧ ಸ್ಟಾಲಿನ್ ವಾಗ್ದಾಳಿ

ಬಿಜೆಪಿ ವಿರುದ್ಧದ ಟೀಕೆಗಳನ್ನು ದೇಶದ ವಿರುದ್ಧ ಟೀಕೆಗಳನ್ನಾಗಿ ಕಾಣುವಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಪಾದನೆ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಗಣತಂತ್ರೋತ್ಸವದ ದಿನದಂದು ತಮಿಳು ನಾಡಿದ ಸ್ತಬ್ಧಚಿತ್ರವನ್ನು ಪೆರೇಡ್‌ನಲ್ಲಿ ಭಾಗವಹಿಸಲು ಬಿಡದೇ ಇದ್ದದ್ದಕ್ಕೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿನ ಸ್ವಾತಂತ್ರ‍್ಯ ಹೋರಾಟಗಾರರ ಪ್ರತಿಮೆಗಳನ್ನು ಈ ಬಾರಿ ಗಣತಂತ್ರೋತ್ಸವದ ಪರೇಡ್‌ನಲ್ಲಿ ರಾಜ್ಯದ ಪರವಾಗಿ ಸ್ತಬ್ದಚಿತ್ರವನ್ನಾಗಿ ಮೆರವಣಿಗೆ ಮಾಡಲು …

Read More »

ಟಿಕ್ ಟಾಕ್ ಸ್ಟಾರ್ ಕಮಲಜ್ಜಿ ಅಜ್ಜಿ ನಿಧನ

ಬಂಟ್ವಾಳ: ಟಿಕ್ ಟಾಕ್ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್​ಟಾಕ್ ಕಮಲಜ್ಜಿ ನಿನ್ನೆ ಸಂಜೆ ನಿಧನರಾದರು.ಮೃತರು ಆರು ಗಂಡು, ಮೂವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಬಂಧು-ಬಳಗ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕಳೆದೊಂದು ವಾರದಿಂದ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಟಿಕ್ ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬ …

Read More »

ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ಪ್ರೀತಿ ಹೆಚ್ಚು : ಕುಮಾರಸ್ವಾಮಿ

ಬೆಂಗಳೂರು: ಕೆಲ ಹೋರಾಟಗಾರರು ನಮ್ಮ ಕುಟುಂಬ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ನಾನು ರಾಜಕಾರಣಕ್ಕೆ ಬರದೇ ಇದ್ದಿದ್ದರೆ ಇಂದು ನಮ್ಮ ಪಕ್ಷ ಇರುತ್ತಿರಲಿಲ್ಲ.ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಬೇಕಾಯಿತು. ನನಗೆ ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ವ್ಯಾಮೋಹ, ಪ್ರೀತಿ ಹೆಚ್ಚು ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ …

Read More »

ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಆಗಿ ಎಸ್‌. ರಾಜೇಂದ್ರ ಕುಮಾರ್ ನೇಮಕ

ಬೆಂಗಳೂರು: ಕರ್ನಾಟಕ ಅಂಚೆ ವೃತ್ತದ ನೂತನ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಆಗಿ ಎಸ್‌. ರಾಜೇಂದ್ರ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು, ತೆಲಂಗಾಣ ಅಂಚೆ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರ್‌ ಆಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರಿನವರಾದ ಅವರು, 1990ನೇ ಸಾಲಿನ ಭಾರತೀಯ ಅಂಚೆ ಸೇವೆಯ ಅಧಿಕಾರಿಯಾಗಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ಲೋಹ ವಿಜ್ಞಾನದಲ್ಲಿ ಬಿ.ಟೆಕ್‌. ಪದವಿ ಪಡೆದಿರುವ ಅವರು, 1987ರಿಂದ 1990ರವರೆಗೆ ಬಿಎಚ್‌ಇಎಲ್‌ನ ಸಂಶೋಧನಾ ಮತ್ತು …

Read More »