ಹುಬ್ಬಳ್ಳಿ: ಹಳೆಯ ಮನೆ ತೆರವು ಕಾರ್ಯಾಚರಣೆ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಘಂಟಿಕೇರಿಯ ಪಗಡಿ ಗಲ್ಲಿಯಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಶಿವಪ್ಪ ಮುಂದಿನಮನಿ (60) ಮೃತಪಟ್ಟ ಕಾರ್ಮಿಕ, ಗುತ್ತಿಗೆದಾರ ಗಣೇಶರಾವ್ ಶಿಂಧೆ ಎಂಬುವರು ರಾಜು ಹುನಗುಂದ ಎಂಬುವರ ಹಳೆಯ ಮನೆ ಗೋಡೆ ತೆರವು ಮಾಡಿಸುತ್ತಿದ್ದರು. ಈ ವೇಳೆ ಗೋಡೆ ಶಿವಪ್ಪನ ಮೈಮೇಲೆ ಕುಸಿದು ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷ ಕಾರಣ : ಆರ್. ಅಶೋಕ್ ಆರೋಪ
ಬೆಂಗಳೂರು : ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ, ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಪ್ರೇರಪಣೆ ನೀಡುತ್ತಿದೆ ಎಂದು ಕಂದಾಯ ಸಚಿವ ಅರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಕರ್ನಾಟಕದಲ್ಲಿ ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಕ್ಷ ಒಂದು ವರ್ಗಕ್ಕೆ ಪ್ರೇರಪಣೆ ನೀಡುತ್ತಿದೆ. ಕಾಂಗ್ರೆಸ್ ನ ಇನ್ನೊಂದು ವರ್ಗ ಎರಡೂ ಕಡೆ ಇದೆ. ಕಾಂಗ್ರೆಸ್ ಪಕ್ಷ ಎರಡೂ ಕಡೆ ಇರುವುದು ಒಳ್ಳೆಯದಲ್ಲ. ಕಾಂಗ್ರೆಸ್ ಯಾರ ಪರ …
Read More »ಹಿಜಾಬ್ ವಿವಾದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಮಲಾಲಾ ಯೂಸುಫ್ ಝಾಯಿ
ನೊಬೆಲ್ ಪ್ರಶಸ್ತಿ ಪುರಸ್ಕೃತೆ, ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ಪಾಕಿಸ್ತಾನ ಮೂಲದ ಮಲಾಲಾ ಯೂಸುಫ್ ಝಾಯಿ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಲಾಲಾ ಟ್ವೀಟ್ ಮಾಡಿದ್ದು, ಹಿಜಾಬ್ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜುಗಳು ಬಲವಂತ ಮಾಡುತ್ತಿವೆ. ಹಿಜಾಬ್ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗಿಟ್ಟಿದ್ದು ನಿಜಕ್ಕೂ ಭಯನಾಕ. ಹುಡುಗಿಯರು ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ಮಾಡುತ್ತಿರುವುದು …
Read More »ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.
Read More »ಒಂದೇ ಕುಟುಂಬದ 5 ಜನ ಕೊಲೆ ಪ್ರಕರಣ : ಆರೋಪಿ ಬಂಧನ
ಮಂಡ್ಯ: ತಾಯಿ ಸೇರಿದಂತೆ ನಾಲ್ವರು ಮಕ್ಕಳು ಒಟ್ಟು ಒಂದೇ ಕುಟುಂಬದ ಐವರ ಕೊಲೆ ಪ್ರಕರಣ ಫೆಬ್ರವರಿ 6ರ ಮಧ್ಯರಾತ್ರಿ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4) ಹಾಗೂ ಗೋವಿಂದ(8) ನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಬಳಿಕ ಸ್ಕೂಟರ್ನಲ್ಲಿ ಪರಾರಿಯಾಗಿದ್ದಳು. ಮಾರನೇ ದಿನ ಕೊಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಾನೂ ಮೃತರ ಮನೆಯ ಮುಂದೆ ಕೂತು ಕಣ್ಣೀರಿಟ್ಟು ಗೋಳಾಡಿ ನಾಟಕವಾಡಿದ್ದಳು. ಸದ್ಯ …
Read More »ಹಿಜಾಬ್ ವಿವಾದಕ್ಕೆ ಶಿಕ್ಷಣ ಸಚಿವ, ಗೃಹ ಸಚಿವರೇ ಕಾರಣ : ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ವಿವಿಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ …
Read More »ಹಿಜಾಬ್ ವಿವಾದ : ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಹೈಕೋರ್ಟ್
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ವಿದ್ಯಾರ್ಥಿ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅಲ್ಲದೆ, ನ್ಯಾಯಾಲಯಕ್ಕೆ ಜನರ ವಿವೇಕದ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಹಾಗಾಗಿ ಅವರು ಯಾವುದೇ ರೀತಿಯಲ್ಲೂ ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ನಡೆದುಕೊಳ್ಳಲಿದ್ದಾರೆ ಎಂದು ಹೈಕೋರ್ಟ್ ಆಶಿಸಿದೆ.
Read More »ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ : 3 ಜನ ಬಂಧನ
ಕೊಪ್ಪಳ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ.ಹಿಜಾಬ್ ಕುರಿತಂತೆ ಯತ್ನಾಳ್ ನೀಡಿದ ಹೇಳಿಕೆಯ ವಿಡಿಯೋ ತಿರುಚಿ ಜೀವ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿತ್ತು. ಕಾಸಿಂಸಾಬ್, ರಿಯಾಜ್, ದಾದಾ ಕಲಂದರ್, ಹುಸೇನ್ ಸಾಧಿಕ್ ಎಂಬುವರ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯತ್ನಾಳ್ ಅವರ ಹೇಳಿಕೆ ಎಡಿಟ್ ಮಾಡಿದ ವಿಡಿಯೋ ಅಪ್ ಲೋಡ್ ಮಾಡಿರುವ ಬಗ್ಗೆ ಶಿವಾನಂದ ಶರಣಪ್ಪ …
Read More »ಹಿಜಾಬ್ ವಿವಾದ : ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ
ನವದೆಹಲಿ : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ ನೀಡಿದ್ದು,ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ,ಬಟ್ಟೆ ಧರಿಸುವುದ ಹೆಣ್ಣು ಮಕ್ಕಳವಿವೇಚನೆಗೆ ಬಿಟ್ಟಿದ್ದು, ಅದು ಬಿಕಿನಿಯಾಗಿರಲಿ, ಜೀನ್ಸ್ ಅಥವಾ ಹಿಜಾಬ್ ಆಗಿರಲಿ. ಮಹಿಳೆ ಏನು ಧರಿಸಬೇಕು ಎಂಬದನ್ನು ನಿರ್ಧರಿಸುವ ಹಕ್ಕು ಮಹಿಳೆಯರಿಗೆ ಇದೆ. ಈ ಹಕ್ಕು ಭಾರತೀಯ ಸಂವಿಧಾನ …
Read More »ರಾಜ್ಯದಲ್ಲಿ 4452 ಕೋವಿಡ್ ಪ್ರಕರಣ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 4452 ಹೊಸ ಪ್ರಕರಣ ದಾಖಲಾಗಿದ್ದು, 19067 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿತರ ಪಾಸಿಟಿವಿಟಿ ದರ ಶೇ.5.1ಕ್ಕೆ ಹಾಗೂ ಸಕ್ರಿಯ ಪ್ರಕರಣ 72,414 ಕ್ಕೆ ಇಳಿಕೆಯಾಗಿದೆ. ಸೋಮವಾರ 88797 ಸ್ವಾéಬ್‌ಗಳನ್ನು ಪರೀಕ್ಷೆ ಒಳಪಡಿಸಲಾಗಿತ್ತು. ಬೆಂಗಳೂರು ನಗರ 2139,ಬೆಳಗಾವಿ 352, ಮೈಸೂರು 222,ತುಮಕೂರು 221,, ದಕ್ಷಿಣ ಕನ್ನಡ 146,ಶಿವಮೊಗ್ಗ 122,ಹಾಸನ 103, ಧಾರವಾಡ 102,ಕೊಪ್ಪಳ 99,ಚಿತ್ರದುರ್ಗ 89,ಕೊಡಗು 81,ಚಾಮರಾಜನಗರ 75, ಕಲಬುರಗಿ 73, ಬಳ್ಳಾರಿ 64 , ಉಡುಪಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





