ಬೆಂಗಳೂರು: ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ.ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.
Read More »ಹಿಜಾಬ್ ವಿವಾದ: ಹೈಕೋರ್ಟ್ ಕೊನೆ ನಿರ್ಧಾರ ಕ್ಕೆ ರಾಜ್ಯ ಸರ್ಕಾರ ಮಾನ್ಯತೆ ಮಾಡುತ್ತದೆ
ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಯಾವುದೇ ತೀರ್ಪು ಕೊಟ್ಟರು ರಾಜ್ಯ ಸರ್ಕಾರ ಮಾನ್ಯತೆ ಮಾಡುತ್ತದೆ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ. ಯಾವುದೇ ತರಹದ ತೊಂದರೆ ಆಗದಂತೆ ಗೃಹ ಇಲಾಖೆ …
Read More »ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷ ಕಾರಣ : ಈಶ್ವರಪ್ಪ
ಚಾಮರಾಜನಗರ: ರಾಜ್ಯದಾದ್ಯಂತ ಹರಡುತ್ತಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಕಾಂಗ್ರೆಸ್ ಮೂಲ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನವರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಉಡುಪಿ ಕಾಲೇಜಿನಲ್ಲಿ 96 ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. 90 ಮಂದಿ ಸಮವಸ್ತ್ರ ಧರಿಸಿಕೊಂಡು ಕಾಲೇಜಿಗೆ ಬರುತ್ತಿದ್ದಾರೆ. ಆರು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಹೇಳುತ್ತಿದ್ದರು. ಕಾಂಗ್ರೆಸ್ ನಾಯಕರು ಅವರಿಗೆ ಬುದ್ಧಿ …
Read More »ಹಿಜಾಬ್ ವಿವಾದ : ವಿಚಾರಣೆಯನ್ನು ಮುಂದೂಡಿದ ಹೈಕೋರ್ಟ್
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿವಾದ ಕುರಿತ ಅರ್ಜಿಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.ಸೋಮವಾರ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ. ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸರಕಾರ ಪರ ವಕೀಲರು ಮತ್ತು ಅರ್ಜಿ ಪರ ವಾದಗಳನ್ನುಅಲಿಸಿದ ನ್ಯಾಯಮೂರ್ತಿಗಳು, ನಾಳೆ ಮಧ್ಯಂತರ ಅರ್ಜಿದಾರರ ವಿಚಾರಣೆ ಸಲ್ಲಿಸಿದೆ.
Read More »ಹಿಜಾಬ್ ವಿವಾದ : ಇಂದು ಸಂಜೆ ಗೃಹ ಸಚಿವರೊಂದಿಗೆ ಮಕತ್ವದ ಸಭೆ
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಇದ್ರಲ್ಲಿ ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.ಇನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ, ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ …
Read More »ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಕೊರೋನಾ ಸೋಂಕು ಪರೀಕ್ಷೆಗಳು ನಡೆದಿದ್ದು, ಹೊಸ ಪ್ರಕರಣಗಳು ಕೂಡಾ ಆರು ಸಾವಿರಕ್ಕೆ ಕುಸಿದಿವೆ. ಇದು 1 ತಿಂಗಳ ಕನಿಷ್ಠ. ಸೋಂಕಿತರ ಸಾವು ಮಾತ್ರ ಐವತ್ತರ ಆಸುಪಾಸಿನಲ್ಲಿಯೇ ಮುಂದುವರೆದಿದೆ. ಸೋಮವಾರ 6,151 ಮಂದಿ ಸೋಂಕಿತರಾಗಿದ್ದು, 49 ಸೋಂಕಿತರು ಸಾವಿಗೀಡಾಗಿದ್ದಾರೆ. 16,802 ಮಂದಿ ಗುಣಮುಖರಾಗಿದ್ದಾರೆ. ಸದ್ಯ 87 ಸಾವಿರ ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 99 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ.6 …
Read More »ತನ್ವೀರ್‌ಸೇಠ್ ಆಸ್ಪತ್ರೆಗೆ ದಾಖಲು
ಮೈಸೂರು: ನಗರದ ತಮ್ಮ ಮನೆಯಲ್ಲಿ ಅಸ್ವಸ್ಥರಾದ ಶಾಸಕ ತನ್ವೀರ್‌ಸೇಠ್ ಅವರನ್ನು ಇಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶೆಣೈ, ‘ಅಸಿಟಿಡಿ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಅವರು ಆಸ್ಪತ್ರೆಗೆ ಬಂದರು. ಕೆಲವೊಂದು ಪರೀಕ್ಷೆಗಳನ್ನು ಮಾಡಬೇಕಿರುವುದರಿಂದ ಒಂದು ದಿನದ ಮಟ್ಟಿಗೆ ದಾಖಲಿಸಿಕೊಳ್ಳಲಾಗಿದೆ. ಸದ್ಯ, ಅವರು ಸಾಮಾನ್ಯ ವಾರ್ಡ್‌ನಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಹೇಳಿದರು.
Read More »ರಾಜ್ಯಾದ್ಯಂತ 3 ದಿನ ಶಾಲಾ-ಕಾಲೇಜುಗಳು ರಜೆ : ಸಿಎಂ ಬೊಮ್ಮಾಯಿ
ಬೆಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
Read More »ಆತ್ಮ ರಕ್ಷಣೆಗೆ ಸಿದ್ದರಾಗುತ್ತಿದ್ದಾರೆ ಧಾರವಾಡ ಪೋರಿಯರು
ಧಾರವಾಡ: ಮಹಿಳೆಯರ ಮೇಲೆ ದೌರ್ಜನ್ಯ, ಹುಡುಗಿಯರನ್ನು ಚುಡಾಯಿಸುವುದು, ವಿದ್ಯಾರ್ಥಿನಿಯರನ್ನು ರೇಗಿಸುವಂತಹ ಚಟುವಟಿಕೆಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಗಟ್ಟುವ ದೃಷ್ಠಿಯಿಂದ ಸರ್ಕಾರ ಓಬವ್ವ ಆತ್ಮ ರಕ್ಷಣಾ ಕಲೆ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದು ವಿದ್ಯಾರ್ಥಿನಿಯರಿಗೆ ವಿವಿಧ ಆತ್ಮ ರಕ್ಷಣಾ ಕಲೆಗಳನ್ನು ಕಲಿಸಲು ಮುಂದಾಗಿದೆ. ಈ ಯೋಜನೆಗೆ ಧಾರವಾಡದಲ್ಲಿ ಅಧೀಕೃತವಾಗಿ ಚಾಲನೆ ನೀಡಲಾಗಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಈ ಓಬವ್ವ ಆತ್ಮ ರಕ್ಷಣಾ ಕಲೆಗೆ …
Read More »ಹಿಜಾಬ್ ವಿವಾದ : 3 ದಿನ ಶಾಲಾ ಕಾಲೇಜು ರಜೆ ಘೋಣಷೆ
ನವದೆಹಲಿ : ಹಿಜಾಬ್ ವಿವಾದ ಕುರಿತು 3 ದಿನ ಶಾಲಾ ಕಾಲೇಜು ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥನಾರಾಯಣ ತಿಳಿಸಿದ್ದಾರೆ. ಹಿಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದ ಲ್ಲಿಯೂ ಸದ್ದು ಮಾಡುತ್ತೀದೆ.ಒಂದೆಡೆ ಹಿಜಾಬ್ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂಡು ಕಡೆ ಶಾಲಾ ಕಾಲೇಜುಗಳಲ್ಲಿ ಪರ ವಿರೋಧ ಪ್ರತಿಭಟನೆ ನಡೆಯುತ್ತಿದ್ದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತೀದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





