ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ನಗರದ ಪಾರ್ಕ್ ನಲ್ಲಿ ನಿರ್ಮಿಸಲಾಗಿದ್ದ, ಕಂಚಿನ ಪುತ್ಥಳಿಯನ್ನೇ ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿ …
Read More »ಲತಾ ಮಂಗೇಶ್ಕರ್ ನಿಧನ : ಅರ್ಧ ದಿನ ರಜೆ ಘೋಷಿಸಿದ ಮಮತಾ ಬ್ಯಾನರ್ಜಿ
ಪಶ್ಚಿಮಬಂಗಾಳ: ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಅರ್ಧ ದಿನ ರಜೆ ಘೋಷಿಸಿದ್ದಾರೆ. ಲತಾ ಮಂಗೇಶ್ಕರ್ ಇಡೀ ದೇಶಕ್ಕೆ ಬೇಕಾದ ಮಹಾನ್ ಚೇತನ. ತಮ್ಮ ಗಾಯನದ ಮೂಲಕ ಎಲ್ಲರ ಹೃದಯಲ್ಲಿಯೇ ಇದ್ದಾರೆ. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಅರ್ಧ ದಿನ ರಜೆ ಕೊಡಲಾಗಿದೆ ಎಂದು ಟ್ವಿಟರ್ ಮೂಲಕ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Read More »ರಾಜ್ಯದಲ್ಲಿ 8,425 ಕೊರೊನಾ ವೈರೆಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8,425 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 47 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಭಾನುವಾರ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಗೆ (97.781) ಕುಸಿದಿದೆ. ಇದರಿಂದ ಪಾಸಿಟಿವಿಟಿ ದರ ಶೇ.6.5ಕ್ಕೆ ಇಳಿದಿದೆ.
Read More »ಆಟೋ ಪಲ್ಟಿ : 2 ಸಾವು, 4 ಜನರಿಗೆ ಗಂಭೀರ ಗಾಯ
ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾಧವರಂ ಬಳಿ ಸಂಭವಿಸಿದೆ. ಮೃತರನ್ನು 37 ವರ್ಷದ ರಾಘವೇಂದ್ರ ಹಾಗೂ 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಿಂದ ರೈಲಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ರಾಯರ ಮಠಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮಾಧವರಂ ಬಳಿ ಆಟೋ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, …
Read More »ಅದ್ದೂರಿಯಾಗಿ ಜರುಗಿದ್ದ ಗ್ರಾಮ ದೇವತೆ ಜಾತ್ರೆ
ಧಾರವಾಡ : ತಾಲ್ಲೂಕಿನ ಲಕ್ಮಾಪುರ ಗ್ರಾಮದಲ್ಲಿ ಶ್ರೀ ದ್ಯಾಮವ್ಬ ಹಾಗೂ ದುರ್ಗಮ್ಮ ಜಾತ್ರೆಯನ್ನು ಗ್ರಾಮಸ್ಥರು ಅದ್ದೂರಿಯಾಗಿ ಆಚರಣೆ ಮಾಡಿದರು. ಗ್ರಾಮದೇವತೆ ಜಾತ್ರೆ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಗ್ರಾಮದಲ್ಲಿ ಹಬ್ಬದ ವಾತವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರೆಲ್ಲರು ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲುಸಿದರು. ಮಹಿಳೆಯರೆಲ್ಲರು ಕುಂಭಮೇಳ ಹಾಗೂ ಆರತಿ ತಟ್ಟೆಯೊಂದಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ದ್ಯಾಮವ್ವ ಮತ್ತು ದುರ್ಗಮ್ಮಾ ದೇವಿಯ ಮೂರ್ತಿಯನ್ನು ಮೆರವಣಿಗೆ ಮಾಡಿದರು. ಇನ್ನೂ ಇದೇ ವೇಳೆ ಗ್ರಾಮದ ಯುವಕರು ಜಾಂಜ್ …
Read More »ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ನಿಧನ
ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ನಿಧನ ಹೊಂದಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವಥ್ ನಾರಾಯಣ್, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಅವರ ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವಥ್ ನಾರಾಯಣ್ ನಿಧನರಾಗಿದ್ದಾರೆ. ಕನ್ನಡದ ಹಲವು ನಟರೊಂದಿಗೆ, ನಟಿಯರೊಂದಿಗೆ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತವರು ನಟ ಅಶ್ವಥ್ …
Read More »ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅಂತ್ಯಕ್ರಿಯೆ
ಮುಂಬೈ: ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ 92 ವರ್ಷದ ಲತಾ ಮಂಗೇಶ್ಕರ್, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಕೊನೆಯುಸಿರೆಳೆದಿದ್ದಾರೆ. ಲತಾ ಅವರ ಪಾರ್ಥಿವ ಶರೀರವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕೊಂಡಯ್ಯಲಾಗುತ್ತಿದ್ದು, ಅಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ …
Read More »ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,07,474 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,07,474 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »ಬಾಲಮಂದಿರ ಕೇಂದ್ರದಿಂದ ಬಾಲಕ ಎಸ್ಕೇಪ್: ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲು
ಹುಬ್ಬಳ್ಳಿ: ಇಲ್ಲಿಯ ಉಣಕಲ್ ನ ಬಾಲಮಂದಿರ ಕೇಂದ್ರದಿಂದ ರಿಜ್ವಾನ್ ಮಸ್ತಾನಖಾನ(೧೩) ಬಾಲಕ ತಪ್ಪಿಸಿಕೊಂಡು ಹೋಗಿದ್ದಾನೆ. ಈ ಬಾಲಕ ಮೂಲತಃ ಬೆಂಗಳೂರಿನ ಓಸ್ವಾಲ್ ನಗರದ ಎಂ.ಎಂ.ಎಸ್ ಪಾಳ್ಯ ವೃತ್ತ ಸಮೀಪದ ನಿವಾಸಿ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
Read More »ಗಾನ ಕೋಗಿಲೆ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು
ನವದೆಹಲಿ: ಕೋವಿಡ್-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದು, ದೇಶದಲ್ಲಿ ಸಂಗೀತದ ಕಳೆ ಕಳಿಚಿದಂತಾಗಿದೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





