ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾ ಮಂಗೇಶ್ಕರ್ ಅವರು ನಮ್ಮ ದೇಶಕ್ಕೆ ತುಂಬಲಾಗದ ನಷ್ಟ ಎಂದು ಅವರು ಟ್ವೀಟ್ ಮಾಡಿದ್ದಾರೆ. ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರವು ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಸಂಜೆ ಶಿವಾಜಿ ಪಾರ್ಕ್ನಲ್ಲಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
Read More »ಗೋವಿಂದ ರೆಡ್ಡಿ ನೂತನ ಜಿಲ್ಲಾಧಿಕಾರಿಯಾಗಿ ನೇಮಕ
ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಗೋವಿಂದ ರೆಡ್ಡಿ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
Read More »ಗಾನ ಕೋಗಿಲೆ ನಿಧನ ಹಿನ್ನಲೆ ದೇಶದಲ್ಲಿ 2 ದಿನಗಳ ಶೋಕಾಚರಣೆ
ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಹೊಂದಿದ್ದಾರೆ. ದೇಶದಲ್ಲಿ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಸಂಸ್ಕಾರ ನೆರವೇರಲಿದೆ.ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದ ಹಿನ್ನಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Read More »ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಕೊರೋನಾ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ ಸಂಖ್ಯೆಯಲ್ಲಿ ಕೊರೋನಾ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 12,009 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸೋಂಕಿನಿಂದಾಗಿ 50 ಮಂದಿಗೆ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,32,796 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 4,535 ಸೇರಿದಂತೆ ಕರ್ನಾಟಕದಲ್ಲಿ 12,009 ಜನರಿಗೆ …
Read More »ಹಿಜಾದ್ ವಿವಾದ ಕುರಿತು ಮಹತ್ವದ ತೀರ್ಮಾನ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವರ್ಸರ್ ಕೇಸರಿ ಶಾಲು ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಸಮವಸ್ತ್ರ ಕುರಿತಂತೆ ಮಹತ್ವದ ಆದೇಶ ಹೊರಡಿಸಿದೆ. ಅದೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜ್ಯದ ಎಲ್ಲಾ ಕಾಲೇಜುಗಳಿಗೆ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪದ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ …
Read More »ಗಾನ ಕೋಗಿಲೆ ಇನ್ನೂ ನೆನಪು ಮಾತ್ರ
ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು. ನಂತರ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
Read More »ಹಿಜಾಬ್ ವಿವಾದ ಕುರಿತು ಪ್ರತಿಕ್ರಿಯಿಸಿದ ಆರ್ ಅಶೋಕ್
ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್ಗೂ ವಿರೋಧವಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದರು. ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಈ ವಿವಾದ ಕುರಿತು ರಾಜಕಾರಣಿಗಳು ಸಹ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೀದ್ದಾರೆ.
Read More »ಸಿದ್ದರಾಮಯ್ಯ ಅಲ್ಪಸಂಖ್ಯಾತರೆಂದರೆ ಓಡಿಹೋಗಿ ಸ್ಟೇಟ್ಮೆಂಟ್ ಕೊಡ್ತಾರೆ :ಆರ್ ಅಶೋಕ್
ಬೆಂಗಳೂರು: ಸಿದ್ದರಾಮಯ್ಯಗೂ ಅಲ್ಪಸಂಖ್ಯಾತರಿಗೂ ಭಾರೀ ನಂಟು,ಅಲ್ಪಸಂಖ್ಯಾತರೆಂದರೆ ಓಡಿಹೋಗಿ ಸ್ಟೇಟ್ಮೆಂಟ್ ಕೊಡ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಹಿಜಾಬ್ ಕಾನೂನಿಗೆ ವಿರುದ್ಧ ಎಂದು ಸರ್ಕಾರ ಹೇಳಿದೆ. ಟಿಪ್ಪು ಜಯಂತಿ ಮಾಡಿದ್ರು, ಶಾದಿ ಭಾಗ್ಯ ಮಾಡಿದರು ಮುಸ್ಲಿಂಮರಿಗೆ ಮಾತ್ರ. ಹಿಂದೂಗಳಲ್ಲಿ ಎಸ್ ಟಿ ಗಳಲ್ಲಿ ಬಡವರು ಇಲ್ಲವೇ?ಹಿಜಾಬ್ ವಿವಾದ ಕಾಂಗ್ರೆಸ್ ಪ್ರೇರಿತವಾದ ಘಟನೆ ಎಂದರು.
Read More »ರಾಹುಲ್ ಗಾಂಧಿ ವಿರುದ್ದ ವ್ಯಂಗ್ಯಮಾಡಿದ ಸಿಟಿ ರವಿ
ಗೋವಾ : ರಾಹುಲ್ ಗಾಂಧಿ ಟೂರಿಸ್ಟ್ ರಾಜಕಾರಣಿ, ಪಕ್ಷ ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ .ರಾಹುಲ್ ಗಾಂಧಿ ಡೈನಾಸ್ಟಿ ಲೀಡರ್, ಜನರ ಲೀಡರ್ ಅಲ್ಲೇ ಅಲ್ಲ. ಅವರ ಮೇಲೆ ಯಾವ ವೋಟು ಬೀಳ್ತಾವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವ್ಯಂಗ್ಯಮಾಡಿದರು. ಗೋವಾದ ಕಲಗುಂಟ್ ಕ್ಷೇತ್ರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಟಿ ರವಿ ರಾಹುಲ್ ಗಾಂಧಿ ಸೀರಿಯಸ್ ರಾಜಕಾರಣಿ ಅಲ್ಲ, ಪಕ್ಷ ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ, …
Read More »ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: .ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ.ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





