ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ.ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ …
Read More »ರಾಜ್ಯಾದ್ಯಂತ 15 ದಿನಗಳ ಕಾಲ ಮಾಜಿ ಸಿಎಂ ಪ್ರವಾಸ
ಬೆಂಗಳೂರು: 15 ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ 130ರಿಂದ 140 ಸೀಟುಗಳನ್ನು ಗೆದ್ದು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಜ್ಜಾಗಿದ್ದಾರೆ. ಬಿಜೆಪಿ ಭಾರಿ ಅಂತರದಲ್ಲಿ ಗೆಲುವುನ್ನು ಸಾಧಿಸಲು ಪ್ರವಾಸ ಕೈಗೊಂಡಿದ್ದಾರೆ.
Read More »ಉತ್ತರ ಕನ್ನಡ ಜಿಲ್ಲೆಯ 101 ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ವಿವಿಧ ಪಕ್ಷಗಳ 101 ಮುಖಂಡರು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕಾಂಗ್ರೆಸ್ಗೆ ಸ್ವಾಗತಿಸಲಾಯಿತು. ಭಾಸ್ಕರ ಪಟಗಾರ್, ಶಂಕರ್ ಗೌಡ, ಅಶೋಕ್ ಗೌಡ, ಕೃಷ್ಣ ಗೌಡ, ರಾಜೇಶ್ ಗೌಡ, ಮುಕುಂದ ಗೌಡ, ಬಲೀಂದ್ರ ಗೌಡ, ಸುಕ್ರು ಗೌಡ, ಬೊಮ್ಮಣ್ಣ ಪಡಿಗಾರ್, ಜಗದೀಶ್ ನಾಯ್ಕ, ನಾಗು ಹಳ್ಳೀರ ಮತ್ತು ಉದಯ ಮಕ್ಕಿ ಶುಕ್ರವಾರ ಕಾಂಗ್ರೆಸ್ ಸೇರಿದವರಲ್ಲಿ ಪ್ರಮುಖರು.
Read More »ಹಿಜಾಬ್ ವಿವಾದ : ಬಿಜೆಪಿ ಮತ್ತು RSS ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ
ಬೆಂಗಳೂರು: ಉಡುಪಿ ಜಿಲ್ಲೆಯ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಜೆಪಿ ಮತ್ತು RSS ವಿಎಎರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ …
Read More »ಆರೋಗ್ಯ ತಜ್ಞರಿಂದ ಒಮಿಕ್ರಾನ್ ಕುರಿತು ಮಹತ್ವದ ಮಾಹಿತಿ ಬಿಡುಗಡೆ
ದೆಹಲಿ: ದೇಶದಲ್ಲೀಗ ಒಮಿಕ್ರಾನ್ ಚಾಲಿತ ಕೊರೊನಾ ಸೋಂಕಿನ ಮೂರನೇ ಅಲೆ ಎದ್ದಿದೆ. ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ. ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್ ತಿಂಗಳ ಹೊತ್ತಿಗೆ ಕೊವಿಡ್ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ …
Read More »ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್.ಸುತಾರ ನಿಧನ
ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್.ಸುತಾರ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿತ್ತು ಎನ್ನಲಾಗಿದೆ. ಇಬ್ರಾಹಿಂ ಎನ್. ಸುತಾರ್ (ಇಬ್ರಾಹಿಂ ನಬೀ ಸಾಹೇಬ್ ಸುತಾರ್) (ಹುಟ್ಟು-10 ಮೇ 1940) ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿರುವ ತತ್ವಪದಕಾರರು ಮತ್ತು ಪ್ರವಚನಕಾರರು.ಇವರಿಗೆ 2018ರ ಪದ್ಮಶ್ರೀ ಪ್ರಶಸ್ತಿಯನ್ನು ಕೊಡಲಾಗಿದೆ.
Read More »ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮಗು ಬಲಿ
ಕೋಲಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ 3 ತಿಂಗಳ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು. ಆದರೆ, …
Read More »ಎಲ್ ಕೆಜಿ, ಯುಕೆಜಿ ಪ್ರಾರಂಭ ಕುರಿತು ಚಿಂತನೆ : ಹಾಲಪ್ಪ ಅಚಾರ್
ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಧಾರ ಮೇಲೆ ತೀರ್ಮಾನ ಮಾಡಲಾಗುವುದು ಎಂದುಸಚಿವ ಹಾಲಪ್ಪ ಅಚಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಸರ್ಕಾರ ಹಂತದಲ್ಲಿ ಮಾತುಕತೆ ನಡೆದಿದೆ ಎಂದರು.
Read More »ವರ್ಗಾವಣೆ ಮಾಡಿರುವ ನಿರ್ಧಾರಕ್ಕೆ ಅಸಮಾಧಾನವಿಲ್ಲ : ಡಾ.ಬಸಪ್ಪ
ಮೈಸೂರು: ಈಚೆಗಷ್ಟೇ ಮೈಸೂರು ವಿಶ್ವವಿದ್ಯಾನಿಲಯವು ಉಪಕುಲಸಚಿವ ಸ್ಥಾನದಿಂದ ಡಾ.ಬಸಪ್ಪ ಅವರನ್ನು ಏಕಾ-ಏಕಿ ವರ್ಗಾವಣೆ ಮಾಡಿರುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸ್ಪಷನೆ ನೀಡಿರುವ ಡಾ.ಬಸಪ್ಪ ಅವರು, ʻವರ್ಗಾವಣೆ ಮಾಡುವುದು ವಿಶ್ವವಿದ್ಯಾನಿಲಯದ ನಿರ್ಧಾರ, ಅದಕ್ಕೆ ನಾನು ಬದ್ಧನಾಗಿದ್ದೇನೆ. ವಿವಿಯ ಯಾವುದೇ ವಿಭಾಗಕ್ಕೆ ವರ್ಗಾವನೆ ಮಾಡಿದರೂ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಇದರಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲʼ ಎಂದು ಸ್ಪಷ್ಟಪಡಿಸಿದ್ದಾರೆ.
Read More »ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸಿದ್ದ
ಬೆಂಗಳೂರು: ವಿಧಾನಪರಿಷತ್ಗೆ ನಡೆಯಲಿರುವ 4 ಸ್ಥಾನಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಗೊಳಿಸಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಘಟಕ ಕಳುಹಿಸಿರುವ ಅಭ್ಯರ್ಥಿಗಳ ಪಟ್ಟಿಗೆ ಹೈಕಮಾಂಡ್ ಹಸಿರುನಿಶಾನೆ ತೋರಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ್ ಶಹಪುರ್, ವಾಯುವ್ಯ ಪದವೀಧರ ಕ್ಷೇತ್ರದಿಂದ ಹಾಲಿ ಮತ್ತೋರ್ವ ಸದಸ್ಯ ಹನುಮಂತ ನಿರಾಣಿ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಗೋ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





