Breaking News

admin

ಯೋಗಿ ಆದಿತ್ಯನಾಥ್ ನಾಮ ಪತ್ರ ಸಲ್ಲಿಕೆ : ಆಸ್ತಿ ಮೊತ್ತ ಘೋಷಣೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಗೋರಖ್ ಪುರ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಯೋಗಿ ಆದಿತ್ಯನಾಥ್ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಆಸ್ತಿ ವಿವರದಲ್ಲಿ 1.5 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.ಸ್ವ ಘೋಷಿತ ಆಸ್ತಿ ಪ್ರಕಾರ ಯೋಗಿ ಆದಿತ್ಯನಾಥ್ ಆಸ್ತಿ 1,54,94,054 ರೂ. ಆಗಿದೆ. ಇದರಲ್ಲಿ ಕೈಯಲ್ಲಿರುವ ನಗದು, 6 ಬ್ಯಾಂಕ್ ಖಾತೆಗಳಲ್ಲಿ ಇರುವ ಮೊತ್ತವೂ ಸೇರಿದೆ. 12 ಸಾವಿರ ರೂ. ಮೌಲ್ಯದ ಸ್ಯಾಮ್ ಸಂಗ್ …

Read More »

ಕ್ಯಾನ್ಸರ್ ರೋಗದಲ್ಲಿ ಭಾರತ 5 ನೇ ಸ್ಥಾನ

ನವದೆಹಲಿ: ಸದ್ಯ ವಿಶ್ವದ ಕ್ಯಾನ್ಸರ್ ಬಾಧಿತ ದೇಶಗಳಲ್ಲಿ ಭಾರತ 5 ನೇ ಸ್ಥಾನ ಪಡೆದಿದೆ. ಕ್ಯಾನ್ಸರ್ ಶೇ. 95 ರಷ್ಟು ಜನರಲ್ಲಿ ತಂಬಾಕು ಸೇವನೆಯಿಂದ ಬರುತ್ತಿದೆ. ತಂಬಾಕಿನಿಂದ ಮುಖ್ಯವಾಗಿ ಬಾಯಿ, ಗಂಟಲು, ಶ್ವಾಸಕೋಶ, ಅನ್ನನಾಳ, ಕರುಳು, ಮೂತ್ರಪಿಂಡ ಮುಂತಾದ ಅಂಗಗಳು ಕ್ಯಾನ್ಸರ್‌ಗೆ ಒಳಗಾಗುತ್ತವೆ. ಮದ್ಯಪಾನ ಮಾಡುವುದು ಮುಂತಾದ ದುಶ್ಚಟಗಳಿಂದ ಕ್ಯಾನ್ಸರ್ ಬರುತ್ತಿದೆ. ದೈಹಿಕ ಚಟುವಟಿಕೆ ಇಲ್ಲದಿರುವುದು, ಸ್ಥೂಲಕಾಯ, ಅಧಿಕ ರಕ್ತದೊತ್ತಡ, ಮಧುಮೇಹ, ಅಧಿಕ ಕೊಲೆಸ್ಟ್ರಾಲ್ ಇತ್ಯಾದಿ ಅಂಶಗಳು ಕ್ಯಾನ್ಸರ್‌ನ್ನು ಮಾರ್ಪಡಿಸಬಹುದಾದ …

Read More »

ಕಾಣೆಯಾಗಿದ್ದ ಯುವಕ ಕಾಲುವೆಯಲ್ಲಿ ಶವವಾಗಿ ಪತ್ತೆ

ವಿಜಯಪುರ : ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ತಾಳಿಕೋಟಿ ತಾಲೂಕಿನ ಕೊಡಗಾನೂರ ಗ್ರಾಮದ ಮೌನೇಶ ಬಸವರಾಜ ಬಡಿಗೇರ (20) ಜನವರಿ 30 ರಂದು ಕೊಡಗಾನೂರ ಮನೆಯಿಂದ ನಾಪತ್ತೆಯಾಗಿದ್ದ ಫೆ.2 ಎಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಕಾಲುವೆಯಲ್ಲಿ ಶವ ಪತ್ತೆಯಾಗಿತ್ತು. ಎರಡು ವರ್ಷಗಳಿಂದ ತಾಳಿಕೋಟೆ ಪಟ್ಟಣದ ಯುವತಿಯನ್ನು ಮಗ ಮೌನೇಶ ಪ್ರೀತಿಸುತ್ತಿದ್ದ ಎಂದು ಒಟ್ಟು 9 ಜನರ ವಿರುದ್ಧ ಮುದ್ದೇಬಿಹಾಳ …

Read More »

ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಫೆ.7ರಂದು ಸಿಎಂ ಚಾಲನೆ

ಬೆಂಗಳೂರು: ಫೆಬ್ರವರಿ 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಪರಿಚಯಿಸುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಲಾಗಿದೆ. ಪ್ರಾಯೋಗಿಕವಾಗಿ 100 ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆ ವತಿಯಿಂದ ಸಮವಸ್ತ್ರ ನೀಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲಾಗುವುದು.

Read More »

ಮನನೊಂದ ಆತ್ಮಹತ್ಯೆಗೆ ಶರಣಾದ ಯುವಕ

ನೆಲಮಂಗಲ: ಕೌಟುಂಬಿಕ ಕಲಹದಿಂದ ನೊಂದಿದ್ದ ವ್ಯಕ್ತಿಯೊಬ್ಬ ಮದ್ಯದೊಂದಿಗೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಮಾಗಡಿಯ ಸಿಡಿಗನಹಳ್ಳಿ ಮೂಲದ ಆನಂದ್ ಕುಮಾರ್ (39) ಆತ್ಮಹತ್ಯೆ ಮಾಡಿಕೊಂಡಿದ್ದ ವಿವಾಹಿತ. ತೋಟನಹಳ್ಳಿಯ ಹೆಂಡತಿ ಮನೆಯಲ್ಲೇ ವಾಸವಿದ್ದ ಆನಂದ್, ಕೌಟುಂಬಿಕ ಕಲಹದಿಂದ ತೀವ್ರವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಅವರು ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ …

Read More »

ಪಶು ಆಸ್ಪತ್ರೆಯ ಉಪಯೋಗವನ್ನು ನಮ್ಮ‌ ರೈತರು ಪಡೆದುಕೊಳ್ಳಲು ಮುಂದಾಗಬೇಕು : ಶ್ರೀರಾಮುಲು

ಬಳ್ಳಾರಿ: ಜಾನುವಾರುಗಳ ರಕ್ಷಣೆ ಹಾಗೂ ಸಂರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಸುಸಜ್ಜಿತವಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಈ ಕ್ಲಿನಿಕ್ ಉದ್ಘಾಟನೆಗೊಂಡಿದ್ದು, ಇದರ ಸದುಪಯೋಗವನ್ನು ನಮ್ಮ ರೈತ ಬಾಂಧವರು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಪಶು ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡ ಪಾಲಿಕ್ಲೀನಿಕ್ ಕಟ್ಟಡಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, …

Read More »

ಯೋಗಿ ಆದಿತ್ಯನಾಥ್ ವಿರುದ್ಧ ದೂರು ನೀಡಿದ ಸಮಾಜವಾದಿ ಪಕ್ಷ

ಲಖನೌ: ಚುನಾವಣಾ ಪ್ರಚಾರದ ಭಾಷಣಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಹೇಳನಕಾರಿ ಹಾಗೂ ಬೆದರಿಕೆಯೊಡ್ಡುವಂಥ ಭಾಷೆ ಬಳಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು (ಎಸ್‌ಪಿ) ಆರೋಪಿಸಿದೆ. ಈ ಕುರಿತು ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅಂಥ ಭಾಷೆ ಬಳಕೆಯನ್ನು ತಕ್ಷಣವೇ ನಿಷೇಧಿಸಬೇಕು ಎಂದು ಒತ್ತಾಯಿಸಿದೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಎಸ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ವಕ್ತಾರ ರಾಜೇಂದ್ರ ಚೌಧರಿ ಪತ್ರ ಬರೆದಿದ್ದು, ಯೋಗಿ ಅವರು ಚುನಾವಣಾ ಭಾಷಣಗಳಲ್ಲಿ …

Read More »

2022 ರ NEET PG ಪರೀಕ್ಷೆ ಮುಂದೂಡಿಕೆ

ಕೊರೊನಾ ಮೂರನೇ ಅಲೆ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ 2022 ರ NEET PG ಪರೀಕ್ಷೆಯನ್ನು 6 ರಿಂದ 8 ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ. ಈ ಪರೀಕ್ಷೆಗಳನ್ನು ಮಾರ್ಚ್‌ 12 ರಂದು ನಡೆಯಲು ನಿಗದಿಪಡಿಸಲಾಗಿದ್ದು, ಇದೀಗ 6 ರಿಂದ 8 ವಾರಗಳ ಕಾಲ ಮುಂದೂಡಿಕೆಯಾಗಿದೆ.ಪರಿಷ್ಕೃತ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

Read More »

ರಾಜ್ಯದ ಎಲ್ಲ ಅಧಿಕಾರಿಗಳಿಗೆ ತಾಕೀತು ಮಾಡಿದ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಅಧಿಕಾರಿಗಳು, ಪಿಡಿಒಗಳು ಪರಸ್ಪರ ಉತ್ತಮ ಸಂಬಂಧ ಇಟ್ಟುಕೊಂಡು ಜನಸಾಮಾನ್ಯರ ಸೇವೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಾಕೀತು ಮಾಡಿದರು. ನಗರದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಪಿಡಿಒಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದೇ ಇರುವವರ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ …

Read More »

ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆಯಾಗಿದೆ. ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055ಕ್ಕೆ ಏರಿಕೆಯಾಗಿದೆ.

Read More »