ಮೈಸೂರು: ಅತೃಪ್ತ ಎಂಎಲ್ಸಿ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ನಲ್ಲಿಯೇ ಇರುವಂತೆ ಮನವರಿಕೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರಿಗೆ ಅವರ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಉನ್ನತ ಹುದ್ದೆಗಳನ್ನು ನೀಡುವ ಸಂಪ್ರದಾಯ ಕಾಂಗ್ರೆಸ್ನಲ್ಲಿ ಇಲ್ಲ. ಶೀಘ್ರದಲ್ಲೇ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಅವರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಚರ್ಚಿಸಿ …
Read More »ಫೆ.25ರಂದು ಓಲ್ಡ್ಮಾಂಕ್ ಚಿತ್ರ ಬಿಡುಗಡೆ
ಶ್ರೀನಿ ನಿರ್ದೇಶನ ಮತ್ತು ನಟನೆಯ ಬಹುನಿರೀಕ್ಷಿತ ಚಿತ್ರ ‘ಓಲ್ಡ್ಮಾಂಕ್’ ಫೆ.25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಅದೇ ಥರ ‘ವಿಕ್ರಾಂತ್ ರೋಣ’ ರಿಲೀಸ್ ಮುಂದಕ್ಕೆ ಹೋಗಿರುವುದರಿಂದ ಅವತ್ತೇ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿ ಕೊಟ್ಟಮಾತನ್ನು ಉಳಿಸಿಕೊಂಡಿದೆ. ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗಿನಲ್ಲಿಯೇ ಫೆ.25ರಂದೇ ಸಿನಿಮಾ ಬಿಡುಗಡೆ ಆಗಲಿದೆ.
Read More »ಉತ್ತರ ಪ್ರದೇಶ ಚುನಾವಣೆ : ಕೇಂದ್ರ ಗೃಹರೊಂದಿಗೆ ಯೋಗಿ ಆದಿತ್ಯನಾಥ್ ನಾಮ ಪತ್ರ ಸಲ್ಲಿಕೆ
ದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾಚಣೆ ಯು ಚುರುಕುಗೊಂಡಿದೆ. ಮೊದಲ ಹಂತದ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಜೋರಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ತೆರಳಲಿದ್ದಾರೆ.ದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧೆ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಗೋರಖ್ಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದಾರನಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
Read More »ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ವಿಡಿಯೋ ವೈರೆಲ್
ಮಂಗಳೂರು: ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಫೆಬ್ರವರಿ 3 ರಂದು ಸಂಜೆ 4 ಗಂಟೆಗೆ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಕಾರಿನ ಚಾಲಕ ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು …
Read More »ಸಿಎಂ ಇಬ್ರಾಹಿಂ ವಿರುದ್ಧ ಈಶ್ವರಪ್ಪ ವಾಗ್ದಾಳಿ
ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಇಬ್ರಾಹಿಂ ಅವರನ್ನು ಯಾವ ಕಾರಣಕ್ಕೂ ಬಿಜೆಪಿಗೆ ಸೇರಿಸಲ್ಲ.ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರು. ಇದೇ ವೇಳೆ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಕಾಂಗ್ರೆಸ್ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ, 17 …
Read More »ಕೇಂದ್ರ ಬಜೆಟ್ನಲ್ಲಿ ರೈಲ್ವೆ ವಲಯಕ್ಕೆ ಲಭಿಸಿದ ಭರ್ಜರಿ ಅನುದಾನ
ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಹೊಸ ವರ್ಷದ 2022 ಬಜೆಟ್ ಮಂಡಿಸಿದ್ದಾರೆ.ಆದರೆ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ನಲ್ಲಿ ನೈಋತ್ಯ ರೈಲ್ವೆ ವಲಯಕ್ಕೆ 6,900 ಕೋಟಿ ರೂ. ಅನುದಾನ ಲಭಿಸಿದೆ. ಕರ್ನಾಟಕದ ಪಾಲಿಗೇ 6 ಸಾವಿರ ಕೋಟಿ ರೂ. ದೊರಕಿದೆ. ನೈಋತ್ಯ ರೈಲ್ವೆಗೆ ಈವರೆಗೆ ದೊರೆತ ಅತಿ ಹೆಚ್ಚಿನ ಅನುದಾನ ಇದಾಗಿದೆ. ಇದರಲ್ಲಿ ಕರ್ನಾಟಕ ಸರ್ಕಾರ ಜೋಡಿಸಿಕೊಡಬೇಕಿರುವ 780 ಕೋಟಿ ರೂ. ಸೇರಿದೆ. 2020-21ನೇ ಸಾಲಿನ ಬಜೆಟ್ನಲ್ಲಿ ನೈಋತ್ಯ …
Read More »ಕೊರೋನಾ ಪರೀಕ್ಷೆ ಕುರಿತು ಹೊಸ ನಿಯಮ ಜಾರಿಗೆ
ಬೆಂಗಳೂರು : ಕೊರೊನಾ ಪರೀಕ್ಷೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಮಾಡಿಸಬೇಕು. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಹಿರಿಯ ನಾಗರಿಕರಿಗೆ ( 60 ವರ್ಷ …
Read More »ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ರಸ್ತೆಗಿಳಿದ ವೀರಶೈವ ಲಿಂಗಾಯತ ಸಮಾಜ
ಹುಬ್ಬಳ್ಳಿ: ಇತ್ತೀಚೆಗೆ ಹುಮನಾಬಾದ್ ತಹಶೀಲ್ದಾರ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಕುರ್ಚಿಗಳನ್ನು ಧ್ವಂಸಗೊಳಿಸಿ, ಕರ್ತವ್ಯ ನಿರತ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದರು. ಈ ಕೃತ್ಯದಲ್ಲಿ ಭಾಗಿಯಾದ ಎಲ್ಲರ ಮೇಲೆ ಗೂಂಡಾ ಕಾಯ್ದೆ ಅಡಿಯಲ್ಲಿ ಕಠಿಣಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಮಾಜ ಒತ್ತಾಯಿಸಿದೆ. ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು …
Read More »ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಯಾದಗಿರಿ ಮೂಲದ ಹನುಮಂತು (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತುಗೆ ಕಿಡ್ನಿ ಫೇಲ್ಯೂರ್ ಆಗಿತ್ತು.ಇದರಿಂದ ಮನನೊಂದು ಯಶವಂತಪುರದ ಕೊಲಂಬಿಯಾ ಆಸ್ಪತ್ರೆ ಬಳಿಯ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ತಂದೆ-ತಾಯಿ ಬಿಬಿಎಂಪಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಹನುಮಂತನಿಗೆ ಚಿಕಿತ್ಸೆ ಕೊಡಿಸಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರುನಲ್ಲಿ ಪ್ರತಿಭಟನೆ
ಮೈಸೂರು: ಇಲ್ಲಿನ ಮಾನಸ ಗಂಗೋತ್ರಿಯಲ್ಲಿಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕ್ಲಾಕ್ ಟವರ್ ನಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದ ದಿನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿ ಮುಖಂಡರಾದ ಎಸ್.ಮರಿದೇವಯ್ಯ, ಮಹೇಶ್ ಸೋಸಲೆ, ನಂಜುಂಡಸ್ವಾಮಿ, ಹೂವಿನ ಸಿದ್ದು, ಕರುಣಾ, ಸರಸ್ವತಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





