Breaking News

admin

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ ಕರ್ನಾಟಕದ 6 ಶೈಕ್ಷಣಿಕ ಜಿಲ್ಲೆಗಳ ಶಾಲೆಗಳಿಗೆ ಒಟ್ಟು 5000 …

Read More »

ರೈತನ ಮೇಲೆ ಒಂಟಿ ಸಲಗ ದಾಳಿ

ಮೃಸೂರ : ಜಿಲ್ಲೆಯ ರೈತನ ಮೇಲೆ ಒಂಟಿ ಸಲಗ ದಾಳಿ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾದ ಘಟನೆ ನಡೆದಿದೆ. ಕೊಳವಿಗೆ ಗ್ರಾಮದ ರೈತ ರಾಜೇಶ್(50) ಮೃತಪಟ್ಟವರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಹೊಳೆ ವೀರನಹೊಸಹಳ್ಳಿ ಅರಣ್ಯ ವಲಯದಿಂದ ಕಾಡಾ‌ನೆ ಬಂದಿತ್ತು. ರೈತ ರಾಜೇಶ್ ಮನೆ ಹಿಂಭಾಗ ಹಿತ್ತಲಲ್ಲಿ ದನಗಳಿಗೆ ಹುಲ್ಲು ತರಲು ಹೋಗುವಾಗ ಪಕ್ಕದ ಜಮೀನಿನಲ್ಲಿ ನಿಂತಿದ್ದ ಒಂಟಿ …

Read More »

ಭಾರತದಲ್ಲಿ 1,72,433 ಕೋವಿಡ್ ಪತ್ತೆ

ನವದೆಹಲಿ : ಭಾರತದಲ್ಲಿ ಇಂದು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕೊಂಚ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ರಾಜ್ಯದಲ್ಲಿ ಕೊರೋನಾ ಪ್ರಕರಣ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 20505 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 38,44,338ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಬರೋಬ್ಬರಿ 81 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39137ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More »

ಕಾರಿಗೆ ಬಸ್ ಡಿಕ್ಕಿ : 17 ಪ್ರಯಾಣಿಕರು ಗಂಭೀರ ಗಾಯ

ಚಿತ್ತೂರ್ ಗಢ್ : ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ  ಬಸ್ ಪಲ್ಟಿಯಾಗಿ ಮಗುಚಿ ಬಿದ್ದಿದೆ.  9 ಮಹಿಳೆಯರು ಸೇರಿದಂತೆ 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಉದಯ್ಪುರ ಕೋಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಡೆದಿದೆ. ಪ್ರಯಾಣಿಕರ ಪೈಕಿ 17 ಜನರು ಗಾಯಗೊಂಡಿದ್ದಾರೆ. 9 ಮಹಿಳೆಯರೂ ಇದರಲ್ಲಿದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ತಾನದ ಉದಯ್ಪುರ ಮಾರ್ಗವಾಗಿ …

Read More »

ಕೇಂದ್ರ ಬಜೆಟ್ ಶ್ಲಾಘಿಸಿದ್ದ ಪ್ರಧಾನಿ ಮೋದಿ

ಯುವಕರು, ಮಧ್ಯಮ ವರ್ಗ ಹಾಗೂ ಬಡವರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ.ಬಜೆಟ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳಿವೆ.ಇದು ಉತ್ತಮ ಬಜೆಟ್ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಬಜೆಟ್ ಬಗ್ಗೆ ಮಾತನಾಡಿ, ಕೊರೋನಾ ಈಗಲೂ ಹೋಗಿಲ್ಲ. ವಿಶ್ವವೇ ಕೊರೋನಾದಿಂದ ಕಂಗಾಲಾಗಿದೆ. ಈ ನಡುವೆ ಬಜೆಟ್ ಆರ್ಥಿಕವಾಗಿ ಆಶಾದಾಯಕವಾಗಿದೆ. ಆಧುನಿಕ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದಿದ್ದಾರೆ.

Read More »

ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.

Read More »

ಪೋಲಿಸ್ ಜೀಪ್ ನೇ ಎಸ್ಕೇಪ್ ಮಾಡಿದ ಬೂಪಾ

ಧಾರವಾಡ : ಚಾಣಾಕ್ಷತನದಿಂದ ಕಳ್ಳರನ್ನು ಸೆರೆ ಹಿಡಿಯುವ ಪೋಲಿಸ್ ರ ವಾಹನವನ್ನು ಕಳ್ಳತನ ಮಾಡಿರುವ ಘಟನೆ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ಪ್ರತಿದಿನ ಪೊಲೀಸ್ ವಾಹನವನ್ನು ಕ್ಲೀನ್ ಮಾಡಲು ಠಾಣೆ ಗೆ ಬರುತ್ತಿದ್ದ ವ್ಯಕ್ತಿ ಪೊಲೀಸ್ ಠಾಣೆ ಯಿಂದ ಪೊಲೀಸ್ ಜೀಪ್ ನೊಂದಿಗೆ ಎಸ್ಕೇಪ್ ಆಗಿದ್ದಾನೆ. ಅಣ್ಣಿಗೇರಿ ಪಟ್ಟಣದ ನಿವಾಸಿ ನಾಗಪ್ಪ ಹಡಪದ ಎಂಬುವರಿಂದ ಕಳ್ಳತನವಾಗಿದೆ. ಪೊಲೀಸ್ ಜೀಪ್ ನೊಂದಿಗೆ ನಾಗಪ್ಪ ನ ಬಂಧನ ಮಾಡಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆ ಯಲ್ಲಿ …

Read More »

ಎಪ್ರಿಲ್‌ ನಲ್ಲಿ ಪ್ರಧಾನಿ ಶಿವಮೊಗ್ಗಕ್ಕೆ ಆಗಮನ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್‌ ತಿಂಗಳಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. ವಿವಿಧ ಗ್ರಾಮಗಳಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ವೇಳೆ ಶಿವಮೊಗ್ಗ ಜಿಲ್ಲೆಯ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಅತ್ಯುತ್ತಮ ಗ್ರಾಮ ಪ್ರಶಸ್ತಿ ಪಡೆದ ಆಯ್ದ ಗ್ರಾಮಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದಾರೆ ಎಂದರು.

Read More »

ಫೆ. 8 ರಂದು ಗೋವಾದಲ್ಲಿ ಮಾಜಿ ಸಿಎಂ ಚುನಾವಣೆ ಪ್ರಚಾರ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಸಿದ್ದರಾಮಯ್ಯ ಗೋವಾದಲ್ಲಿ ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ . ಫೆಬ್ರವರಿ 8, 9ರಂದು ಗೋವಾದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಗೋವಾದಲ್ಲಿ ಕನ್ನಡಿಗರು ಹೆಚ್ಚಿರುವ ಕಡೆ ಸಿದ್ದರಾಮಯ್ಯ ಪ್ರಚಾರಕ್ಕಿಳಿಯಲಿದ್ದಾರೆ. ಫೆಬ್ರವರಿ 7 ರಂದು ಬಳ್ಳಾರಿಯಲ್ಲಿ ಭೀಮಾ ನಾಯ್ಕ್​ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಗೋವಾದ ವಿಧಾನಸಭಾ ಚುನಾವಣೆಯ ಅಂಗವಾಗಿ ಅಲ್ಲಿಗೆ ಪ್ರಚಾರಕ್ಕೆ ತೆರಳಲಿದ್ದಾರೆ.

Read More »