Breaking News

admin

ಮಾಜಿ ಸಿಎಂ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಳಗಾವಿ: ರಾಜ್ಯದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹವಾ ಮುಗಿದಿದೆ. ಇನ್ನೂ ಮೂರು ನಾಲ್ಕು ಜನರು ಇದದಾರೆ. ಅವರ ಹವಾ ಕೂಡ ಸದ್ಯದಲ್ಲೇ ಮುಗಿಯಲಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ನಾನು ಎಲ್ಲಿಯೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಕೇವಲ 2ನೇ ನಾಯಕತ್ವದ ಬಗ್ಗೆ ಮಾತನಾಡಿದ್ದೇನೆ. ಈಗ ಪಕ್ಷಕ್ಕೆ 2ನೇ ನಾಯಕತ್ವ ಬೇಕಾಗಿದೆ. ಬಿಜೆಪಿ ಹೈಕಮಾಂಡ್ ಆ …

Read More »

ಫೆ.7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ವೇಳಾಪಟ್ಟಿ ನಿಗದಿ : ಬೊಮ್ಮಾಯಿ

ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇವಿವಿಧ ಇಲಾಖೆಗಳೊಂದಿಗೆಳಿದರು.

Read More »

ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ : ಆರ್.ಅಶೋಕ್

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆಯಾಗಬಾರದು. ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರದ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ನಮಗೆ ಅನ್ಯಾಯವಾಗುವ ರೀತಿಯಿದ್ದರೆ ನಾವು ಒಪ್ಪುವುದಿಲ್ಲ ಎಂದರು.

Read More »

KAS ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ತರಗತಿಗಳಿಗೆ ಚಾಲನೆ

ಧಾರವಾಡ: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಡೆಸಲಾಗುವ 3 ತಿಂಗಳ KAS ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ತರಗತಿಗಳಿಗೆ ಇಂದು ಚಾಲನೆ ನೀಡಲಾಯಿತು. ಧಾರವಾಡದ ಸಿ ಬಿ ನಗರದಲ್ಲಿ ನಿರ್ಮಿಸಲಾಗಿರುವ ನೂತನ ಸ್ಟುಡಿಯೊದಲ್ಲಿ ಆನ್‌ಲೈನ್‌ ತರಗತಿಗಳಿಗೆ ಮಾಜಿ ಸಚಿವರಾದ ಶ್ರೀ ಸಂತೋಷ್‌ ಲಾಡ್‌ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಬಡ ಮತ್ತು ಪ್ರತಿಭಾವಂತ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಕಡಿಮೆ ದರದಲ್ಲಿ ತರಬೇತಿ …

Read More »

ಚಿಕ್ಕಮಗಳೂರುನಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಪ್ರತಿಭಟನೆ ಯಶಸ್ವಿ

ಚಿಕ್ಕಮಗಳೂರು: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನಿಸಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಕರೆ ನೀಡಿದ್ದ ನಗರ ಬಂದ್ ಭಾಗಶಃ ಯಶಸ್ವಿಯಾಯಿತು. ದಲಿತ ಸಂಘರ್ಷ ಸಮಿತಿ, ಬಿವಿಎಸ್, ಎಸ್‌ಡಿಪಿಐ, ಹಜರತ್ ಟಿಪ್ಪು ಸುಲ್ತಾನ್‌ ಅಭಿಮಾನಿಗಳ ಸಂಘದ ಕಾರ್ಯಕರ್ತರು ಬೆಳಿಗ್ಗೆಯೇ ರಸ್ತೆಗಿಳಿದು ದ್ವಿಚಕ್ರ ವಾಹನಗಳಲ್ಲಿ ನಗರದಲ್ಲಿ ಸುತ್ತಿದರು.ಅಂಗಡಿ ಮುಂಗಟ್ಟು ತೆರೆಯದಂತೆ ಮಾಲೀಕರಿಗೆ ಮನವಿ ಮಾಡಿ, ಬಾಗಿಲು ಮುಚ್ಚಿಸಿದರು. ನಗರದ ಐಜಿ ರಸ್ತೆ, ಎಂ.ಜಿ ರಸ್ತೆ, …

Read More »

ನ್ಯಾಯಾಧೀಶರು ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ : ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಹಾಗೂ ರಾಜ್ಯದ ಸಕಲ ನ್ಯಾಯಾಲಯಗಳಲ್ಲಿ ಡಾ. ಬಿ.ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕೆಂದು ಆಗ್ರಹಿಸಿ ನಗರದ ತಹಶಿಲ್ದಾರ ಕಚೇರಿ ಬಳಿ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ ವತಿಯಿಂದ  ತಹಶಿಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಲಾಯಿತು. ನಗರದ ಮುಖ್ಯ ಅಂಚೆ ಕಛೇರಿ …

Read More »

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ ಸುಮಾರು 461 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 39 ಮಂದಿ ಚಿಕತ್ಸೆಗೆ ಮುನ್ನವೇ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. 39 ಸಾವಿನ ಪೈಕಿ, 32 ಮಂದಿ ಮನೆಯಲ್ಲೇ ಸಾವಿಗೀಡಾಗಿದ್ದಾರೆ. ಇನ್ನು 7 ಮಂದಿ …

Read More »

ಬಸ್‌, ಲಾರಿ, ಕಾರು ನಡುವೆ ಸರಣಿ ಅಪಘಾತ

ದಾಬಸ್‌ಪೇಟೆ: ಸೋಂಪುರ ಹೋಬಳಿಯ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ಐರಾವತ ಬಸ್‌, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಜ.30 ರಂದು ನಡೆದಿತ್ತು. ಮಧ್ಯಾಹ್ನ 2ರ ವೇಳೆಗೆ ಎಡೇಹಳ್ಳಿ ಬಳಿ ರಸ್ತೆಬದಿಗೆ ನಿಂತಿದ್ದ ಸಕ್ಕರೆ ಮೂಟೆಗಳ ತುಂಬಿದ್ದ ಲಾರಿಗೆ ಹಿಂಬದಿಯಿಂದ ಐರಾವತ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಮುಂಭಾಗ ಪೂರ್ಣವಾಗಿ ಜಖಂಗೊಂಡಿದ್ದು ಅದೃಷ್ಟವಷಾತ್‌ ಬಸ್‌ನಲ್ಲಿದ್ದವರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ …

Read More »

ಹೇಣಕ್ಕೆ ಹೋದವರು ಮಸಣ ಸೇರಿದರು

ರೋಣ: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಹೋದವರೂ ರಸ್ತೆ ಅಪ​ಘಾ​ತ​ದಲ್ಲಿ ಮಸಣ ಸೇರಿದ ದಾರುಣ ಘಟನೆ ತಾಲೂಕಿನ ಹಿರೇಹಾಳ ಮತ್ತು ಬಾದಾಮಿ ತಾಲೂಕಿನ ಜಾಲಿಹಾಳ ಮಧ್ಯೆ ಭಾನುವಾರ ರಾತ್ರಿ ನಡೆ​ದಿ​ದೆ. ಅಂತ್ಯ ಸಂಸ್ಕಾರ ಮುಗಿಸಿ ಗ್ರಾಮಕ್ಕೆ ಮರ​ಳು​ತ್ತಿದ್ದ ಸಂದ​ರ್ಭ​ದ​ಲ್ಲಿ ಹಿರೇಹಾಳ ಬಳಿ ವಾಹ​ನ​ವೊಂದು ಕಾರಿಗೆ ಡಿಕ್ಕಿ ಹೊಡೆ​ದಿದ್ದು ,ಘಟನೆಯಲ್ಲಿ ತಾಲೂಕಿನ ಡ.ಸ. ಹಡಗಲಿ ಗ್ರಾಮದ ಕಾರು ಚಾಲಕ ಮಂಜುನಾಥ ಮಾರನಬಸರಿ (35), ಬಸನಗೌಡ ಪಾಟೀಲ (66) ಮತ್ತು ಸಂಗಮ್ಮ ಪಾಟೀಲ (55) ಮೃತಪಟ್ಟಿ​ದ್ದಾ​ರೆ. …

Read More »

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ

Read More »