ಮಂಡ್ಯ: ನಾನು ಸ್ವಾಮೀಜಿ ಅಲ್ಲ ಎಂದು ನನಗೆ ಸರ್ಟಿಫಿಕೇಟ್ ಕೊಡುವುದು ಬೇಡ ಅದರ ಬದಲು,ತಮ್ಮ ಕ್ಷೇತ್ರವನ್ನು ಪ್ರಗತಿಯ ಪಥ ದಲ್ಲಿ ಕೊಂಡೊಯ್ಯಲಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಋಷಿಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಇನ್ನೂ ನಿಮ್ಮ ಪ್ರತಾಪಕ್ಕೆ ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಂಬರೀಶ್ ಅಮ್ಮಾ ಅಲ್ಲ ಎಂದು ಶ್ರೀರಂಗಪಟ್ಟಣ ಟೌನ್ ಠಾಣೆಗೆ ಸಹಿ ಹಾಕಲು ಬಂಧಾಗ ಕಾಳಿ …
Read More »ಫೆ.2 ಕ್ಕೆ ಹೂಲಿ ಪ್ರಕಾಶನ ವತಿಯಿಂದ ಪುಸ್ತಕಗಳ ಬಿಡುಗಡೆ ಸಮಾರಂಭ
ಹುಬ್ಬಳ್ಳಿ: ಶ್ರೀ ಶರಣ ಮಡಿವಾಳಪ್ಪ ಹೂಲಿ ಚಾರಿಟೇಬಲ್ ಟ್ರಸ್ಟ್ ಹುಬ್ಬಳ್ಳಿ ಹಾಗೂ ಹೂಲಿ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ದಿ.ಶ್ರೀ ಹುಚ್ಚೇಶ್ವರ ಮೇದಿ ಅವರ ಪರಿಕ್ಷಿತ ಹೂಲಿ ಮಡಿವಾಳಪ್ಪನವರ ಚರಿತ್ರೆ ಮತ್ತು ವೀರಣ್ಣ ಹೂಲಿ ಅವರ ಹೂದೊಟದ ಬೆಳದಿಂಗಳು ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಫೆ.2 ರಂದು ಸಂಜೆ 4 ಗಂಟೆಗೆ ಮೂರುಸಾವಿರಮಠ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ವೀರಣ್ಣ ಹೂಲಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ …
Read More »ಡಾ.ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಸಚಿವ ಮುನೇನಕೊಪ್ಪ, ಶೆಟ್ಟರ್
ಧಾರವಾಡ: ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿರುವ ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗೆ ಜಂಟಿಯಾಗಿ ಭೇಟಿ ನೀಡಿದ ಶೆಟ್ಟರ್ ಹಾಗೂ ಮುನೇನಕೊಪ್ಪ, ವೆಂಟಿಲೇಟರ್ ಮೇಲೆ ಇರುವ ಕಣವಿ ಅವರನ್ನು ನೋಡಿ, ಅವರ ಆರೋಗ್ಯದ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
Read More »ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? : ವಿಶ್ವನಾಥ್
ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು.ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು.
Read More »ದೇಶದಲ್ಲಿ 2.34 ಲಕ್ಷ ಕೋವಿಡ್ ಪ್ರಕರಣ ಪತ್ತೆ
ನವದೆಹಲಿ : ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 2.34 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 893 ಸೋಂಕಿತರು ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ 1.19ರಷ್ಟುಇಳಿಕೆ ಕಾಣುವ ಮೂಲಕ 18.84 ಲಕ್ಷಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಜೊತೆಗೆ ದೈನಂದಿನ ಪಾಸಿಟಿವಿಟಿ ದರ ಶೇ.14.5ರಷ್ಟು ಮತ್ತು ವಾರದ ಪಾಸಿಟಿವಿಟಿ ದರ ಶೇ.16.4ರಷ್ಟಿದೆ. ಈವರೆಗೆ ದೇಶದಲ್ಲಿ 165.7 ಕೋಟಿ ಡೋಸ್ ಕೋವಿಡ್ …
Read More »ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಆಯ್ಕೆ
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.
Read More »ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇವಸ್ಥಾನಗಳು ಓಪನ್
ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಪ್ರಮುಖ ದೇವಾಲಯಗಳ ಬಾಗಿಲು ತೆರೆಯಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಈ ಬಗ್ಗೆ ಹೊಸ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಇಂದಿನಿಂದ ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇವಸ್ಥಾನಗಳು ಭಕ್ತರ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.
Read More »ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ : ಅರವಿಂದ ಬೆಲ್ಲದ ಸ್ಪಷ್ಟನೆ
ಧಾರಾವಾಡ : ಬೆಲ್ಲದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎನ್ನುವುದು ಶುದ್ದ ಸುಳ್ಳು. ಬೇರೆ ಬೇರೆ ಪತ್ರಿಕೆಗಳಲ್ಲಿ ಆ ಕುರಿತು ಸುದ್ದಿ ಪ್ರಕಟವಾಗಿತ್ತು,ಆದರೆ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ. ಪಕ್ಷದಲ್ಲೆ ಇದ್ದು ಪಕ್ಷ ಬೆಳೆಸುವ ಕೆಲಸ ಮಾಡುತ್ತೇನೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಟಿ ಏರ್ಪಡಿಸಿ ಮಾತನಾಡಿದ ಅವರು, ಇದುವರೆಗೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳ ಕುರಿತು …
Read More »ಚಾಲಕರ ಸಿಬ್ಬಂದಿ ಕಾಯಂ ನೇಮಕಾತಿ ಆಗ್ರಹಿ ಪ್ರತಿಭಟನೆ
ಧಾರವಾಡ: ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಕಾಯಂ ಸಿಬ್ಬಂದಿ ಎಂದು ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಾಲಕರು ಇಂದು ಪ್ರಚಾರ ಸಭಾದ ಎದುರು ಪ್ರತಿಭಟನೆ ನಡೆಸಿದರು. ಕಳೆದ 10 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ ಕೆಲಸ ಮಾಡಲಾಗುತ್ತಿದೆ. ಕಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದಒತ್ತಾಯಿ ಸಿದ್ದಕ್ಕಾಗಿ ಇಬ್ಬರು ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. 10 ವರ್ಷಗಳಿಂದ ಸೇವೆ ಸಲ್ಲಿಸಿದ್ದಕ್ಕೆ ಸಂಸ್ಥೆಯು ಯಾವುದೇ …
Read More »ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಪ್ರತಿಭಟನೆ
ಹುಬ್ಬಳ್ಳಿ : ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿಟ್ಟರೇ ಧ್ವಜಾರೋಹಣ ಮಾಡುವುದಿಲ್ಲ ಎಂದು ಉದ್ಧಟತನ ಹೇಳಿಕರ ನೀಡಿದ್ದ, ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ಬಿ.ಆರ್.ಅಂಬೇಡ್ಕರ್ ಸೈನ್ಯ ವತಿಯಿಂದ ನಗರದ ತಹಶಿಲ್ದಾರರ ಕಚೇರಿ ಆವರಣದ ಬಳಿ ಆಗ್ರಹಿಸಲಾಯಿತು. ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮನವಿ ಸಲ್ಲಿಸಿ ಮಾತನಾಡಿದ ಸೈನ್ಯದ ಪ್ರಮುಖರು, ಮಲ್ಲಿಕಾರ್ಜುನಗೌಡ ತಮ್ಮ ವೃತ್ತಿಗೆ ಅವಮಾನ ಮಾಡಿದರಲ್ಲದೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





