ಧಾರವಾಡ: ಆಕಾಶವಾಣಿಯ ವಸತಿ ಗೃಹಗಳಿಗೆ ಕಳ್ಳರು ಬೀಗ ಜಡಿದ ಘಟನೆ ಮಧ್ಯರಾತ್ರಿ ನಡೆದಿದೆ. ಆಕಾಶವಾಣಿ ಕ್ವಾರ್ಟರ್ಸನಲ್ಲಿನ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕೃತ್ಯ 8 ಮನೆಗಳಿಗೆ ಬೀಗ ಹಾಕಿದ್ದಾರೆ. ದರೋಡೆ ಮಾಡಲು ಬಂದವರಿಂದ ನಡೆದ ಕೃತ್ಯ ನಡೆದಿದೆ ಎನ್ನುವ ಸಂಶಯ ಪೊಲೀಸರದ್ದಾಗಿದೆ.ಮನೆಯಿಂದ ಇಂದು ಹೊರಗೆ ಬಾರದೆ ಆಕಾಶವಾಣಿ ಸಿಬ್ಬಂದಿ ಪರಿತಪಿಸಿದ ಘಟನೆ ನಡೆಯಿತು. ಒಳಗಿನಿಂದ ಬಾಗಿಲು ತೆರೆಯಲು ಬಾರದಿದ್ದಾಗ ಗಮನಕ್ಕೆ ಬಂದಿದೆ ಎನ್ನಲಾಗಿದೆ. ಮನೆಗೆ ಬೀಗ ಹಾಕಿ ಊರಿಗೆ ಹೋಗಿರಬೇಕೆಂದು …
Read More »ಚನ್ನಣ್ಣನವರ್ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ : ಪ್ರೆಸ್ನೋಟ್ ನಲ್ಲಿ ಮೌನ ಮುರಿದ ಕರ್ನಾಟಕದ ಸಿಂಗಂ
ಬೆಂಗಳೂರು: ಕರ್ನಾಟಕದ ಸಿಂಗಂ ಎಂದೆ ಖ್ಯಾತಿ ಆಗಿರುವ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಯೂತ್ ಐಕಾನ್ ಆಗಿ ಗುರುತಿಸಿಕೊಂಡ ರವಿ ವಿರುದ್ಧ ಭ್ರಷ್ಟಾಚಾರದ ಆರೋಪ ಜನಸಾಮಾನ್ಯರಲ್ಲೂ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟುಹಾಕಿತ್ತು. ಕೊನೆಗೂ ಮೌನ ಮುರಿದ ರವಿ, ಪ್ರೆಸ್ನೋಟ್ನಲ್ಲಿ ಮಹತ್ವದ ವಿಚಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ‘ಕೆಲ ವ್ಯಕ್ತಿಗಳು ನನ್ನ ಹಾಗೂ ನನ್ನ ಕುಟುಂಬದ ಮೇಲೆ ದುರುದ್ದೇಶದಿಂದ ಸುಳ್ಳು …
Read More »ರಾಜ್ಯದಲ್ಲಿ 28,264 ಕೊರೋನ ಪ್ರಕರಣಗಳು ದೃಢ
ಬೆಂಗಳೂರು: ರಾಜ್ಯದಲ್ಲಿ ರವಿವಾರ 28,264 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 68 ಮಂದಿ ಸೋಂಕಿಗೆ ಬಲಿಯಾಗಿದ್ದು, 29,244 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3785295ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,942ಕ್ಕೆ ತಲುಪಿದೆ.
Read More »ಬೈಕ್ ಗೆ ಲಾರಿ ಡಿಕ್ಕಿ : ಇಬ್ಬರು ಸಾವು
ಕಲಘಟಗಿ: ತಾಲ್ಲೂಕಿನ ತಂಬೂರ ಕ್ರಾಸ್ ಬಳಿ ಹುಬ್ಬಳ್ಳಿ- ಕಾರವಾರ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ನಡೆದ ಲಾರಿ, ಬೈಕ್ ಡಿಕ್ಕಿಯಲ್ಲಿ ಬೈಕ್ ಸವಾರರಾದ ಧಾರವಾಡ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರಾದ ನೂರಅಹ್ಮದ್ ಬೆಳಗಾಮ್ (38) ಹಾಗೂ ಜಾವಿದ್ ಪಠಾಣ್ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ …
Read More »ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಮಲ್ಲಿಕಾರ್ಜುನ ಪುರದನಗೌಡರ ಆಯ್ಕೆ
ಕಲಘಟಗಿ: ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಮಲ್ಲಿಕಾರ್ಜುನ ಪುರದನಗೌಡರ ಆಯ್ಕೆಯಾಗಿದ್ದಾರೆ. ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಅವರ ಆದೇಶದ ಮೇರೆಗೆ ಆಯ್ಕೆ ಮಾಡಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »1ರೂ. ಶುಲ್ಕ ನಿಗದಿ ಮೇರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ಆನ್ಲೈನ್’ ತರಬೇತಿ
ಕಲಘಟಗಿ: ಮಾಜಿ ಸಚಿವ ಸಂತೋಷ್ ಲಾಡ್ ಫೌಂಡೇಷನ್ ವತಿಯಿಂದ ಫೆ.2ರಿಂದ ಕೆ.ಎ.ಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ಆನ್ಲೈನ್’ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳಿಗೆ ₹1 ಶುಲ್ಕ ನಿಗದಿ ಪಡಿಸಲಾಗಿದೆ. ಧಾರವಾಡದ ವಿಶ್ವದರ್ಶನ ಕರಿಯರ ಅಕಾಡೆಮಿ ಸಹಕಾರದೊಂದಿಗೆ ಕೆ.ಎ.ಎಸ್, ಪಿ.ಎಸ್.ಐ, ಎಫ್.ಡಿ.ಎ, ಎಸ್.ಡಿ.ಎ, ಪಿ.ಡಿ.ಒ, ಪೊಲೀಸ್, ಟಿ.ಇ.ಟಿ, ಸಿ.ಇ.ಟಿ, ಗ್ರೂಪ್ ಸಿ, ಎಸ್.ಎಸ್.ಇ, ಬ್ಯಾಕಿಂಗ್ ಹಾಗೂ ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ಲೈನ್ ತರಬೇತಿ ನೀಡಲಾಗುತ್ತದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇದರ …
Read More »ಟೇಕ್ವಾಂಡೋ ಸ್ಪರ್ಧೆಯಲ್ಲಿ ಬಂಗಾರ ಪದಕ ವಿಜೇತ : ಧಾರವಾಡ ಕೀರ್ತಿಯನ್ನು ಹೆಚ್ಚಿಸಿದ ಮಿಲನ
ಧಾರವಾಡ:ಜಿಲ್ಲೆಯ ಸಿಂಗನಹಳ್ಳಿ ಗ್ರಾಮದ ಧಾರವಾಡ ಅಂತರರಾಷ್ಟ್ರೀಯ ಶಾಲೆಯ ಎಂಟನೇಯ ತರಗತಿ ವಿದ್ಯಾರ್ಥಿ ಮಿಲನ ಭಟ್ ಕಾಶಿಯಲ್ಲಿ ನಡೆದ ಕಾಶಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಚಾಲೆಂಜ್ ಟೇಕ್ವಾಂಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಧಾರವಾಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಆತನು ಜಿಲ್ಲಾ ಮಟ್ಟದ ಟೇಕ್ವಾಂಡೋ ಕೆಡಿಟ್ ವಿಭಾಗದಲ್ಲಿ ಬಂಗಾರದ ಪದಕ ಗೆದ್ದು ನಂತರ ತುಮಕೂರಿನಲ್ಲಿ ನಡೆದ 38 ನೇ ರಾಜ್ಯ ಮಟ್ಟದ ಟೇಕ್ವಾಂಡೋ ಕೆಡಿಟ್ ವಿಭಾಗದಲ್ಲಿ ಬಂಗಾರದ ಪದಕ …
Read More »ಪೊಲೀಸ್ ಕಾನ್ಸ್ಟೆಬಲ್ ಹೆಂಡತಿ ನೇಣಿಗೆ ಶರಣು
ಚಿಕ್ಕನಾಯಕನಹಳ್ಳಿ: ಪೊಲೀಸ್ ಕಾನ್ಸ್ಟೆಬಲ್ವೊಬ್ಬರ ಹೆಂಡತಿ ನೇಣು ಹಾಕಿಕೊಂಡ ಪ್ರಕರಣ ನಡೆದಿದೆ. ಗಂಡ ಕೆಲಸಕ್ಕೆ ಹೋದ ಸಮಯದಲ್ಲಿ ಪೊಲೀಸ್ ವಸತಿಗೃಹದಲ್ಲಿ ನೇಣು ಹಾಕಿಕೊಂಡ ಪ್ರಕರಣ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ವಾಸವಿದ್ದ ಪೊಲೀಸ್ ಕಾನ್ಸ್ಟೆಬಲ್ ಶಶಿಧರ್ ಎಂಬವರ ಪತ್ನಿ ಲಾವಣ್ಯ (21) ಆತ್ಮಹತ್ಯೆ ಮಾಡಿಕೊಂಡವರು. ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಲಾವಣ್ಯ-ಶಶಿಧರ್ ದಂಪತಿಗೆ 6 ತಿಂಗಳಿನ ಗಂಡು ಮಗುವಿದೆ. ಈಕೆ ಮೂಲತಃ ಹುಳಿಯಾರು ಹೋಬಳಿ ಕಲ್ಲಹಳ್ಳಿ …
Read More »ಪತಿಯ ಕಣ್ಣೇದರು ಪ್ರಾಣ ಬಿಟ್ಟ ಪತ್ನಿ
ಮಂಡ್ಯ: ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಹಿಂಬದಿಯಿಂದ ಬಂದಂತ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಪತಿಯ ಕಣ್ಣೆದುರಿಗೆ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿಯ ಬಳಿಯಲ್ಲಿ ಬೈಕ್ ನಲ್ಲಿ ಗರ್ಭಿಣಿ ಪತ್ನಿ ಸಹನ ಹಾಗೂ ಪತಿ ಸಂದೀಪ್ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಹಿಂಬದಿಯಿಂದ ಡಿಕ್ಕಿಯಾಗಿದೆ. ಪರಿಣಾಮವಾಗಿ ಬೈಕ್ ನಲ್ಲಿ ಕುಳಿತಿದ್ದಂತ ಮಹಿಳೆ ಕೆಳಗೆ ಬಿದ್ದಿದ್ದಾರೆ. …
Read More »ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೊಸದಾಗಿ 28,264 ಜನರಿಗೆ ಕೊರೋನಾ ಸೋಂಕು ತಗುಲಿದೆ. 29,244 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 2,51,084 ಸಕ್ರಿಯ ಪ್ರಕರಣಗಳಿವೆ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





