Breaking News

admin

ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ ಉತ್ತರ ನೀಡಿದ ಸಿಸಿ ಪಾಟೀಲ್

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರದ ಗುಲ್ಲು ಎದ್ದಿರುವಾಗ ನಾಯಕರ ನಡುವೆ ವಾಕ್ ಸಮರಕ್ಕೂ ವೇದಿಕೆ ಸಿಕ್ಕಿದೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಸಿ.ಸಿ. ಪಾಟೀಲ್ ಟಾಂಗ್ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿಸಿ ಪಾಟೀಲ್ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗದ ಉತ್ತರ ನೀಡಿದರು. ಯಾವ ಕಾರಣಕ್ಕೂ ಅವರನ್ನ ವಾಪಸ್ ತಗೊಳೋದಿಲ್ಲ ಅಂತ ಹೇಳಿದ್ದು ಯಾರು..? ಬಿಟ್ಟು ಹೋದವರನ್ನ ವಾಪಸ್ ತಗೊಳೋದಿಲ್ಲ ಅಂತ ಗುದ್ದಿ ಹೇಳಿದವರು ಯಾರು? ಬಿಟ್ಟು ಹೋದವನ್ನ ಯಾವ ಕಾಲಕ್ಕೂ …

Read More »

ಬಿಸಿ ಊಟ ಮಾಡುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

Read More »

ಕೋವಿಡ್ ಕುರಿತು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಹತ್ವದ ಮಾಹಿತಿ

ಕೋವಿಡ್-19ನ ಮುಂದಿನ ರೂಪಾಂತರವು ಓಮಿಕ್ರಾನ್‌ಗಿಂತ ಹೆಚ್ಚು ವ್ಯಾಪಕವಾದ ಸಾಂಕ್ರಾಮಿಕವಾಗಿರುತ್ತದೆ ಮತ್ತು ಈ ತಳಿಗಳು ಲಘುವಾಗಿರುತ್ತವೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ -19 ತಾಂತ್ರಿಕ ಪ್ರಮುಖರಾದ ಮಾರಿಯಾ ವ್ಯಾನ್ ಕೆರ್ಕೋವ್ ಪ್ರಕಾರ, ವಿಜ್ಞಾನಿಗಳು ಉತ್ತರಿಸಬೇಕಾದ ನಿಜವಾದ ಪ್ರಶ್ನೆಯೆಂದರೆ, ಭವಿಷ್ಯದ ರೂಪಾಂತರಿಗಳು ಹೆಚ್ಚು ಮಾರಣಾಂತಿಕವಾಗಿದೆಯೇ ಅಥವಾ ಇಲ್ಲವೇ ಎಂಬುದಾಗಿದೆ. ಕಳೆದ ವಾರ, ಸುಮಾರು 21 ದಶಲಕ್ಷ ಕೋವಿಡ್ ಪ್ರಕರಣಗಳು ವಿಶ್ವ …

Read More »

ಧ್ವಜಾರೋಹಣ ನೆರವೇರಿಸಿದ ಶಿವರಾಜಕುಮಾರ್‌

ಮೈಸೂರು: ಇಲ್ಲಿನ ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರ ‘ಶಕ್ತಿಧಾಮ’ದಲ್ಲಿ ನಟ ಶಿವರಾಜಕುಮಾರ್‌ ಅವರು ಬುಧವಾರ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿ, ಧ್ವಜಾರೋಹಣ ನೆರವೇರಿಸಿದರು. ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ನಟ ಗುರುದತ್ ಅವರೊಂದಿಗೆ ಇಲ್ಲಿಗೆ ಬಂದ ಅವರು ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.

Read More »

ಗಂಡ, ಹೆಂಡತಿಯ ಜಗಳದಲ್ಲಿ ತಾಯಿ ಬಲಿ

ಕುಷ್ಟಗಿ : ಮಗ, ಸೊಸೆಯ ಮೇಲೆ ಹಲ್ಲೆಯನ್ನು ತಡೆಯಲು ಮುಂದಾದ ಸಂದರ್ಭದಲ್ಲಿ, ತಾಯಿಯನ್ನು ದೂಡಿದ ರಭಸಕ್ಕೆ ಬಿದ್ದು ತೀವ್ರಗಾಯಗೊಂಡು ಘಟನೆ ‌ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆ ಸೇರಿದ್ದ ತಾಯಿ ಚಿಕಿತ್ಸೆ ಫಲಿಸದೇ 37 ದಿನಗಳ ಬಳಿಕ ಕೊನೆಯುಸಿರೆಳೆದ . ದೂಡಿದ ರಭಸಕ್ಕೆ ನಾಗಮ್ಮಳಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಮವಾರ ಜ. 24 ರಂದು ನಾಗಮ್ಮ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ …

Read More »

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡದ ಸಚಿವ ಅಶೋಕ್

ಬೆಂಗಳೂರು: ಬಿಜೆಪಿಯ ಕೆಲ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಆರ್. ಅಶೋಕ್ ನಮ್ಮೊಂದಿಗೂ ಕೆಲ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಓರ್ವ ಪಕ್ಷಾಂತರಿ. ಹೀಗಾಗಿ ಅವರು ಪಕ್ಷಾಂತರದ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ಶಾಸಕರನ್ನು ಸೂರ್ಯ ಚಂದ್ರ ಇರುವವರೆಗೂ ಮತ್ತೆ ವಾಪಸ್​ ಸೇರಿಸಿಕೊಳ್ಳುವುದಿಲ್ಲ …

Read More »

ಬಿಟ್ಟು ಹೋದವರನ್ನ ಮತ್ತೆ ಕರೆದುಕೊಳ್ಳುವುದಿಲ್ಲ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದರು. ಅದಕ್ಕೆ ಬಿಜೆಪಿ ನಾಯಕರು ಕೆಂಡಾಮಂಡಲಾರಾಗಿದ್ದರು.ಸಚಿವ ಆರ್ ಅಶೋಕ್ ಕೂಡ ಆ ವಿಚಾರಕ್ಕೆ ಗರಂ ಆಗಿ ಉತ್ತರ ಕೊಟ್ಟಿದ್ದರು. ಸೂರ್ಯ ಚಂದ್ರ ಒಂದಾದರೂ ಬಿಟ್ಟು ಹೋದವರನ್ನ ಸೇರಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಈ ರೀತಿ ಮಾತಾಡುತ್ತಿದ್ದಾರಲ್ಲ ಎಂದಿದ್ದರು. ಇದೇ ವಿಚಾರಕ್ಕೆ ಇದೀಗ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬಿಟ್ಟು ಹೋದವರನ್ನ …

Read More »

ಕಾಂಗ್ರೆಸ್‌ ಪಕ್ಷಕ್ಕೆ ಹೋಗುವ ಅನಿವಾರ್ಯತೆ ಇಲ್ಲ

ಕೋಲಾರ: ‘ಕಾಂಗ್ರೆಸ್‌ ಬಿಟ್ಟು ಬಂದ ನಮಗೆ ಮತ್ತೆ ಆ ಪಕ್ಷಕ್ಕೆ ಹೋಗುವ ಅನಿವಾರ್ಯತೆ ಇಲ್ಲ, ಬಿಜೆಪಿ ನಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದೆ’ ಎಂದು ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ಒಂದು ವೇಳೆ ಕಾಂಗ್ರೆಸ್‌ ಬಿಟ್ಟು ಬಂದವರ ಪೈಕಿ ಕನಿಷ್ಠ ಒಬ್ಬರೂ ಕಾಂಗ್ರೆಸ್‌ಗೆ ವಾಪಸ್‌ ಹೋದರೆ ಸಿದ್ದರಾಮಯ್ಯ ಅವರು ಆ ಪಕ್ಷದಲ್ಲಿ ಇರುವುದಿಲ್ಲ.ಏಕೆಂದರೆ ಸಿದ್ದರಾಮಯ್ಯರು ಕೊಟ್ಟ ಮಾತಿನಂತೆ ನಡೆದುಕೊಳ್ಳುವವರು. ನಾವು ಏನಾದರೂ ಕಾಂಗ್ರೆಸ್‌ಗೆ ವಾಪಸ್‌ ಹೋದರೆ …

Read More »

ಮಾಜಿ ಪ್ರಧಾನಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ದೇವೇಗೌಡರು ಗುಣಮುಖರಾಗಿದ್ದು, ಇಂದು ವರದಿ ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ

Read More »

ಬಸ್ ಪಲ್ಟಿ : 20 ಜನರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ  ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ KSRTC ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »