ಬೆಂಗಳೂರು: ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತ ವೀಕೆಂಡ್ ಕರ್ಪ್ಯೂವನ್ನು ಮುಂದುವರೆಸಲಾಗುತ್ತದೆ. ಇದೀಗರಾಜ್ಯದಲ್ಲಿ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂವನ್ನು ರದ್ಧುಗೊಳಿಸಲಾಗುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತೆ ಮುಂದುವರೆಸಲಾಗುತ್ತದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆಯ ಆಧಾರದ ಮೇಲೆ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ …
Read More »ಡಾ.ಶಿವಕುಮಾರ ಸ್ವಾಮೀಜಿ 3ನೇ ಪುಣ್ಯ ಸ್ಮರಣೆ : ಐಜಿಪಿಗೆ ಗುಡುಗಿದ ಸಿಎಂ
ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು.ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ. ಐಜಿಪಿ ಬಳಿ ಸೀನಿಯರ್ ಆಫೀಸರ್ ಆಗಿದ್ದೀಯಾ ಅಷ್ಟು ಗೊತ್ತಾಗೊಲ್ವಾ ನಿನಗೆ ಜನ ದೂರ ನಿಲ್ಲುವಂತೆ ಹೇಳು ಎಂದು ಏರುದ್ವನಿಯಲ್ಲಿ ಗುಡುಗಿದ್ದಾರೆ.ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.
Read More »22 ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ 22 ದೇವಸ್ಥಾನಗಳುಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿನ್ನಲೆ ಗುಡಿಗಳಜೀರ್ಣೋದ್ಧಾರಕ್ಕಾಗಿ ರಾಜ್ಯದ ಮುಜರಾಯಿ ಇಲಾಖೆಯು ₹1.11 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯ ಪುರಾತನ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುವುದಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ, ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Read More »ವಿಜಯಲಕ್ಷ್ಮಿ ಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ
ಚೆನ್ನೈ : 2020ರಲ್ಲಿ ನಟಿ ವಿಜಯಲಕ್ಷ್ಮಿ ಗೆ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ.ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಪನನ್ಗಟ್ಟು ಪದೈ ಕಟ್ಚಿ ಪಕ್ಷದ ಸ್ಥಾಪಕ ಹರಿ ನಾಡಾರ್ ಎಂಬಾತನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ. 2020ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿತ್ತು. 2020ರ ಜುಲೈನಲ್ಲಿ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ) ಪಕ್ಷದ ನಾಯಕ ಸೀಮನ್ ಕುಮ್ಮಕ್ಕಿನ …
Read More »ಕೊರೋನಾ ನಿಯಂತ್ರಣಕ್ಕೆ ಸಲಹೆ ಕೊಟ್ಟ ಮಾಜಿ ಸಿಎಂ
ಬೆಂಗಳೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.
Read More »ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಚಾಮರಾಜನಗರ : ಜಿಲ್ಲೆಯ ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಡಿಪುರ ಬಳಿಯಿರುವ ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 63 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಮೆಡಿಕಲ್ ಕಾಲೇಜಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ.
Read More »ಬೆಂಗಳೂರು ಜನರಿಗೆ ಮತ್ತೊಂದು ಶಾಕಿಂಗ್ ಸುದ್ದಿ
ಬೆಂಗಳೂರು : ಈಗ ಬೆಲೆ ಏರಿಕೆಯಿಂದ ತತ್ತರಿಸಿರೋ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್ ನೀಡೋದಕ್ಕೆ ಮುಂದಾಗಿದೆ. ಅದೇ ಬೆಂಗಳೂರು ಜಲ ಮಂಡಳಿಯಿಂದ ನೀರಿನ ದರ ಹೆಚ್ಚಳವಾಗದೆ. ಈ ಸಂಬಂದ ಬೆಂಗಳೂರು ಜಲ ಮಂಡಳಿಯು ರಾಜ್ಯ ಸರ್ಕಾರಕ್ಕೆ ನೀರಿನ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. 8 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯಲ್ಲಿ ಕೋರಿದೆ. ಈಗಾಗಲೇ 2 ವರ್ಷಗಳ ಹಿಂದೆಯೇ ಸರ್ಕಾರಕ್ಕೆ ದರ ಹೆಚ್ಚಳ …
Read More »ಗ್ರಾಹಕರಿಗೆ ಸಿಹಿ ಸುದ್ದಿ
ಎರಡು ತಿಂಗಳ ಹಿಂದೆ ಕೆ.ಜಿ.ಗೆ 150 ರೂ.ಗೆ ಸಿಗುತ್ತಿದ್ದ ಟಮೋಟ ಈಗ ಹತ್ತನೇ ಒಂದು ಭಾಗದಷ್ಟು ಬೆಲೆಯೂ ಇಲ್ಲದಂತೆ ಆಗಿದ್ದು, ಇದರಿಂದ ರೈತರು ಸಂತಸಗೊಂಡಿಲ್ಲ.ಕಳೆದೆರಡು ತಿಂಗಳ ಹಿಂದೆ ಆಂಧ್ರಪ್ರದೇಶದಲ್ಲಿ ಗಗನಮುಖಿಯಾಗಿದ್ದ ಟಮೋಟ ಬೆಲೆ ಭಾರಿ ಕುಸಿತ ಕಂಡಿದೆ. ಎರಡು ತಿಂಗಳ ಹಿಂದೆ ಕೆ.ಜಿ.ಗೆ 150 ರೂ.ಗೆ ಸಿಗುತ್ತಿದ್ದ ಟೊಮೇಟೊ ಈಗ ಹತ್ತನೇ ಒಂದು ಭಾಗದಷ್ಟು ಬೆಲೆಯೂ ಇಲ್ಲದಂತೆ ಆಗಿದ್ದು, ಇದರಿಂದ ರೈತರು ಸಂತಸಗೊಂಡಿಲ್ಲ.
Read More »ರೈತರಿಗೆ ಸಿಹಿ ಸುದ್ದಿ
ಬೆಂಗಳೂರು : ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ.15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ.15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ.50 ರಷ್ಟಾಗಿದೆ. ಇನ್ನು ಈ ಯೋಜನೆ ರೈತರ ಆದಾಯ ದ್ವಿಗುಣಗೊಳಿಸಲಿದೆ’ ಎಂದರು.
Read More »ಕರ್ಫ್ಯೂ ಕುರಿತು ಇಂದು ಮಹತ್ವ ನಿರ್ಧಾರ
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





