ಮಂಡ್ಯ: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮಿಜಿಗೆ ಜಾಮೀನು ನೀಡಿದ ಶ್ರೀರಂಗ ಪಟ್ಟಣದ JMFC ನ್ಯಾಯಲಯ. ಸ್ವಾಮೀಜಿ ಪರ ವಕೀಲರಾದ ಬಾಲರಾಜ್ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆಯೇ ಜಾಮೀನು ಅರ್ಜಿ ವಿಚಾರಣೆ ನಡಿಸಿದ ನ್ಯಾಯಲಯ ಇಂದಿಗೆ ಆದೇಶ ಕಾಯ್ದಿರಿಸಿದ್ದು ಇಂದು ಸ್ವಾಮೀಜಿಗೆ ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕಬೇಕು, ತನಿಖೆಗೆ ಸಹಕಾರ ನೀಡುವಂತೆ ಷರತ್ತು ಬಂದ ಜಾಮೀನು ನೀಡಿದೆ. ಮಂಡ್ಯ …
Read More »57 ಪೊಲೀಸ್ ರಿಗೆ ಕೊರೋನಾ ದೃಢ
ಬೆಳಗಾವಿ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್ಆರ್ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ.ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಮಂಗಳವಾರ ಇಡೀ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ತಗುಲಿದ ಎಲ್ಲರೂ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಕೆಲವರಿಗೆ …
Read More »ತಜ್ಞರ ಸಲಹೆ ಮೇರೆಗೆ ವೀಕೆಂಡ್ ಕರ್ಪ್ಯೂ ಕುರಿತು ನಿರ್ಧಾರ ತೆಗೆದುಕೊಳ್ಳಿ
ಬೆಂಗಳೂರು : ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ತೆಗೆಯುವ ವಿಚಾರದಲ್ಲಿ ತಜ್ಞರ ಸಲಹೆ ಪಡೆದೇ ಮುಂದಿನ ಹೆಜ್ಜೆ ಇಡುವುದು ಸೂಕ್ತ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಈ ಹೇಳಿಕೆ ನೀಡಿದ್ದಾರೆ.ವಿಕೆಂಡ್ ಕರ್ಪ್ಯೂ, ನೈಟ್ ಕರ್ಫ್ಯೂ ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.
Read More »24 ಗಂಟೆಯಲ್ಲಿ 2,38,018 ಕೊರೊನಾ ಪತ್ತೆ
ಕಳೆದ 24 ಗಂಟೆಯಲ್ಲಿ 2,38,018 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ 238 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 17 ಲಕ್ಷ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ.
Read More »ತುಮಕೂರು ಜಿಲ್ಲೆಯ 600 ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ತುಮಕೂರು: ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 600 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 246 ವಿದ್ಯಾರ್ಥಿಗಳಲ್ಲಿ ಹಾಗೂ ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Read More »ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಡಾ. ಬಿ.ಟಿ.ಲಲಿತಾನಾಯಕ್ ನೇಮಕ
ಬೆಂಗಳೂರು- ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಡಾ. ಬಿ.ಟಿ.ಲಲಿತಾನಾಯಕ್ ನೇಮಕವಾಗಿದ್ದಾರೆ. ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜಯಪ್ರಕಾಶ್ ಬಂಧುರವರು ಲಲಿತಾ ನಾಯಕ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ.
Read More »ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು
ಧಾರವಾಡ: ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ಡಿಎಂ ಆಸ್ಪತ್ರೆಯು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ. ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8 ಲೀ ಆಮ್ಲಜನವನ್ನು ಅವರಿಗೆ ನೀಡಲಾಗಿದೆ.
Read More »ಬಿಗ್ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬಿಗ್ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತ ಸಂಭವಿಸಿದ್ದು, ದಿವ್ಯಾ ಸುರೇಶ್ ಗಾಯಗೊಂಡಿದ್ದಾರೆ. ಸೋಮವಾರ ಅಪಘಾತವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ ಕಾಲು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಈ ವಿಚಾರವನ್ನು ದಿವ್ಯಾ ಸುರೇಶ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
Read More »ಸುಮ್ಮನೆ ಜಗಳಕ್ಕೆ ಬಂದ್ರೆ ತಮಿಳು ಸಿನಿಮಾ ಬ್ಯಾನ್ : ವಾಟಾಳ್ ನಾಗರಾಜ್
ಬೆಂಗಳೂರು: ನೀವೇನಾದ್ರೂ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದರೆ, ಇಡೀ ಕರ್ನಾಟಕದ ಉದ್ದಗಲಕ್ಕೂ ತಮಿಳುನಾಡು ಗಡಿ ಬಂದ್ ಮಾಡು ತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವ ರು, ಬರೀ ಪಾದಯಾತ್ರೆ ಮಾಡಿದ್ರೆ ಸಾಧ್ಯವಿಲ್ಲ.ತಮಿಳುನಾಡಿಗೆ ಅಂತಿಮವಾಗಿ ಎಚ್ಚರಿಕೆ ಕೊಡುತ್ತೇನೆ. ಕಾಲು ಕೆರೆದು ಕೊಂಡು ಬಂದರೆ ತಮಿಳು ಸಿನಿಮಾ ಬ್ಯಾನ್ ಮಾಡುತ್ತೇವೆ. ಒಂದು ವಾಹನವನ್ನೂ ಒಳಗಡೆ …
Read More »ಕೋವಿಡ್ ಕುರಿತು ಆತಂಕ ವ್ಯಕ್ತ ಪಡಿಸಿದ ಡಾ.ಅಶ್ವತ್ಥನಾರಾಯಣ
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಕೇಸ್ ಸ್ಫೋಟಿಸುವ ಆತಂಕ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಜನವರಿ 26ರ ಸುಮಾರಿಗೆ ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ. ಇದನ್ನೇ ತಜ್ಞರು ಅಂದಾಜಿಸಿದ್ದಾರೆ ಎಂದು ಹೇಳಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





