Breaking News

admin

ಲಕಮಾಪುರದಲ್ಲಿ ಬಣವೆಗಳಿಗೆ ಬೆಂಕಿ

ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಸುಟ್ಟ ಕರಕಲಾದ ಘಟನೆ ಇಂದು ಬೆಳಗಿನಜಾವ ನಡೆದಿದೆ. ಲಕಮಾಪುರ ಗ್ರಾಮದ ಅಶೋಕ ಹುಡೇದ ಎಂಬುವವರಿಗೆ ಸೇರಿದ ಒಂದು ಕಣಕಿ ಬಣವಿ ಹಾಗೂ ಒಂದು ಹೊಟ್ಟಿನ ಬಣವಿ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ಮೇವು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಿಂದೆಯೂ ಕಿಡಿಗೇಡಿಗಳು ಇದೇ ರೀತಿ ಅಶೋಕ …

Read More »

ತಾಯಿ ಹೃದಯ ಚಿಕಿತ್ಸೆ ಹಣ ದೋಚಿಕೊಂಡ ಹೋದ ಪಾಪಿ ಮಗಳು

Featured Video Play Icon

ಹುಬ್ಬಳ್ಳಿ : ಇವರೆಲ್ಲ ವರ್ಷಾನುಗಟ್ಟಲೆ ಅಲ್ಲೆ ಇಲ್ಲಿ ಚಿಂದಿ ಆರಿಸಿ ತಮ್ಮ ದಿನದ ಬದುಕನ್ನು ಕಟ್ಟಿಕೊಳ್ಳುವವರು. ತಮ್ಮ ಹೊಟ್ಟೆಗೆ ಬಟ್ಟಿಕಟ್ಟಿಕೊಂಡು ಅಷ್ಟು ಇಷ್ಟು ಹಣ, ಚಿನ್ನ ಮಾಡಿಕೊಂಡಿದ್ದರು. ಆದರೆ ಹೆತ್ತ ಮಗಳು ಇವೆಲ್ಲವನ್ನು ತೆಗೆದುಕೊಂಡು ಪ್ರೀಯಕರಣ ಜೊತೆ ಪರಾರಿಯಾಗಿದ್ದಾಳೆ. ಇದಕ್ಕೆ ನೊಂದ ಪಾಲಕರು ಪೊಲೀಸ್ ಠಾಣೆಗೆ ದೂರು ಕೊಡಲು ಹೋದರೆ ಅಲ್ಲಿನ ಪೊಲೀಸರು ಹಾಗೂ ಇನ್ಸ್ಪೆಕ್ಟರ್ ನಾಳೆ ಬಾ ಎಂದು ಬೋರ್ಡ್ ಹಾಕುತ್ತಿದ್ದಾರೆಂದು ಆ ನೊಂದ ಜೀವಗಳು ಆರೋಪ ಮಾಡುತ್ತಿದ್ದಾರೆ. …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಬೆಂಗಳೂರು: ತಾಂತ್ರಿಕ ತೊಂದರೆಯ ಕಾರಣ ನೀಡಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ ಕೌನ್ಸೆಲಿಂಗ್ ಗೆ ಹಾಜರಾಗಿದ್ದ ಶಿಕ್ಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ದಿಢೀರನೆ ವರ್ಗಾವಣೆ ಪ್ರಕ್ರಿಯೆ ರದ್ದುಗೊಳಿಸಿರುವುದಕ್ಕೆ ಶಿಕ್ಷಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಸುಮಾರು ಒಂದು ತಿಂಗಳಿನಿಂದ ಸ್ಥಗಿತವಾಗಿದ್ದ ವರ್ಗಾವಣೆ ಪ್ರಕ್ರಿಯೆ ಕಳೆದ ವಾರ …

Read More »

ಸರ್ಕಾರಕ್ಕೆ ಸಲಹೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 15 ರಿಂದ 20 ದಿನಗಳ ಕಾಲ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಮುಚ್ಚುವುದು ಸೂಕ್ತ . ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಈ ನಿಯಮವನ್ನು ಪಾಲಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಇಂತಹ ಕ್ರಮ ಕೈಗೊಳ್ಳದೇ ಇದ್ದರೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕುವ ಅಪಾಯ ಇದೆ ಎಂದು ಹೇಳಿದರು.

Read More »

ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ದೃಢ

ಬೆಳಗಾವಿ: ನಗರದಲ್ಲಿ ಕೊರೋನಾ ತನ್ನ ಹಾವಳಿಯನ್ನು ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ.  ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ. ‘ಅವರಿಗೆ ರೋಗದ ಲಕ್ಷಣಗಳಿಲ್ಲ. ಹೀಗಾಗಿ, ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರಿಗೆ ನಿಗಾ ವಹಿಸುವಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.ಠಾಣೆ ಆವರಣದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ರಾಜ್ಯದ ವಿವಿಧೆಡೆ ಪೊಲೀಸರಲ್ಲಿ ಸೋಂಕು ದೃಢಪಡುತ್ತಿದ್ದ ಹಿನ್ನೆಲೆಯಲ್ಲಿ ನಗರದಲ್ಲೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

Read More »

ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ : ಕುಮಾರಸ್ವಾಮಿ

ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ತಮ್ಮ ಪಕ್ಷ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರಿಂದ ರಾಜ್ಯದ 51 ಪ್ರಮುಖ ನದಿಗಳ ನೀರು ಸಂಗ್ರಹ ಮಾಡಿ ಜಲಧಾರೆ ಕಾರ್ಯಕ್ರಮ ದ ಮೂಲಕ ತಿಳುವಳಿಕೆ ಮೂಡಿಸಲು ಕಾರ್ಯಕ್ರಮ ಆಯೋಜಿಸಿದ್ದೆವು.ಕಳಸದ ಮೂಲಕ 180 ತಾಲೂಕು ಪ್ರವಾಸ ಮಾಡಲು ಯೋಚಿಸಿದ್ದೆವು. ಆದರೆ ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಜನತಾ ಜಲಧಾರೆ …

Read More »

ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು

ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರ ಮುನ್ನೆಚ್ಚರಿಕೆ ಲಸಿಕೆ ಅಭಿಯಾನಕ್ಕೆ ನಿರೀಕ್ಷೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುನ್ನೆಚ್ಚರಿಕೆ ಲಸಿಕೆ ಡೋಸ್‌ ಅನ್ನು ಮುಂಚೂಣಿ ಕಾರ್ಯಕರ್ತರು ಎಲ್ಲರೂ ಪಡೆಯಬೇಕು. ಸದ್ಯ ರಾಜ್ಯದಲ್ಲಿ ಶೇ.39ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದರು. ಮುಖ್ಯಮಂತ್ರಿಗಳು ಜಿಲ್ಲಾ​ಧಿಕಾರಿಗಳೊಂದಿಗೆ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು,   ಮುನ್ನೆಚ್ಚರಿಕೆ ಡೋಸ್‌ ಲಸಿಕಾರಣವನ್ನು ದೊಡ್ಡ ಅಭಿಯಾನದಂತೆ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ …

Read More »

ಜ.26ರಂದು ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ

ಹೊಸಪೇಟೆ(ವಿಜಯನಗರ): ‘ಗಣರಾಜ್ಯೋತ್ಸವದ ದಿನ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ ಹಾಗೂ ಗುಂಡಾ ಸಸ್ಯ ಉದ್ಯಾನದಲ್ಲಿ ₹32 ಲಕ್ಷದಲ್ಲಿ ಅಭಿವೃದ್ಧಿಪಡಿಸಲಾಗಿರುವ ‘ಅಕ್ವೇರಿಯಂ’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸುವರು.ಬೆಳಿಗ್ಗೆ 9ಕ್ಕೆ ನಗರದ ಕ್ರೀಡಾಂಗಣದಲ್ಲಿ ಸಚಿವರು ತ್ರಿವರ್ಣ ಧ್ವಜಾರೋಹಣ ನೆರವೇರಿಸುವರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸುವರುಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ತಿಳಿಸಿದರು. ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ …

Read More »

ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು : ಮಹೇಶ ಜೋಶಿ

ಬೆಂಗಳೂರು: ‘ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಾಹಿತಿ ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು, ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೌರವ …

Read More »

ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಸುಭಾಷ್ ಚಂದ್ರ ಬೋಸ್ ಆಚರಣೆ

ಬೆಂಗಳೂರು : ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಎಲ್ಲಾ ಶಾಲೆ – ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಆಚರಣೆ ಮಾಡಬೇಕು. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ …

Read More »