Breaking News

admin

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : 4 ಜನ ಸಾವು

ಗುಂಟೂರು : ಕಾರೊಂದು ಕೆರೆಗೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಯರ್ರಬಾಲೆಂ ತಿರುವುನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ತೇಜರಾಮ್‌ಜಿ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಾಯಿ, ಶ್ರೀನಿವಾಸ್, ನರೇಂದ್ರ ಕುಮಾರ್ ಅವರು ಮಂಗಳಗಿರಿ ಮೂಲದವರಾಗಿದ್ದರೆ, ತೇಜರಾಮ್‌ಜಿ ಯರ್ರಬಾಲೆಂನವರು ಎನ್ನಲಾಗಿದೆ.

Read More »

ಹಾಡು ಹಾಗಲೇ ಬ್ಯಾಂಕ್ ದರೋಡೆ ಎಸ್ಕೇಪ್ : ಕಳ್ಳನ ಬಂಧನ

Featured Video Play Icon

ಹುಬ್ಬಳ್ಳಿ :ವಾಣಿಜ್ಯನಗರಿಯಲ್ಲಿ ಹಾಡುಹಗಲೇ ಬ್ಯಾಂಕ್ ರಾಬರಿ ಮಾಡಿಕೊಂಡು ಪರಾರಿಯಾಗುತ್ತಿದ್ದ ಆರೋಪಿಯನ್ನ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ವಿಜಯಪುರದ.ಪ್ರವೀಣಕುಮಾರ ಅಪ್ಪಾಸಾಹೇಬ್ ಪಾಟೀಲ ಎಂಬಾತನೇ ಸಿಕ್ಕಿ ಬಿದ್ದ ಕಳ್ಳನಾಗಿದ್ದು. ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ, ಕಳೆದ ಎರಡು ದಿನದ ಹಿಂದೆ ಹುಬ್ಬಳ್ಳಿಗೆ ಬಂದು ಭಾರತಿ ಲಾಡ್ಜ್ ನಲ್ಲಿ ತಂಗಿದ್ದ.ಇಂದು ಕೊಪ್ಪಿಕರ ರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕಿನೊಳಗೊಗಿ ಕ್ಯಾಷಿಯರ್ ಗೆ ಚಾಕು ತೋರಿಸಿ, ಬ್ಯಾಗಿನಲ್ಲಿ ಸುಮಾರು 7ಲಕ್ಷಕ್ಕೂ ಹೆಚ್ಚು ಹಣವನ್ನ ಹಾಕಿಸಿಕೊಂಡಿದ್ದಾನೆ. …

Read More »

ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವು

ಹುಬ್ಬಳ್ಳಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮ ಸರಹದ್ದಿನ ಜಮೀನೊಂದರ ಕೃಷಿ ಹೊಂಡದಲ್ಲಿ ನಡೆದಿದೆ. ಸೌದಿಮಠ ( 21 ) ಮೃತಪಟ್ಟವ ಯುವಕ. ಶಿವಪ್ಪ ಎಂಬುವರ ಹೊಲದ ಕೃಷಿ ಹೊಂಡದಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವಿಕೇಂಡ್ ಕರ್ಫ್ಯೂ ಅಗತ್ಯವಿಲ್ಲ: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ : ವಿಕೇಂಡ್ ಕರ್ಫ್ಯೂ ಅಗತ್ಯವಿಲ್ಲ. ಆರ್ಥಿಕತೆಯೂ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ ಸರ್ಕಾರ ನೋಡಿಕೊಂಡು ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು 15-18 ಒಳಗಿನ ವಯೋಮಾನದ ಮಕ್ಕಳ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಕೇಂಡ್ ಕರ್ಫ್ಯೂ ಬಗ್ಗೆ ಸಿಎಂ ಅವರಿಗೂ ಕೂಎ ವಯುಕ್ತಿಕ ಸಲಹೆ ನೀಡ್ತಿದ್ದೇನೆಮ ವಿಕೇಂಡ್ ಕರ್ಫ್ಯೂ ಸಡಿಲಿಕೆ ಮಾಡಬೇಕು. ಗುರುವಾರ,ಶುಕ್ರವಾರ ಸಭೆ ಇದೆ …

Read More »

ರೈತರಿಗೆ ಸಿಹಿ ಸುದ್ದಿ

ನವದೆಹಲಿ : ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳನ್ನ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ರೈತರಿಗೆ ಮಾರಾಟ ಮಾಡಿದ್ದಕ್ಕಾಗಿ ಪರಿಹಾರ ನೀಡಲು ಭಾರತವು ಫೆಡರಲ್ ಬಜೆಟ್್ನಲ್ಲಿ ಸುಮಾರು 19 ಬಿಲಿಯನ್ ಡಾಲರ್ ಗಳನ್ನ ಮೀಸಲಿಡುವ ಸಾಧ್ಯತೆಯಿದೆ. ಹಣಕಾಸು ಸಚಿವಾಲಯವು ಫೆಬ್ರವರಿ 1ರಂದು ನಡೆಯಲಿರುವ ಬಜೆಟ್ʼನಲ್ಲಿ ರಸಗೊಬ್ಬರ ಸಬ್ಸಿಡಿಯಾಗಿ 1.4ಲಕ್ಷ ಕೋಟಿ ರೂ.ಗಳನ್ನ ($18.8 billion) ಪೆನ್ಸಿಲ್ ಮಾಡಿದೆ. ಇದು ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷದಲ್ಲಿ 1.3 ಲಕ್ಷ ಕೋಟಿ ರೂ.ಗಳಿಂದ ಹೆಚ್ಚಾಗಿದೆ. …

Read More »

ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ನಿಧನ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಕವಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ( 76 ವರ್ಷ)  ಇಂದು ಬೆಳಗ್ಗೆ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರನ್ನು ಜ.3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Read More »

ಬಂಜಾರಾ ಆಸ್ಪತ್ರೆಗೆ ಭೇಟಿ : ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ

ವಿಜಯಪುರ: ಬಂಜಾರಾ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮಹಿಳೆಯೊಬ್ಬರು ಇತ್ತೀಚೆಗೆ ಸಾವಿಗೀಡಾದ ಹಿನ್ನೆಲೆಯಲ್ಲಿ ಭೇಟಿ ನೀಡಿದ ಡಿಸಿ ಮತ್ತು ತಜ್ಞರು, ವಾರ್ಡ್‍ಗಳ ಐಸಿಯು ಬೆಡ್‍ಗಳನ್ನು ಪರಿಶೀಲಿಸಿ  ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ನೇತೃತ್ವದ ಕೋವಿಡ್‌ ವಿಶೇಷ ತಜ್ಞರನ್ನೊಳಗೊಂಡ ಸಮಿತಿ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಎಬಿ ಎಆರ್‌ಕೆ ಅಡಿಯಲ್ಲಿ ಅಥವಾ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಕುರಿತು ಪ್ರತಿ ರೋಗಿಯಿಂದ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು .ಎಬಿ ಎಆರ್‌ಕೆ ಅಡಿಯಲ್ಲಿ ನೀಡುವ ಚಿಕಿತ್ಸೆಗಳ …

Read More »

ಕೊರೋನಾ ನಿಯಂತ್ರಣ : ಇಂದು ಸಂಜೆ ಡಿಸಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಕೊರೋನಾ ನಿರ್ಬಂಧಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ‘ಕಾದು ನೋಡುವ ತಂತ್ರ’ ಅನುಸರಿಸಲು ಸರ್ಕಾರ ನಿರ್ಧರಿಸಿದ್ದಾರೆ. ಅದರ ಕುರಿತು  ಇಂದು ಡಿಸಿಗಳ  ಜೊತೆ ಸಿಎಂ ಬೊಮ್ಮಾಯಿ  ಸಂಜೆ 4 ಗಂಟೆಗೆ ಸಭೆ ನಡೆಸಲಿದ್ದಾರೆ. ಡಿಸಿಗಳಿಂದ ಕೊರೊನಾ ಸ್ಥಿತಿ ಬಗ್ಗೆ ವಿವರಣೆ ಪಡೆಯಲಿದ್ದಾರೆ. ಪಾಸಿಟಿವಿಟಿ ರೇಟ್, ವ್ಯಾಕ್ಸಿನೇಷನ್ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ಶುಕ್ರವಾರ ಮತ್ತೊಂದು ಸಭೆ ನಡೆಸಿ ವಾರಾಂತ್ಯದ …

Read More »

ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧ

ಬಾದಾಮಿ: ಸುಕ್ಷೇತ್ರ ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧಿ ಸಿ ಸರ್ಕಾರ ಆದೇಶ ಹೊರಡಿಸಿದ್ದೆ ದೇವರ ದರ್ಶನವನ್ನು ಜ. 21ರವರೆಗೆ ಬಂದ್‌ ಮಾಡಲಾಗಿದೆ. ಪೂಜಾ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಭಕ್ತರ ದರ್ಶನವನ್ನು ಸಂಪೂರ್ಣವಾಗಿ ನಿಷೇಧಿ ಸಲಾಗಿದೆ. ಮತ್ತೇ ದರ್ಶನಕ್ಕೆ ಬರುವ ಭಕ್ತರಿಗೆ ಪೊಲೀಸ್ ರೂ ಬಂದು ಬಸ್ತ ಏರ್ಪಡಿಸಿದ್ದಾರೆ. ಬನಶಂಕರಿಯಲ್ಲಿ ತಹಶೀಲ್ದಾರ್‌ ಸುಹಾಸ ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ನೇತ್ರಾವತಿ ಪಾಟೀಲ, ಪೊಲೀಸ್‌ ಬಂದೋಬಸ್ತ್ ಕೈಗೊಂಡಿದ್ದು, ಬೀಡುಬಿಟ್ಟಿದ್ದಾರೆ

Read More »

ಸಿಎಂ ಮನೆ ಮುಂದೆ ರೇವಣ್ಣ ಏಕಾಂಗಿ ಧರಣಿ

ಹಾಸನ: ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣ ಎದುರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಏಕಾಂಗಿಯಾಗಿ ಧರಣಿ ನಡೆಸಲಿದ್ದಾರೆ. ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಎಂ.ಎಸ್ಸಿ ಫುಡ್ ಅಂಡ್ ನ್ಯೂಟ್ರಿಷಿಯನ್ ಕೋರ್ಸ್ ತೆರೆಯಲು ವಿಶ್ವವಿದ್ಯಾಲಯ ಅನುಮತಿ ಕೋರಿದ್ದರು. ವಿಶ್ವವಿದ್ಯಾಲಯ ಅನುಮತಿ ಕೊಟ್ಟರೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಒಪ್ಪಿಗೆ ಕೊಡುತ್ತಿಲ್ಲ ಎಂದು ಈ ಹಿಂದೆ ಆರೋಪಿಸಿದ್ದರು.

Read More »