ಬೆಂಗಳೂರು: ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 7827 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,47,243 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,445 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,91,472 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
Read More »ವಿವಾದಾತ್ಮಕ ವಿಡಿಯೋ ವೈರೆಲ್ : ರಿಷಿ ಕುಮಾರ್ ಸ್ವಾಮೀಜಿ ಅರೆಸ್ಟ್
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಇಂದು ಬೆಳಿಗನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗ್ತಿದ್ದಾರೆ. ಹಿಂದೂಗಳು ಅತಿ ಬೇಗ ಜಾಗೃತರಾಗಿ ಹೊಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿದ್ದರು.ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು …
Read More »ಭಾರತದಲ್ಲಿ 2,38,018 ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,38,018 ಕೋವಿಡ್ ಪ್ರಕರಣಗಳು 310 ಸಾವುಗಳು ಮತ್ತು 1,57,421 ಚೇತರಿಕೆಗಳು ವರದಿಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬೆಳಿಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಬುಲೆಟಿನ್ ಪ್ರಕಾರ, ದೇಶದ ಸಕ್ರಿಯ ಕ್ಯಾಸೆಲೋಡ್ ಪ್ರಸ್ತುತ 17.36 ಲಕ್ಷ ಮತ್ತು ಚೇತರಿಕೆ ದರವು ಶೇಕಡಾ 94 ಕ್ಕಿಂತ ಹೆಚ್ಚಿದೆ.
Read More »ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ ಧನುಷ್, ಐಶ್ವರ್ಯ
ಚೆನ್ನೈ: ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ನಟ ಧನುಷ್ ವಿದಾಯ ಹೇಳಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ ಎಂದು ಬರೆದಿದ್ದಾರೆ.ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ …
Read More »ಕೊರೊನಾ ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ
ಹಾಸನ : ಕೊರೊನಾ ಸೋಂಕು ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಗಿರೀಶ್, ಹಾಸನ ಜಿಲ್ಲೆಯಲ್ಲಿಯೂ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದರು.
Read More »ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೋವಿಡ್ ದೃಢ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ.ಈಗ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.
Read More »ಫೆಬ್ರವರಿ ಅಂತ್ಯದೊಳಗೆ ಪಾಲಿಕೆ ಅಸ್ಥಿತ್ವಕ್ಕೆ: ಟೆಂಗಿನಕಾಯಿ
ಹುಬ್ಬಳ್ಳಿ: ಫೆಬ್ರವರಿ ಅಂತ್ಯದ ಒಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಪಾಲಿಕೆ ಚುನಾವಣೆ ನಡೆದಿದ್ದು, ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರಿಗೆ ಅಧಿಕಾರ ಹಸ್ತಾಂತರ ಆಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ ಸೇರಿದಂತೆ ಸಂಬಂಧಿಸಿದ …
Read More »ವೀಕೆಂಡ್ ಕರ್ಫ್ಯೂ : ಬೆಂಗಳೂರುನಲ್ಲಿ ಕೋವಿಡ್ ಇಳಿಮುಖ
ಬೆಂಗಳೂರು: ಒಂದೇ ದಿನ 18622 ಸೋಂಕಿತರು ಮಾತ್ರ ಪತ್ತೆಯಾಗಿದ್ದಾರೆ.ಇದು ನಿನ್ನೆ ದಾಖಲಾಗಿದ್ದ ಸೋಂಕಿತರಿಗಿಂತ 3 ಸಾವಿರ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ.ವೀಕೆಂಡ್ ಕರ್ಫ್ಯೂ ಜಾರಿಯಿಂದಾಗಿ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖವಾಗಿದೆ. ಶನಿವಾರ ಬೆಂಗಳೂರಿನಲ್ಲಿ 22317 ಸೋಂಕಿತರು ಪತ್ತೆಯಾಗಿದ್ದರು, ವಿಕೇಂಡ್ ಕರ್ಫ್ಯೂ ಆರಂಭದ ಮೊದಲ ದಿನ ಅಂದರೆ ನಿನ್ನೆ 21092 ಸೋಂಕಿತರು ಪತ್ತೆಯಾಗಿದ್ದರು. ಇಂದು ನಿನ್ನೆಗಿಂತ 3 ಸಾವಿರ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ವಾರದ ಆರಂಭದಲ್ಲಿ ಅಬ್ಬರಿಸುವ ಕೊರೊನಾ ಸೋಂಕಿನ …
Read More »ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ನಿಧನ
ಒಡಿಶಾ: ಒಡಿಶಾದ ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ 88ವರ್ಷ ಭಾನುವಾರ ರಾತ್ರಿ, ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು, ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಹೇಳಿದ್ದಾಗಿ ಶಾಂತಿ ದೇವಿ ಕುಟುಂಬಸ್ಥರು ತಿಳಿಸಿದ್ದಾರೆ.
Read More »ಜನರ ಹಿತ ಮುಖ್ಯ : ಇನ್ನೊಬ್ಬರ ಹಿತಕ್ಕಾಗಿ ನಿಯಮ ಬದಲಾವಣೆ ಮಾಡುವುದಿಲ್ಲ
ಬೆಂಗಳೂರು: ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ .ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ , ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





