ಮಧುರೈ: ಕೋವಿಡ್-19 ಪ್ರಕರಣಗಳ ಹೆಚ್ಚಳದ ನಡುವೆ ತಮಿಳುನಾಡಿನ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 300 ಗೂಳಿಗಳನ್ನು ಬೆದರಿಸಲು ಅಖಾಡಕ್ಕೆ ಬಿಡಲಾಯಿತು. ಕೊಬ್ಬಿದ ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕ ಮಂದಿ ವಿಫಲರಾದರು. ಗೂಳಿಗಳು ಅವರನ್ನು ಹಿಮೆಟ್ಟಿಸುತ್ತಾ ಮುಂದಕ್ಕೆ ಓಡಿದವು. ಈ ಸ್ಪರ್ಧೆಯಲ್ಲಿ 46 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More »ಶಾಸಕ ಕೆ.ಎಂ. ಶಿವಲಿಂಗೇಗೌಡ ಕೊರೊನಾ ದೃಢ
ಅರಸೀಕೆರೆ: ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಮತ್ತೇ ಕೊರೊನಾ ಪರೀಕ್ಷೆಯಿಂದ ಪಾಸಿಟಿವ್ ಕಂಡು ಬಂದಿದ್ದು ಬೆಂಗಳೂರಿಗೆ ತೆರಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ನಗರದ ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಕೊರೊನಾ 3ನೇ ಅಲೆ ನಿಯಂತ್ರಣದ ಬಗ್ಗೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಸಹಕಾರದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ರೋಗ ನಿಯಂತ್ರಣಕ್ಕೆ ಸಲಹೆ-ಸೂಚನೆ ನೀಡಿದ್ದರು.
Read More »ಸಿಎಂಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ರೇವಣ್ಣ
ಹಾಸನ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣ ಇಲಾಖೆಯಲ್ಲಿಯೂ ರಾಜಕೀಯ ಮಾಡುತ್ತಿದೆ. ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಮನೆ ಮುಂದೆ ಧರಣಿ ಮಾಡುತ್ತೇನೆ. ಹೊಳೆನರಸಿಪುರ ಮಹಿಳಾ ಕಾಲೇಜಿಗೆ ಎಂಎಸ್ ಸಿ ಪದವಿ ಮಂಜೂರು ಮಾಡಲು ರಾಜ್ಯ ಸರ್ಕಾರ ಮಿನಾಮೇಷ ಎಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ, ಶಾಸಕ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಶಿಕ್ಷಣ ಇಲಾಖೆ ಕಾರ್ಯದರ್ಶಿ ಒಪ್ಪಿಗೆ ನೀಡಿದ್ದಾರೆ. ಮೈಸೂರು ವಿವಿಯವರು ಸಹ ಭೇಟಿ ನೀಡಿ ಪರಿಶೀಲನೆ …
Read More »ವೇಗವಾಗಿ ಹರಡುತ್ತಿದೆ ಓಮಿಕ್ರಾನ್ ತಳಿ
ಬೆಂಗಳೂರು: ಓಮಿಕ್ರಾನ್ ತಳಿಯ ಕೊರೊನಾ ವೈರಾಣು ಗಂಭೀರ ಸಮಸ್ಯೆ ಉಂಟುಮಾಡದೇ ಇದ್ದರೂ ಕ್ಷಿಪ್ರಗತಿಯಲ್ಲಿ ಹೆಚ್ಚು ಜನರಿಗೆ ಹರಡಲಿದೆ. ಮೊದಲನೇ ಅಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಲು 10-12 ದಿನಗಳು ತಗುಲಿದ್ದವು. ಎರಡನೇ ಅಲೆಯಲ್ಲಿ 8 ದಿನಗಳು ತಗುಲಿದ್ದವು. ಆದರೆ ಈ ಬಾರಿ ಎದುರಾಗಿರುವ ಮೂರನೇ ಅಲೆಯಲ್ಲಿ 2 ದಿನಗಳಲ್ಲೇ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದಿನ ಎರಡು ಕೊರೊನಾ ಅಲೆಗಳಿಗೆ ಹೋಲಿಸಿದರೆ …
Read More »ಪಂಚಭೂತದಲ್ಲಿ ಲೀನವಾದ ಗೊಂಬೆ ಸಮನ್ವಿ
ಬೆಂಗಳೂರು : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ರಿಷಿ ಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಕುಟುಂಬದವರು, …
Read More »ಪಾದಯಾತ್ರೆ ಮುಂದುವರಿಯುವುದು ಖಚಿತ
ರಾಮನಗರ: ‘ಮೇಕೆದಾಟು ಪಾದಯಾತ್ರೆಯು ನಾಲ್ಕು ದಿನ ಕಾಲ ಯಶಸ್ವಿಯಾಗಿ ನಡೆದಿದ್ದು, ಗುರುವಾರ ಅನಿವಾರ್ಯ ಕಾರಣಗಳಿಂದ ಇದಕ್ಕೆ ವಿರಾಮ ಹೇಳುತ್ತಿದ್ದೇವೆ. ಕೋವಿಡ್ ಅಲೆ ಮುಗಿದ ಬಳಿಕ ಇಲ್ಲಿಂದಲೇ ಪಾದಯಾತ್ರೆ ಮುಂದುವರಿಯುವುದು ಖಚಿತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಗುರುವಾರ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ ಬಳಿಕ ಕಾಂಗ್ರೆಸ್ ಕಚೇರಿಯಿಂದ ಸಿದ್ದರಾಮಯ್ಯ ಜೊತೆಗೂಡಿ ಹೊರಬಂದ ಅವರು ನೆರೆದ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
Read More »ಮೊದಲ ಮಗುವನ್ನು ಕಳೆದಕೊಂಡ ನೋವು ಅಮೃತಾಳಗೆ ಮರೆತ್ತೀಲ್ಲಾ.. ಇದೀಗ ಸಮನ್ವಿ?
ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಡರಾತ್ರಿಯ ಸಂಭವಿಸಿದ ಈ ದುರ್ಘಟನೆಯಿಂದಾಗಿ ಆ ನೋವಿನಿಂದ ಇನ್ನೂ ಹೊರ ಬಂದಿಲ್ಲ ಎಂದು ಮಗುವಿನ ದೊಡ್ಡಪ್ಪ ರುದ್ರಮಣಿ ಹೇಳಿದ್ದಾರೆ. ಮೊದಲೇ ಒಂದು ಮಗು ಕಳೆದುಕೊಂಡಿದ್ವಿ, ನೋವು ಹೇಳೊದಿಕ್ಕೆ ಆಗುತ್ತಿಲ್ಲ, ಇನ್ನೂ ತಾಯಿ ಅಮೃತಾಳ …
Read More »ಜ. 16 ರಿಂದ ನೈಸ್ ರಸ್ತೆಯಲ್ಲಿ ದ್ವಿ ಚಕ್ರ ವಾಹನ ಸಂಚಾರ ಬಂದ್
ಬೆಂಗಳೂರು: ನೈಸ್ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವಿಗೀಡಾಗುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ರಾಜಧಾನಿ ಹೊರ ವಲಯದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶಿಸಿದ್ದಾರೆ. ಜ. 16 ರಿಂದ ಜಾರಿಗೆ ಬರುವಂತೆ ನೈಸ್ ರಸ್ತೆಯಲ್ಲಿ ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಐದು ಗಂಟೆ ವರೆಗೆ ಯಾವುದೇ …
Read More »ಬೆಂಗಳೂರುನಲ್ಲಿ 20,121 ಜನರಲ್ಲಿ ಕೊರೋನಾ ದೃಢ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕೂಡಾ ಏರಿಕೆ ಉಂಟಾಗುತ್ತಿದೆ. ರಾಜ್ಯದಲ್ಲಿ ಒಟ್ಟು 28,723 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ 12.98 ಇದ್ದು, ಅಪಾಯದ ಹಂತ ಮುಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ 1,41,337 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು.
Read More »ಬೆಂಗಳೂರುನಲ್ಲಿ 20,121 ಜನರಲ್ಲಿ ಕೊರೋನಾ ದೃಢ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕೂಡಾ ಏರಿಕೆ ಉಂಟಾಗುತ್ತಿದೆ. ರಾಜ್ಯದಲ್ಲಿ ಒಟ್ಟು 28,723 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ 12.98 ಇದ್ದು, ಅಪಾಯದ ಹಂತ ಮುಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ 1,41,337 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





