Breaking News

admin

ಮಹಾಕಾಳಿ ದೇವಸ್ಥಾನದಲ್ಲಿ ವ್ಯಕ್ತಿಯ ರುಂಡ ಪತ್ತೆ

ಹೈದರಾಬಾದ್: ಯಾರೋ ದುಷ್ಕರ್ಮಿಗಳು ಮಹಾಕಾಳಿ ದೇವಿ ಮೂರ್ತಿಯ ಪಾದದ ಬಳಿ ವ್ಯಕ್ತಿಯೊಬ್ಬನ ತಲೆ ಕತ್ತರಿಸಿ ಇಟ್ಟಿದ್ದಾರೆ.. ಈ ಭಯಾನಕ ದೃಶ್ಯ ಕಂಡ ಬಂದಿದ್ದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಗೊಲ್ಲಪಲ್ಲಿ ಗ್ರಾಮದಲ್ಲಿ ಸಂಭಿವಸಿದೆ. ಈ ಗ್ರಾಮದಲ್ಲಿ ಮಹಾಕಾಳಿ ದೇವಸ್ಥಾನವಿದೆ. ದೇಗುಲದ ಆವರಣದಲ್ಲಿ ಬೃಹತ್​ ಕಾಳಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಿನ್ನೆ ಪೂಜೆ ಮಾಡಲೆಂದು ಅರ್ಚಕರು ದೇಗುಲಕ್ಕೆ ಬಂದಾಗ ದೇವಿ ಪಾದದ ಅಡಿ ವ್ಯಕ್ತಿಯ ತಲೆ ಪತ್ತೆಯಾಗಿದೆ. ರುಂಡವನ್ನ ನೋಡಿ …

Read More »

ಕೊರೋನಾ ಹೆಚ್ಚಳ : ಇಂದು ಸಂಜೆ ಸಿಎಂ ಮಹತ್ವದ ಸಭೆ

ಬೆಂಗಳೂರು : ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ.  ಹಿನ್ನೆಲೆಯ್ಲಲಿ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಿಂದಲೇ ವರ್ಚುವಲ್ ಮೂಲಕ ಅರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Read More »

ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಚಿಕ್ಕಪೇಟೆ ಒಂದಾಗಲಿದೆ : ಉದಯ್ ಬಿ. ಗರುಡಾಚಾರ್

ಬೆಂಗಳೂರು :ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು. ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ  ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆ ಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ನಾಲ್ಕೈದು ವರ್ಷಗಳ ಹಿಂದೆ, ಅಂದರೆ ನಾನು ಶಾಸಕನಾಗಿ ಬರುವ ಮೊದಲು ಸಾಕಷ್ಟು ಅವ್ಯವಸ್ಥೆಗಳಿದ್ದವು. ರಸ್ತೆಗಳು, …

Read More »

ದಾವಣಗೆರೆಯಲ್ಲಿ 32 ಮಕ್ಕಳಿಗೆ ಕೊರೋನಾ ದೃಢ

ದಾವಣಗೆರೆ :ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೋನಾ  ಸ್ಫೋಟಗೊಂಡಿದೆ. ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೋನಾ ಪಾಸಿಟಿವ್ಬಂದಿದೆ. ಚನ್ನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಓಂ ಶಕ್ತಿ ಯಾತ್ರೆಗೆ ಹೋದ ಒಂದೇ ಗ್ರಾಮದ 22 ಮಂದಿಗೆ ಸೋಂಕು ಬಂದಿದೆ. ಗ್ರಾಮದಲ್ಲಿ ಆತಂಕ ಶುರುವಾಗಿದೆ.

Read More »

ವಂದೇ ಭಾರತ್ ರೈಲು ಪ್ರಾರಂಭಿಸುವಂತೆ ಜೋಶಿ ಮನವಿ

ಹುಬ್ಬಳ್ಳಿ: ಬೆಂಗಳೂರು-ನವದೆಹಲಿಗೆ ಹುಬ್ಬಳ್ಳಿ-ಧಾರವಾಡ ಮೂಲಕ ರಾಜಧಾನಿ ಎಕ್ಸ್‌ಪ್ರೆಸ್‌, ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್’ ರೈಲು ಪ್ರಾರಂಭಿಸುವಂತೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವಿ ಅವರು ಸ್ಪಂದಿಸಿದ್ದು, ಶೀಘ್ರವೇ ರೈಲುಗಳು ಮಂಜೂರಾಗಲಿವೆ . ಕುಸಗಲ್‌-ಅಮರಗೋಳ ಹೊಸ ರೈಲ್ವೆ ಬೈಪಾಸ್‍ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು.ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ   ರೈಲ್ವೆ ಲೈನ್‌ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗ ಅನುಕೂಲ ಆಗಲಿದೆ …

Read More »

ಲತಾ ಮಂಗೇಶ್ಕರ್ ಗೂ ಕೊರೋನಾ ದೃಢ

ಮುಂಬೈ: ಈಗಾಗಲೇ ಅನೇಕ ಜನಪ್ರತಿನಿಧಿಗಳು, ನಟ-ನಟಿಯರಿಗೆ ಕೊರೋನಾ ಸೋಂಕು ತಗುಲಿತ್ತು. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಸಿಎಂ ಪುತ್ರನಿಗೆ ಕೋವಿಡ್ ದೃಢ

ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಅವರಿಗೆ ಸೋಂಕು ದೃಢಪಟ್ಟಿದ್ದು, ಕುಟುಂಬದವರು ಪರೀಕ್ಷೆ ಮಾಡಿಸಿದ್ದಾರೆ.ಈ ವೇಳೆ ಪುತ್ರ ಭರತ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಭರತ್ ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳಿವೆ. ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ. ನನ್ನ …

Read More »

ಕೆಎಂಎಫ್ ನಲ್ಲಿ 460 ವಿವಿಧ ಹುದ್ದೆಗಳ ಭರ್ತಿ : ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕೆಎಂಎಫ್ ನಲ್ಲಿ ಉದ್ಯೋಗವಕಾಶ ಸೃಷ್ಟಿಸಲಿದ್ದು, ಮಾರ್ಚ್ ನೊಳಗೆ 460 ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಶೀಥಲೀಕರಣ ಘಟಕ ಉದ್ಘಾಟಿಸಿ ಮಾತನಾಡಿ, ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕರು, ಉದ್ಯೋಗದಿಂದ ವಂಚಿತರಾದವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಕೆಎಂಎಫ್ ನಿರ್ಧರಿಸಿದೆ.

Read More »

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಾದಯಾತ್ರೆ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಇಂದಿನಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆ ಸಾಗಲಿದೆ. ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ಜೆಡಿಎಸ್ ಈಗಾಗಲೇ ಕಿಡಿಕಾರಿದೆ. ಜೆಡಿಎಸ್ ಭದ್ರಕೋಟೆ ರಾಮನಗರಕ್ಕೆ ಎಂಟ್ರಿಕೊಟ್ಟು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಸ ಸಂದೇಶ ನೀಡಲಿದ್ದಾರೆ. ಮುಂದಿನ ಚುನಾವಣೆಗೆ ಸಿದ್ಧರಾಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪಾದಯಾತ್ರೆಯ ವೇಳೆ ನೈತಿಕ ಬೆಂಬಲ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಇಂದಿನ ಪಾದಯಾತ್ರೆ ವೇದಿಕೆಯಾಗಲಿದೆ. ಅಲ್ಲದೇ, ಇವತ್ತಿನಿಂದ ಮಾಜಿ ಸಿಎಂ …

Read More »

ಕೋವಿಡ್ ಏರಿಕೆ : 1ರಿಂದ 9ನೇ ತರಗತಿ ಶಾಲೆ ತರಗತಿ ಬಂದ್

ಬೆಳಗಾವಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜ.11ರಿಂದ 18ರವರೆಗೆ ವಸತಿ ಶಾಲೆಗಳೂ ಸೇರಿದಂತೆ ಎಲ್ಲ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡುವಂತೆ ಸೋಮವಾರ ಆದೇಶ ಹೊರಡಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಅಧಿಕಾರಿಗಳ ಸಭೆಯ ನಂತರ …

Read More »