ಬೆಂಗಳೂರು: ಕೊರೋನಾ ಬಹಳ ವೇಗವಾಗಿ ಹರಡುತ್ತದೆ, ಅದೇ ರೀತಿ ಕಡಿಮೆಯಾಗುತ್ತಾ ಹೋಗುತ್ತದೆ . ಕೋವಿಡ್ ಮೂರನೆ ಅಲೆಯು ಮೊದಲ ಹಾಗೂ ಎರಡನೆ ಅಲೆ ರೀತಿ ದೀರ್ಘ ಕಾಲ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಬುಧವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ದೇಶಗಳಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಮುಂದಿನ 4-6 ವಾರಗಳ …
Read More »ಭದ್ರತಾ ಲೋಪ : ಚರಣ್ಜಿತ್ ಸಿಂಗ್ ಸ್ಪಷ್ಟನೆ
ಚಂಡೀಗಢ: ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರು ಪಂಜಾಬ್ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ ಉಂಟಾದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಇಂದು ಫಿರೋಜ್ಪುರ ಜಿಲ್ಲೆಗೆ ಭೇಟಿ ನೀಡಿ ಹಿಂತಿರುಗಬೇಕಾಯಿತು.ಇದಕ್ಕಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾವು ನಮ್ಮ ಪ್ರಧಾನಿಯನ್ನು ಗೌರವಿಸುತ್ತೇವೆ. ನಾನು ಇಂದು ಬಟಿಂಡಾದಲ್ಲಿ ಪ್ರಧಾನ ಮಂತ್ರಿ ಮೋದಿ ಅವರನ್ನು ಬರಮಾಡಿಕೊಳ್ಳಬೇಕಾಗಿತ್ತು. ಆದರೆ, ನನ್ನ ಜೊತೆಗಿದ್ದವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಮತ್ತು ಪಾಸಿಟಿವ್ ಬಂದ ಕೆಲವರ …
Read More »ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪಕ್ಕೆ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಹಲವರು ಕಿಡಿ ಕಾರಿದ್ದಾರೆ. ”ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ …
Read More »ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆಯ್ಕೆ
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ , ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪ ರೆಡ್ಡಿ ಆಯ್ಕೆಯಾಗಿದ್ದಾರೆ. ಇಂದು ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಾಲಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಕೋನಪ್ಪ ರೆಡ್ಡಿ ಅವರಿಗೆ ತಲಾ 20 ಮತಗಳು ದೊರೆತು ಚುನಾಯಿತರಾಗಿದ್ದಾರೆ.
Read More »ವೀಕೆಂಡ್ ಕರ್ಫ್ಯೂ ಕುರಿತು ಬಿಜೆಪಿಯಲ್ಲಿ ಬೇಸರ
ಶಿವಮೊಗ್ಗ: ಕೊರೋನಾದಿಂದಾಗಿ ಲಾಕ್ ಡೌನ್ ಮಾಡುವುದರಿಂದ ಜನರು ತಕರಾರು ಎತ್ತುವುದು ನಿಜ.ಓಮಿಕ್ರಾನ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ಸರಕಾರ ಘೋಷಿಸಿರುವ ನೈಟ್ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವುದು ಗೊತ್ತೇ ಇದೆ. ಆದರೆ ಸರಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೂ ಅಸಮಾಧಾನ ವ್ಯಕ್ತವಾಗುತ್ತಿರುವುದು ರಾಜಕೀಯದಲ್ಲಿ ಹೊಸ ವಿಚಾರವಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚುತ್ತಿದೆ, ಅಲ್ಲಿ ಕರ್ಫ್ಯೂ ಹಾಕಲಿ, ರಾಜ್ಯದ ಇತರ ಕಡೆ ಯಾಕೆ ಎಂದು ಗ್ರಾಮೀಣಾಭಿವೃದ್ದಿ ಮತ್ತು …
Read More »ಏರಿಕೆ ಕಂಡ ಕೋವಿಡ್ : ಜನರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಕೊರೋನಾ ಏರಿಕೆಯಿಂದಾಗಿ ಎಲ್ಲರಿಗೂ ಆತಂಕ ಉಂಟಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ. ಕರ್ನಾಟಕದ ಶೇ.85ರಷ್ಟು ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗಿದ್ದು, 24 ಗಂಟೆಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡಿದ್ದು, ಮತ್ತೇ ಜನರಿಗೆ ತಮ್ಮ ಜೀವನದ ಬಗ್ಗೆ ಆತಂಕ ಉಂಟಾಗಿದೆ.
Read More »ಭಾರತದಲ್ಲಿ ಓಮಿಕ್ರಾನ್ ಗೆ ಮೊದಲ ಬಲಿ
ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್ ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಪಡೆದಿರೋದಾಗಿ ತಿಳಿದು ಬಂದಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದಂತ ಕೋವಿಡ್ ಹಾಗೂ ಒಮಿಕ್ರಾನ್ ಕೇಸ್ ಗಳ ಸಂಖ್ಯೆಯ ವರದಿ ಪ್ರಕಾರ, ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ಈಗ 2,135ಕ್ಕೆ ಏರಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ …
Read More »ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಓಕೆ, ರಾಜ್ಯದೆಲ್ಲೆಡೆ ಯಾಕೆ?: ಸಚಿವ ಈಶ್ವರಪ್ಪ ಗರಂ
ಶಿವಮೊಗ್ಗ : ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ.ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ …
Read More »ದೇಶದಲ್ಲಿ ಓಮಿಕ್ರಾನ್ ಗೆ ಮೊದಲ ಬಲಿ.!?
ನವದೆಹಲಿ : ದೇಶದಲ್ಲಿ ಓಮಿಕ್ರಾನ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ಕೊರೊನಾ ರೂಪಾಂತರಿ ಓಮಿಕ್ರಾನ್ ನಿಂದ ಸಂಭವಸಿದ ಮೊದಲ ಸಾವು ಎನ್ನಲಾಗಿದೆ. ದೇಶದಲ್ಲಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಹಲವೆಡೆ ಓಮಿಕ್ರಾನ್ ಸೋಂಕು ಸಮುದಾಯಕ್ಕೂ ಹಬ್ಬಿರುವ ಕುರಿತು ತಜ್ಞರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ರಾಜಸ್ಥಾನದಲ್ಲಿ ಓಮಿಕ್ರಾನ್ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯ ಮೂಲದಿಂದ ತಿಳಿದು ಬಂದಿದೆ ಎಂದು ರಾಯಿಟರ್ಸ್ ವರದಿ …
Read More »ಪಂಜಾಬ್ ಫ್ಲೈ ಓವರ್ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು
ಚಂಡೀಗಢ: ಭದ್ರತಾ ಸಿಬ್ಬಂದಿ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫ್ಲೈ ಓವರ್ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಪ್ರತಿಭಟನೆ ಕಾರಣದಿಂದಾಗಿ ಪಿಎಂ ಮೋದಿ ಅವರ ಸುಗಮ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಬಟಿಂಡಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ಪಂಜಾಬ್ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಬಟಿಂಡಾಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





