Breaking News

admin

ಸಚಿವ ಡಾ. ಅಶ್ವತ್ಥ್ ನಾರಾಯಣ ರಾಜೀನಾಮೆಗೆ ಆಗ್ರಹ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಸಂಬಂಧಿಸಿದ ಬೃಹತ್ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು. ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಭಾಷಣದ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸುವ ಜತೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಕೂಡಾ ಭಾಗಿಯಾಗಿದ್ದರು. ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವ ಹಾಗೂ ಗೂಂಡಾ …

Read More »

ರಾಹುಲ್ ಅರ್ಧ ಶತಕ : ಭಾರತ ಆಲ್ ಔಟ್

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಇಂದಿನಿಂದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಸುದ್ದಿ ಭಾರತಕ್ಕೆ ಆಘಾತ ತಂದಿದೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಇದಕ್ಕೂ ಮುನ್ನ ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, ಅವರು ಜೋಹಾನ್ಸ್‌ಬರ್ಗ್‌ನಲ್ಲಿ …

Read More »

ಭಾರತ ಕ್ರಿಕೆಟ್ ತಂಡಕ್ಕೆ ನಾಯಕನಾದ ಕನ್ನಡಿಗ

ಒಂದು ವರ್ಷದಲ್ಲಿ ತಾನು ಟೀಂ ಇಂಡಿಯಾ ಟೆಸ್ಟ್ ತಂಡವನ್ನ ಮುನ್ನಡೆಸಲಿದ್ದಾರೆ. ಒಂದು ವರ್ಷದ ಹಿಂದೆ ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಹಿಂದೆ ಬಿದ್ದಿದ್ದ ಓಪನರ್ ಕೆ.ಎಲ್ ರಾಹುಲ್. ಅಂತದ್ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನ ಮುನ್ನೆಡೆಸುತ್ತಿದ್ದಾರೆ. ಪಂದ್ಯ ಶುರುವಾಗುವ ಕೆಲ ಕ್ಷಣದಲ್ಲಿ ವಿರಾಟ್ ಕೊಹ್ಲಿ ಗಾಯಾಳು ಎಂದು ಘೋಷಣೆಯಾಗಿದ್ದು, ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ. ದುರದೃಷ್ಟವಶಾತ್ ವಿರಾಟ್‌ಗೆ ಬೆನ್ನುಮೂಳೆಯ ನೋವಿನ ಸೆಳೆತದಿಂದ ಬಳಲುತ್ತಿದ್ದು, …

Read More »

ಮಹಾಮಾರಿಯನ್ನು ನಿಯಂತ್ರಣಕ್ಕೆ ಮಕ್ಕಳಿಂದ ಉತ್ತಮ ಸ್ಪಂದನೆ

ನವದೆಹಲಿ:  ದೇಶದಲ್ಲಿ ಕೊರೋನಾ ಹೆಚ್ಚಿದಂತೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ. COVID19 | CoWIN ಪೋರ್ಟಲ್‌ನ ಪ್ರಕಾರ ಮಕ್ಕಳಿಗೆ COVID19 ಲಸಿಕೆ ಹಾಕಿದ ಮೊದಲ ದಿನದಂದು ಸಂಜೆ 7 ಗಂಟೆಯವರೆಗೆ 15-18 …

Read More »

ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ

ರಾಮನಗರ: ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು.ಹಾಗಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಸಚಿವ ಅಶ್ವತ್ಥನಾರಾಯಣ ವೇದಿಕೆ ಮೇಲೆ ಮಾತನಾಡುತ್ತಾ ಅನಗತ್ಯವಾಗಿ ಪರೋಕ್ಷವಾಗಿ ಹೇಳಿಕೆಗಳನ್ನು ನೀಡಲಾಂಭಿಸಿದರು. ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ವೇದಿಕೆ ಮೇಲೆ ಪ್ರತಿಭಟನೆ ಮಾಡಿದ್ದೇವೆ ಎಂದರು.

Read More »

ಕಮಲದ ರಾಜ್ಯಾಧ್ಯಕ್ಷ ಬಂಧನ

ಹೈದರಾಬಾದ್: ಕೊರೋನಾ ಹಾವಳಿ ಹೆಚ್ಚಿದಂತೆ ಜನರಲ್ಲಿ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ನಿಯಮಗಳನ್ನು ಜಾರಿ ಗೊಳಿಸಿದೆ. ಆದರೆ ಕೋವಿಡ್ ನಿಯಂತ್ರಣ  ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್  ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆಯೇ ಸರಿ ಎಂಬುದಾಗಿ ಕಿಡಿಕಾರಿದ್ದಾರೆ.

Read More »

ಲಂಚ ಪಡೆದ ಆರೋಪ : ಇನ್ಸ್ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಇನ್ಸ್ಪೆಕ್ಟರ್ ಓರ್ವರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ. ಮಡಿವಾಳ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ನಾಯಕ್ ಅಮಾನತು ಆಗಿರುವ ಅಧಿಕಾರಿ ಎಂದು ಹೇಳಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಅಜಯ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೋರ್ಟ್ ಗೆ ಹಾಜರಾಗದೇ ಇದುದ್ದರಿಂದ ಆರೋಪಿ ವಿರುದ್ಧ ವಾರಂಟ್ ಜಾರಿ …

Read More »

ಅಶ್ವತ್ಥ, ಡಿ. ಕೆ. ಸುರೇಶ್ ಕಿತ್ತಾಟ : ಬಿಜೆಪಿ ರಾಜ್ಯಾಧ್ಯಕ್ಷ ಟ್ವೀಟ್

ಬೆಂಗಳೂರು:  ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಶ್ವತ್ಥ ನಾರಾಯಣ ವೇದಿಕೆ ಮೇಲೆ ಭಾಷಣ ಮಾಡುವಾಗ ಅವರತ್ತ ಮುನ್ನುಗ್ಗಿ ಬಂದು …

Read More »

ಭಾರಿ ಮೊತ್ತದ ವಿವಿ ಕ್ಯಾಂಪಸ್ ಸ್ಥಾಪನೆ

ಬೆಂಗಳೂರು:ನೂರು ಎಕರೆ ವಿಸ್ತಾರದಲ್ಲಿ 320 ಕೋಟಿ ವೆಚ್ಚದಲ್ಲಿ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ತಲೆ ಎತ್ತಲಿದೆ .ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ   ನಿರ್ಮಾಣ ಗೊಳ್ಳಲಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ. ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು …

Read More »

ನೇಣಿಗೆ ಕೊರಳೊಡ್ಡಿದ ಹುಬ್ಬಳ್ಳಿಯ ವ್ಯಾಪಾರಸ್ಥ: ಸಾಲವೇ ಶೂಲವಾಯಿತೇ…?

Featured Video Play Icon

Read More »