ಹುಬ್ಬಳ್ಳಿ : ರಾಜ್ಯದಲ್ಲಿ ಲಾಕ್ ಡೌನ್ ವಿಚಾರ ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ಕೈಗೊಂಡರೆ ಲಾಕ್ ಡೌನ್ ಅಗತ್ಯವಿಲ್ಲ. ಲಾಕ್ ಡೌನ್ ಒಂದೇ ಮದ್ದಲ್ಲ. ಅನಿವಾರ್ಯವಾದಲ್ಲಿ ಲಾಕ್ ಡೌನ್ ಮಾಡಲೇಬೇಕಾಗುತ್ತದೆ. ಆದರೆ ಈಗಾಗಲೇ ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ. ಮತ್ತೆ ಲಾಕ್ ಡೌನ್ ಜಾರಿಯಾದ್ರೆ ಮತ್ತಷ್ಟು ತೊಂದರೆಯಾಗಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಜನ ಅಗತ್ಯ ಮುನ್ನೆಚ್ಚರಿಕಾ …
Read More »ರಾಜ್ಯದಲ್ಲಿ ಮತ್ತೆ ಲಾಕ್ಡೌನ್..? ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ,ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕರೋನ ಜೊತೆಗೆ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಂಕ್ರಮಿಕ ರೋಗ ಹೆಚ್ಚದಂತೆ ತಡೆಗಟ್ಟುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲಿ ಮುಂದಾಗಿದೆ. ಈ ನಡುವೆ ನಾಳೆ ಸಂಜೆ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದು, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಾಗುತ್ತದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಅವರು ಇಂದು, ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ …
Read More »ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ಉದ್ಯಮಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನೀಲಿಜನ್ ರಸ್ತಯಲ್ಲಿ ನಡೆದಿದೆ. ನಾಗನಗೌಡ ಪಾಟೀಲ್ ಮೃತ ದುರ್ದೈವಿಯಾಗಿದ್ದು, ಇತ ರಸಗೊಬ್ಬರ ಅಂಗಡಿಯ ಮಾಲೀಕನಾಗಿದ್ದು, ನೀಲಿಜನ ರಸ್ತೆಯಲ್ಲಿ ಆಗ್ರೋ ನಡೆಸುತ್ತಿದ್ದನು. ವ್ಯಾಪಾರಕ್ಕಾಗಿ ಸಾಲಮಾಡಿದ ಕಾರಣ ಸಾಲಭಾದೆಯಿಂದ ಇಂದು ಮನೆಯಿಂದ ತನ್ನ ಪತ್ನಿಯ ಸೀರೆ ತೆಗೆದುಕೊಂಡು ಬಂದು ಆಗ್ರೋ ಅಂಗಡಿಯಲ್ಲಿ ನೆಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಉಪನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕಾನೂನು ಕ್ರಮ …
Read More »ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್ – ಪ್ರಜಾಪ್ರಭುತ್ವದ ಕೊಲೆ ಎಂದ ಜೆ.ಪಿ.ನಡ್ಡಾ
ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಬಂಧನದಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ತೆಲಂಗಾಣ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ಸರ್ಕಾರವು ಸಂಜಯ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಸಂಜಯ್ ಅವರು ಸರ್ಕಾರದ ಎಲ್ಲಾ ಮಾರ್ಗಸೂಚಿಯನ್ನು ಅನುಸರಿಸಿಯೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಪೊಲೀಸರು ಅವರನ್ನು ಬಂಧಿಸುವ ಮೊದಲು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. …
Read More »ಕೋವಿಡ್ 2022ರಲ್ಲಿ ಅಂತ್ಯವಾಗುತ್ತಾ?: WHO ಮುಖ್ಯಸ್ಥರ ಮಹತ್ವದ ಹೇಳಿಕೆ
ಹೊಸ ವರ್ಷ 2022 ಆರಂಭವಾಗುತ್ತಿದ್ದಂತೆ ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿನ ಹೊಸ ಅಲೆಯು ಹರಡುವ, ಸೃಷ್ಟಿ ಆಗುವ ಭೀತಿ ಕಾಡುತ್ತಿದೆ. ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕೊರೊನಾ ವೈರಸ್ ಸೋಂಕಿನ ಅಂತ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವದಲ್ಲಿ ಈ ಹೊಸ ವರ್ಷದಲ್ಲಿ ಕೊರೊನಾ ವೈರಸ್ ಸೋಂಕು ಏರಿಕೆ ಆಗುತ್ತಿದೆ ಎಂಬ ಹಿನ್ನೆಲೆಯಿಂದಾಗಿ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಕೋವಿಡ್ ನಿಯಮವನ್ನು ಕಠಿಣ ಮಾಡಿದೆ. ಕೆಲವು ರಾಷ್ಟ್ರಗಳಲ್ಲಿ ಲಾಕ್ಡೌನ್ನಂತಹ ಕ್ರಮವನ್ನು …
Read More »ನೈಟ್ ಕಫ್ರ್ಯೂ ಇದ್ದರು ಬೈಕ್ ರೈಡಿಂಗ್: ಸವಾರ ದುರ್ಮರಣ
ಬೆಂಗಳೂರು:– ಸ್ನೇಹಿತರಿಬ್ಬರು ಬೈಕ್ನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಫ್ಲೈಓವರ್ ಬ್ರಿಡ್ಜ್ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಮೃತಪಟ್ಟಿರುವ ಘಟನೆ ಕೆಜಿ ಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ ಹೆಬ್ಬಾಳ ನಿವಾಸಿ ಕುಶಾಲ್(27) ಮೃತಪಟ್ಟವರು. ಈತ ಇಂಟೀರಿಯಲ್ ಡೆಕೋರೇಟ್ ವೃತ್ತಿ ಮಾಡುತ್ತಿದ್ದರು. ನೈಟ್ ಕಫ್ರ್ಯೂ ಜಾರಿಯಲ್ಲಿದ್ದರೂ ಸಹ ಕುಶಾಲ್ ತನ್ನ ಸ್ನೇಹಿತನನ್ನು ಕರೆದುಕೊಂಂಡು ಅಪಾಚಿ ಬೈಕ್ನಲ್ಲಿ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿನಲ್ಲಿ …
Read More »ಹೊಟೇಲ್ನಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆ: ವ್ಯಕ್ತಿಗೆ ಗಂಭೀರ ಗಾಯ
ಬೆಂಗಳೂರು:– ಹೊಟೇಲ್ನಲ್ಲಿ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದಿದೆ. ಮಹೇಶ್(28) ಸುಟ್ಟ ಗಾಯಗಳಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಾಲೇಔಟ್, 2ನೆ ಮುಖ್ಯರಸ್ತೆ, ಗಣಪತಿ ಸರ್ಕಲ್ ಬಳಿ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಎಂಬ ಹೊಟೇಲ್ನಲ್ಲಿ ರಾತ್ರಿ ಎಲ್ಲಾ ಕೆಲಸ ಮುಗಿಸಿ ಹೊಟೇಲ್ಗೆ ಬೀಗ ಹಾಕಿ ಕೆಲಸಗಾರರು ಹೋಗಿದ್ದಾರೆ. …
Read More »ರಾಮನಗರ: ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ!
ರಾಮನಗರ: ರಾಮನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಬೇಕಿದ್ದ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿಯೇ ಸಂಸದ ಡಿ. ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ನೀರಾವರಿ …
Read More »ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ
ಚಿಕ್ಕಮಗಳೂರು: ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯವಾಗಲಿದೆಯಂತ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಚಿಕ್ಕಮಗಳೂರಿನ ಜ್ಯೂನಿಯರ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ, ಕರೊನಾ ನಿಯಂತ್ರಣ ಮಾಡುವ ಸಲುವಾಗಿ ಜನತೆ ನೆರವು ನೀಡದೇ ಹೋದಲ್ಲಿ, ಲಾಕ್ಡೌನ್ ಮಾಡುವುದು …
Read More »ಮೊದಲು ಕೊರೊನಾ ನಿಯಮ ಪಾಲಿಸದ ಮಂತ್ರಿಗಳಿಗೆ, MLAಗಳಿಗೆ ದಂಡ ಹಾಕಿ: ಯತ್ನಾಳ್
ವಿಜಯಪುರ: ಮಾಸ್ಕ್, ಸಾಮಾಜಿಕ ಅಂತರ ಕಾಪಾಡದವರು ಯಾರೇ ಅಗಿರಲಿ ದಂಡ ಹಾಕಬೇಕು. ಮೊದಲು ಮಂತ್ರಿಗಳಿಗೆ, ಎಂಎಲ್ಎ ಗಳಿಗೆ ದಂಡ ಹಾಕಲು ಪ್ರಾರಂಭಿಸಬೇಕು. ಆಗ ಜನರಿಗೆ ಭಯ ಬರುತ್ತದೆ ಎಂದು ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್ಎಗಳು ಬೀಕಾಬಿಟ್ಟಿ ಮದುವೆಗಳನ್ನು ಮಾಡಿದ್ರೆ ಸುಮ್ಮನಿರುತ್ತಾರೆ ಇದರಿಂದ ಜನರಿಗೆ ಏನು ಅನಿಸುತ್ತೆ. ಇವರೆಲ್ಲ ಅಲ್ಲಿ ಕುಳಿತು ಕಥೆ ಹೇಳುತ್ತಾರೆ. ಸಾರ್ವಜನಿಕರಿಗೆ ಮಾತ್ರ ಏಕೆ ದಂಡ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





