ಹುಬ್ಬಳ್ಳಿ:ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಹದಿನೆಂಟು ವಯಸ್ಸಿನ ಮಕ್ಕಳಿಗೆ ಲಸಿಕಾ ಕಾರ್ಯಕ್ರಮದ ನಂತರ ಮಾತಾನಾಡಿ, ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ ಮಾಡಬೇಕು …
Read More »ಕೋವಿಡ್ ಏರಿಕೆ ಕುರಿತು ತಜ್ಞರೊಂದಿಗೆ ಸಮಾಲೋಚನೆ: ಸಿಎಂ ಹೇಳಿಕೆ
ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19 ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆಸಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
Read More »ಜಲ ಸಂಪನ್ಮೂಲ ಸಚಿವಗೆ ಸವಾಲು ಹಾಕಿದ ಮಾಜಿ ಸಿಎಂ
ಚಾಮರಾಜನಗರ: ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು’ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪಕ್ಷದ ನಿಲುವಿನ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದರು. ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಹಿಂದೆ ಕಾಂಗ್ರೆಸ್ ಸರ್ಕಾರ ಇತ್ತು, ನಂತರ ಮೈತ್ರಿ ಸರ್ಕಾರ ಬಂತು. ಆಗ ಏನೂ ಮಾಡಲಿಲ್ಲ. ಈಗ ಕಾಂಗ್ರೆಸ್ನವರು ಪಾದಯಾತ್ರೆ ಮಾಡುವುದಕ್ಕೆ ಹೊರಟಿದ್ದಾರೆ. ಇದು …
Read More »ಧಾರವಾಡ ಇತಿಹಾಸ ಹೇಗೆ ತಿರುಚಿದ್ದಾರೆ ಅನ್ನೋದು ನನಗೆ ಗೊತ್ತು : ಸಿಎಂ
ಧಾರವಾಡ: ರಾಜ್ಯ ಇತರೆ ಐತಿಹಾಸಿಕ ಸ್ಥಳಗಳ ಪುಸ್ತಕ ಸಹ ತರುತ್ತೇವೆ. ಸರಣಿ ಗ್ರಂಥವನ್ನು ತರಲಾಗುವುದು. ರಾಜಕಾರಣಕ್ಕಾಗಿ ಪಾದಯಾತ್ರೆ, ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸಮಾಡ್ತಾರೆ. ಇಂಥವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು. ಇತಿಹಾಸ ತಿರುಚುವವರು ಹೆಚ್ಚಾಗಿದ್ದಾರೆ. ನೀವು ಚರಿತ್ರೆ ಒಂದು …
Read More »ದೇವಸ್ಥಾನ ಪ್ರಸಾದಕ್ಕೆ ಹೊಸ ನಿಯಮ ಜಾರಿ
ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ. ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ …
Read More »ವಿಭಿನ್ನ ರೀತಿಯಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು
ಚಿಕ್ಕಮಗಳೂರು:ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿಗೆ ಸ್ಕಾರ್ಫ್ ಧರಿಸಿ ಬರುವುದನ್ನು ಖಂಡಿಸಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ …
Read More »ಖಾಕಿಪಡೆ ಒತ್ತಡ ನಿವಾರಿಸಲು ಕ್ರೀಡಾಕೂಟ ಸಹಕಾರಿ
ಧಾರವಾಡ: ಪೊಲೀಸರು ತಮ್ಮ ಒತ್ತಡಗಳನ್ನು ನಿರ್ವಹಿಸಲು ಕ್ರೀಡಾಕೂಟ ಸಹಕಾರಿಯಾಗಿದೆ.ಕಳೆದ ಎರಡು ವರ್ಷಗಳಿಂದ ಇಡೀ ಮಾನವ ಕುಲ ಕೊರೊನಾ ವೈರಾಣುವಿನಿಂದ ತತ್ತರಿಸಿ ಹೋಗಿದೆ.ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕ್ರೀಡೆ, ದೈಹಿಕ ಚಟುವಟಿಕೆಗಳು ಅಗತ್ಯ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ಧಾರವಾಡದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾಗೂ ಬಲೂನುಗಳನ್ನು ಹಾರಿ ಬಿಡುವ ಮೂಲಕ …
Read More »15-18ನೇ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ
ಬೆಂಗಳೂರು: ಇಲ್ಲಿಯ ಗೋವಿಂದರಾಜನಗರದ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಪ್ರೌಢಶಾಲೆಯಲ್ಲಿಹಮ್ಮಿಕೊಳ್ಳಲಾಗಿದ್ದ 15-18ನೇ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಕ್ಕಳನ್ನು ನೋಡಿ ಸಂತೋಷವಾಯಿತು. ಬೆಂಗಳೂರಿನ ಪ್ರದೇಶದಲ್ಲಿ ಇಂತಹ ವ್ಯವಸ್ಥಿತ ಶಾಲೆ ಇದೆ ಎನ್ನುವುದನ್ನು ಸೋಮಣ್ಣ ತೋರಿಸಿದ್ದಾರೆ. ಈ ಲಸಿಕೆ ಕಾರ್ಯಕ್ರಮ ಹೊಸ ವರ್ಷದಲ್ಲಿ ನಡೆಯುತ್ತಿದೆ. ಹೊಸವರ್ಷದಂದು ಹೊಸ ಅಭಿಯಾನ ನಡೆಯುತ್ತಿದೆ. ಮೋದಿಜಿಯವರ ದೂರದೃಷ್ಟಿಯ ಪರಿಣಾಮದಿಂದ ಈ ಕಾರ್ಯಕ್ರಮ ನಡೆಯುತ್ತಿದೆ …
Read More »15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ
ನವದೆಹಲಿ: ಕೊರೋನಾ ನಿಯಂತ್ರಣಕ್ಕಾಗಿ ಕೊವಿಡ್ ಲಸಿಕೆ ಯನ್ನು ಹಾಕಿಕೊಳ್ಳುವಯೋಮಿತಿಯನ್ನು ಹೇಳಲಾಗುತ್ತು. ಸಣ್ಣ ಮಕ್ಕಳಿಗೆ ಲಸಿಕೆಯನ್ನು ನೀಡುಲು ಸರ್ಕಾರ ಆದೇಶ ಹೊರಡಿಸರಲಿಲ್ಲಾ. ಆದರೆ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ. ಹೀಗಿರುವಾಗ ಲಸಿಕೆ ನೀಡಿಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಬೇರೆ ಲಸಿಕೆಗಳು ಮಿಶ್ರವಾಗದಂತೆ ನೀಡದಂತೆ ತೀವ್ರ ಎಚ್ಚರ ವಹಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ …
Read More »ಪೆಟ್ರೋಲ್ ಬಂಕ್ದಲ್ಲಿ ತಲ್ವಾರದಿಂದ ಸರ್ದಾರನ ಮೇಲೆ ಹಲ್ಲೆ! ಕಿಮ್ಸ್ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ, ತಾಲೂಕಿನ ಅಂಚಟಗೇರಿ ನಡೆದಿದೆ. ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ. ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ. ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ. ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನ ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅತೀವ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನ ಹುಬ್ಬಳ್ಳಿಯ ಕಿಮ್ಸಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





