ಧಾರವಾಡ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ. ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
Read More »ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ದೋಖಾ – ಆರೋಪಿ ಅರೆಸ್ಟ್
ಹೊಸಕೋಟೆ: ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ವಂಚಿಸಿದ್ದ ಆರೋಪಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಬಂಧಿಸಲಾಗಿದೆ. ಆಂಧ್ರದ ಮದನಪಲ್ಲಿ ಮೂಲದ ಪಾಪಣ್ಣ ಅಲಿಯಾಸ್ ರೆಡ್ಡಿ 400ಕ್ಕೂ ಹೆಚ್ಚು ಜನರಿಗೆ ಉಂಡೆನಾಮ ತಿಕ್ಕಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪಾಪಣ್ಣ ಸೂಲಿಬಲೆಯಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದು, ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ 30 ತಿಂಗಳು ಹಣ ಕಟ್ಟಿದವರಿಗೆ 10 ಸಾವಿರ ಸೇರಿಸಿ 70 …
Read More »ರಾಜಸ್ಥಾನದಲ್ಲಿ ಓಮಿಕ್ರಾನ್ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಸಾವು
ಜೈಪುರ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಸೆಂಬರ್ 15 ರಂದು ಈ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿತ್ತು ಮತ್ತು ಜ್ವರ, ಕೆಮ್ಮು ಹಾಗೂ ಮೂಗು ಸೋರುವಿಕೆಯಂತಹ ರೋಗಲಕ್ಷಣಗಳನ್ನು ಹೊಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಾ ಖಾರಾಡಿ ಹೇಳಿದ್ದಾರೆ. ಮೃತ ವ್ಯಕ್ತಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್ ಅನ್ನು ಹೊಂದಿದ್ದರು. …
Read More »ನ್ಯೂ ಇಯರ್ ಆಚರಣೆ ಇಲ್ಲ ಏನಿಲ್ಲ-ಹೇಗಿದೆ ನೋಡಿ ವಾಣಿಜ್ಯ ನಗರಿ ಹುಬ್ಬಳ್ಳಿ
ಹುಬ್ಬಳ್ಳಿ : ಹೊಸ ವರ್ಷ ಸಂಭ್ರಮಾಚರಣೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ಗಳು ನವಧುವಿನಂತೆ ಶೃಂಗಾರಗೊಳ್ಳುತ್ತಿದ್ದವು. ಜಗಮಗಿಸುವ ಲೈಟಿಂಗ್, ಡಿಜೆ ಸೌಂಡ್ಗೆ ಯುವಕರು ಸ್ಟೆಪ್ ಹಾಕಿ ಸಂಭ್ರಮಿಸುತ್ತಿದ್ದರು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆ ಈ ಬಾರಿಯೂ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸುವುದಾಗಿ …
Read More »ಐದು ಜಿಲ್ಲೆಗಳ ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …
Read More »ಇಂದು ಸಂಜೆ 6 ಗಂಟೆಯಿಂದಲೇ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿ
ಬೆಂಗಳೂರು,;– ಕೋವಿಡ್ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಸೂಚಿಸಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಪೊಲೀಸರು ನಗರದ ಆಯಕಟ್ಟಿನ ಜಾಗ ಗಳೂ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಆಯೋಜಿ ಸಲಾಗಿದೆ. ಪ್ರಮುಖವಾಗಿ ಪ್ರತಿ ವರ್ಷ ಅದ್ಧೂರಿ ವರ್ಷಾ ಚರಣೆ ನಡೆಯುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಆಯಕಟ್ಟಿನ ಜಾಗಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರಪೊಲೀಸ್ ಆಯುಕ್ತ ಕಮಲಪಂಥ್ ಅವರು ಇಂದು ಸಂಜೆ …
Read More »ಮೀಟ್ ಮಾಡಣ, ಇಲ್ಲ ಡೇಟ್ ಮಾಡಣ..: ಜ.21 ರಂದು ಏಕ್ ಲವ್ ಯಾ ರಿಲೀಸ್
ಪ್ರೇಮ್ ನಿರ್ದೇಶನದ “ಏಕ್ ಲವ್ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್ಲಿಸ್ಟ್ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ. “ಮೀಟ್ ಮಾಡಣ ಇಲ್ಲ ಡೇಟ್ ಮಾಡಣ…’ ಎಂಬ ಹಾಡು ಎರಡು ಮಿಲಿಯನ್ಗೂ ಅಧಿಕ ಹಿಟ್ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್ ಈಶಯ್ ಸಾಹಿತ್ಯವಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ. ಐಶ್ವರ್ಯಾ ರಂಗರಾಜನ್ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್ ನೃತ್ಯ …
Read More »ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ
ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು …
Read More »ಚಿಗರಿ ಸೇವೆ ರಾತ್ರಿ 10 ಗಂಟೆಗೆ ಸ್ಥಗಿತ: ಇಯರ್ ಎಂಡ್ ಟಫ್ ರೂಲ್ಸ್
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ನಡುವೆ ತ್ವರಿತ ಸಾರಿಗೆ ಸೇವೆಯನ್ನು ಕಲ್ಪಿಸುತ್ತಿರುವ ಚಿಗರಿ ಸೇವೆಯನ್ನು ಬಿ.ಆರ್.ಟಿ.ಎಸ್ ವ್ಯವಸ್ಥಾಪಕರ ಹಾಗೂ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಇಂದು ರಾತ್ರಿ ಸಾರಿಗೆ ಸೇವೆಯನ್ನು ರಾತ್ರಿ 11 ಗಂಟೆಯನ್ನು ಪರಿಷ್ಕರಣೆಗೊಳಿಸಿ 10 ಗಂಟೆ ವರೆಗೆ ನಿಗದಿಪಡಿಸಲಾಗಿದೆ. ಹೌದು.. ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಿದ್ದು,ಅಲ್ಲದೇ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಯಾರೂ ಕೂಡ ನಿಯಮ ಉಲ್ಲಂಘನೆ ಮಾಡಬಾರದು ಎಂಬುವಂತ ಹಿನ್ನಲೆಯಲ್ಲಿ ಚಿಗರಿ ಸೇವೆಯನ್ನು 10 …
Read More »ಅವಕಾಶ ಸಿಕ್ಕಾಗಲೆಲ್ಲ ನಾವು ಪುಟಿದೇಳುತ್ತೇವೆ: ವಿರಾಟ್ ಕೊಹ್ಲಿ
ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





