ಆನೇಕಲ್: ಪತಿಯಿಂದ ದೂರವಾಗಿದ್ದ ಮಹಿಳೆ ಆಸ್ತಿ ವಿಚಾರಕ್ಕೆ ಪ್ರಿಯಕರನೊಂದಿಗೆ ಜಗಳ ಮಾಡಿಕೊಂಡು ಆತನಿಂದಲೇ ಕೊಲೆಯಾಗಿರುವ ಘಟನೆ ಬೆಂಗಳೂರು ಹೊಸೂರು ಮುಖ್ಯ ರಸ್ತೆ ಹೊಸರೋಡ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ. ಪ್ರಿಯಕರ ನವೀನ್ ಕುಮಾರ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇವರು ಆನೇಕಲ್ ತಾಲೂಕಿನ ಜಿಗಣಿ ನಿವಾಸಿಯಾಗಿದ್ದರು.ಅರ್ಚನಾ ರೆಡ್ಡಿ 5 ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದು, ನಂತರದ ದಿನಗಳಲ್ಲಿ ಪ್ರಿಯಕರ ನವೀನ್ ಕುಮಾರ್ ಜೊತೆ ಇದ್ದಳು. ಇತ್ತೀಚೆಗೆ ಚನ್ನಪಟ್ಟಣ ಬಳಿಯ ಆಸ್ತಿಯೊಂದರ …
Read More »‘ಸ್ವಾವಲಂಬಿ ಭಾರತ’ ಪರಿಕಲ್ಪನೆಯ ಸಾಕಾರಕ್ಕಾಗಿ ಎನ್ಇಪಿ ಜಾರಿ: ಯೋಗಿ ಆದಿತ್ಯನಾಥ್
ಕಾನ್ಪುರ: ‘ಸ್ವಾವಲಂಬಿ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಜಾರಿಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ. ಕಾನ್ಪುರ ಐಐಟಿಯ 54ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಯೋಗಿ, ‘ಸ್ವಾವಲಂಬಿ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಅನುಷ್ಠಾನಗೊಳಿಸಲಾಗಿದೆ. ದೂರದೃಷ್ಟಿ ಮತ್ತು ರಾಜ್ಯದ ಯುವಕರಿಗೆ ಹೊಸ ದಾರಿ ತೋರುವ ಕಾನ್ಪುರ ಐಐಟಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯ -ಐಐಟಿ, ಲಖನೌ ಐಐಟಿಯನ್ನು …
Read More »ಅರುಣಸಿಂಗ್ ಹಾಗೂ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ-ಸಿಎಂ ಬೊಮ್ಮಾಯಿ
ಹುಬ್ಬಳ್ಳಿ- ಪಕ್ಷದ ಸಂಘಟನೆ,ಮುಂಬರೋ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಹುಬ್ಬಳ್ಳಿ ಏರ್ ಪೊರ್ಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ಕೈಗೊಳ್ಳಾಗುತ್ತೆ ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೇ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ. ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರ. ಎಂ.ಪಿ ಕುಮಾರಸ್ವಾಮಿಗೆ ನನ್ಮೇಲೆ ಬಹಲ ಪ್ರೀತಿ ಇದೆ. ವರ್ಷಪೂತಿ ದಿನಾಲು …
Read More »11 ವರ್ಷದ ‘ಅಪ್ರಾಪ್ತ ತಾಯಿ’ ಗರ್ಭಪಾತಕ್ಕೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್
ಮುಂಬೈ: ತನ್ನ 22 ವರ್ಷದ ಸೋದರಸಂಬಂಧಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಹನ್ನೊಂದು ವರ್ಷದ ಬಾಲಕಿಯ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯಕ್ಕೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸೋಮವಾರ, ನ್ಯಾಯಮೂರ್ತಿಗಳಾದ ಎಸ್ಜೆ ಕಥವಾಲ್ಲಾ ಮತ್ತು ಅಭಯ್ ಅಹುಜಾ ಅವರ ರಜಾಕಾಲದ ಪೀಠವು ಅನುಮತಿಸಲಾದ 20 ವಾರಗಳ ಮಿತಿಯನ್ನು ಮೀರಿದ ಹೊರತಾಗಿಯೂ ಮತ್ತು ಭ್ರೂಣವು ಕೇವಲ ಸಣ್ಣ ಅಸಹಜತೆಗಳನ್ನು ಹೊಂದಿದ್ದರೂ ಸಹ ಹುಡುಗಿಗೆ (11 ವರ್ಷ 9 ತಿಂಗಳು) ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ …
Read More »ಪಿಡಿಓ ಹೆದರಿಸಿ ಉಮೇಶ್ ಜಾದವ್ ಬಿಲ್ ಮಾಡಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ ಆರೋಪ
ಕಲಬುರಗಿ: ಸಂಸದ ಉಮೇಶ್ ಜಾಧವ್ ಅವರು ಪಿಡಿಓರನ್ನು ಹೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘ 40% ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಮ್ಮ ಕಲಬುರಗಿ ಜಿಲ್ಲೆಯಲ್ಲಿ ವಸೂಲಿ 40% ಅನ್ನೂ ದಾಟಿ ಹೋಗಿದೆ. ಗ್ರಾಪಂ ಸದಸ್ಯರು ಉದ್ಯೋಗ ಖಾತ್ರಿಯಲ್ಲಿ ಆಗದ ಕೆಲಸಕ್ಕೆ ಸಂಸದರ ಮುಖಾಂತರ ಬಿಲ್ ಮಾಡಿಸಿಕೊಂಡಿದ್ದಾರೆ. ಬಿಲ್ ಹಾಕಿಸಿಕೊಳ್ಳುವುದಕ್ಕಾಗಿ ಚಿತ್ತಾಪುರ ತಾಲೂಕಿನ ಬಿಳಗೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ …
Read More »ಪಂಜಾಬ್ ಚುನಾವಣೆ 2022: 15 ಸ್ಥಾನಗಳಿಗೆ ಎಎಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಂಡೀಗಢ : ಪಂಜಾಬ್ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಪಕ್ಷದಲ್ಲಿ ಟಿಕೆಟ್ ನೀಡಲಾಗಿದೆ. ಇದರಲ್ಲಿ ಪ್ರಮುಖವಾದ ಹೆಸರು ಡಾ.ಚರಂಜಿತ್ ಸಿಂಗ್ ಅವರದ್ದು. ಚಮ್ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಎಪಿ ಡಾ.ಚರಂಜಿತ್ ಸಿಂಗ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪ್ರಸ್ತುತ ಪಂಜಾಬ್ನ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್ನ …
Read More »15-18 ವರ್ಷ ವಯಸ್ಸಿನವರಿಗೆ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಮಕ್ಕಳು ಹಾಗೂ ವಯೋ ವೃದ್ಧರ ಆರೋಗ್ಯ ವಿಚಾರದಲ್ಲಿ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಯಸ್ಕರು ಮತ್ತು ಅರ್ಹ ಫಲಾನುಭವಿಗಳನ್ನು ಲಸಿಕಾ ಕೇಂದ್ರಗಳತ್ತ ಸೆಳೆಯಲು ಯೋಜನೆಗಳನ್ನು ರೂಪಿಸುತ್ತಿದೆ. ಮಕ್ಕಳಿಕೆ ಲಸಿಕೆ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಕ್ಕಳು ಲಸಿಕೆ ಪಡೆದುಕೊಳ್ಳುವುದೇ ಇರುವುದನ್ನು ತಪ್ಪಿಸಲು 15-18 ವರ್ಷದ ಮಕ್ಕಳಿಗೆ ಶಾಲೆ ಹಾಗೂ ಕಾಲೇಜುಗಳಲ್ಲಿಯೇ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಈ ಕುರಿತು ಶಿಕ್ಷಣ ಇಲಾಖೆ, …
Read More »ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ವಿದ್ಯಮಾನ, ರಾಜ್ಯದ ಮಹತ್ವದ ವಿಷಯಗಳು ಎರಡು ದಿನ ಇಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿಣಿಯಲ್ಲಿ ಚರ್ಚೆಗೆ ಬರಲಿವೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಕ್ಕೆ ಸಲಹೆ, ಸೂಚನೆ ನೀಡಲು ಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. 11 ಸ್ಥಾನಗಳಲ್ಲಿ ಗೆದ್ದರೂ ಉತ್ತಮ ಸಾಧನೆ ತೋರಿದೆ. ಸೋಲಾದ ಕ್ಷೇತ್ರಗಳನ್ನು …
Read More »ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ ಅರುಣ ಸಿಂಗ್
ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ. ಕಾರ್ಯಕಾರಿಣಿಯ ಮೊದಲ ಹಂತದ ಕಾರ್ಯಕ್ರಮಕ್ಕೆ ಚಾಲನೆ. ಪೂರ್ಣ ಕುಂಭದೊಂದಿಗೆ ಅರುಣ್ ಸಿಂಗ್ ಅವರನ್ನ ಹೋಟೆಲ್ ಆವರಣಕ್ಕೆ ಕರೆತಂದ ಮಹಿಳಾ ಕಾರ್ಯಕರ್ತೆಯರು. ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ. ದೀನದಯಾಳ ಅವರ ಚಿಂತನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರವಸಾಧನೆ ಸಾರುವ ಪ್ರದರ್ಶಿನಿ ಉದ್ಘಾಟಿಸಿದ ಅರುಣ್ ಸಿಂಗ್. ದೀಪ ಬೆಳಗಿಸುವ ಮೂಲಕ ಚಾಲನೆ. ಅರುಣ್ ಸಿಂಗ್ ಅವರಿಗೆ ಸಾಥ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ …
Read More »ನೈಟ್ ಕರ್ಪ್ಯೂಗೆ ಬೆಂಗಳೂರು ಪೊಲೀಸ್ ಹಾಗೂ ಪಾಲಿಕೆ ಸಿದ್ಧತೆ
ಬೆಂಗಳೂರು:ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ನಗರ ಪೊಲೀಸ್ ಆಯುಕ್ತರು ಹಾಗೂ ಪಾಲಿಕೆ ಆಯುಕ್ತರು ಆಯಕ್ಟೀವ್ ಆಗಿದ್ದಾರೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಎಲ್ಲಾ ಡಿಸಿಪಿಗಳ ಜೊತೆ ಸಭೆ ನಡೆಸಿ ಕರ್ಪ್ಯೂ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ರು. ಯಾವೆಲ್ಲ ಬಂದೋಬಸ್ತ್ ಮಾಡಿಕೊಳ್ಳಬೇಕು, ಎಲ್ಲೆಲ್ಲಿ ಬ್ಯಾರಿಗೇಟ್ ಹಾಕ್ಬೇಕು, ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಅನ್ನೋ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಾರ್, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





