Breaking News

admin

ಕಲಾವಿದರ ಕುಂಚದಿಂದ ಅರಳಿದ ಬಿಜೆಪಿ ನಾಯಕರ ಸಾಧನೆಯ ಚಿತ್ರ ಪ್ರದರ್ಶನ

ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ದೀನದಯಾಳಜಿ ಅವರ ಚಿಂತನೆ, ಮೋದಿಯವರ ಸಾಧನೆ ಹಾಗೂ ಬಿಜೆಪಿ ಸಾಧನೆಯ ಕುರಿತು ಕಲಾವಿದರ ಕುಂಚದಿಂದ ಅರಳಿದ ಚಿತ್ರ ಪ್ರದರ್ಶಿನಿ ಏರ್ಪಡಿಸಲಾಗಿತ್ತು.. ಬಿಜೆಪಿ ಸಾಧನೆ ಹಾಗೂ ನಾಯಕರ ಚಿತ್ರ ಪ್ರದರ್ಶನಕ್ಕೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ನಳೀನ್ ಕುಮಾರ್ ಕಟೀಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ …

Read More »

ಬಿಜೆಪಿ ಕಾರ್ಯಕಾರಣಿ ಸಭೆಗೆ ಸಕಲ ಸಿದ್ಧತೆ: ಮಹತ್ವದ ಚರ್ಚೆ ಕ್ಷಣಗಣನೆ…!

ಹುಬ್ಬಳ್ಳಿ: ಸತತ 10 ವರ್ಷಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಸಜ್ಜುಗೊಂಡಿದ್ದು, ಕಮಲ ಪಡೆಯ ನಾಯಕರ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಕಲ‌ ಸಿದ್ಧತೆ ನಡೆದಿದ್ದು, ಇಡೀ ನಗರ ಕೇಸರೀಮಯವಾಗಿ ರಾರಾಜಿಸುತ್ತಿದೆ. ಸತತ 10 ವರ್ಷಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ …

Read More »

ಗೋವಾದಲ್ಲಿ ಮೊದಲ ಓಮಿಕ್ರಾನ್ ಪತ್ತೆ

ಪಣಜಿ: ಯುಕೆಯಿಂದ ಹಿಂದಿರುಗಿದ 8 ವರ್ಷದ ಬಾಲಕನಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ. ಈ ಮೂಲಕ ಗೋವಾದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಗಿದೆ. ಡಿಸೆಂಬರ್ 17 ರಂದು ಇಂಗ್ಲೆಂಡ್‍ನಿಂದ ಆಗಮಿಸಿದ 8 ವರ್ಷದ ಬಾಲಕನಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ದಾಖಲಾದ ಮೊದಲ ಓಮಿಕ್ರಾನ್ ಪ್ರಕರಣ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ತಿಳಿಸಿದ್ದಾರೆ. ಬಾಲಕನ ಗಂಟಲ ದ್ರವ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ …

Read More »

ಸಿಎಂ ಬೊಮ್ಮಾಯಿಗೆ ಅರುಣಸಿಂಗ್ ಬಹುಪರಾಕ್: ನಾಳೆ ಜೆ.ಪಿ.ನಡ್ಡಾ ಬರಲ್ಲ…!

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸವನ್ನು ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಅದ್ಬುತ ಕೆಲಸವನ್ನು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆಯುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಕುಮಾರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಾಳೆ, ಮತ್ತು ನಾಡಿದ್ದು ಪಕ್ಷದ ಕಾರ್ಯಕಾರಣಿ ಸಭೆ ಇದೆ. …

Read More »

ಶಿವಮೊಗ್ಗ: ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಒಂದೇ ಕುಟುಂಬದ 9 ಮಂದಿ

ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ …

Read More »

ಬೆಂಗಾವಲು ವಾಹನ ಸಿಬ್ಬಂದಿಯ ಎಡವಟ್ಟು, ದಾರಿ ತಪ್ಪಿದ ಸಿಎಂ..!

ಬೆಂಗಳೂರು- ಬೆಂಗಾವಲು ವಾಹನ ಸಿಬ್ಬಂದಿಯ ಎಡವಟ್ಟಿನಿಂದಾಗಿ ಕೋವಿಡ್ ಮೃತರಿಗೆ ಪರಿಹಾರ ಕಾರ್ಯಕ್ರಮಕ್ಕೆ ತೆರಳಬೇಕಿದ್ದ ಸಿಎಂ ಬೊಮ್ಮಾಯಿ ಅವರು ಕೊಂಕಣ ಸುತ್ತಿ ಮೈಲಾರಕ್ಕೆ ಬಂದಂಗೆ ವಿಳಂಬವಾಗಿ ತಲುಪಿದ ಪ್ರಸಂಗ ನಡೆಯಿತು. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿನ ಕಾರ್ಯಕ್ರಮಕ್ಕೆ ಹೋಗುವಾಗ ದಾರಿ ತಪ್ಪಿದ ಮುಖ್ಯಮಂತ್ರಿಗಳ ವಾಹನವು ಸುತ್ತು ಹಾಕಿಕೊಂಡು ತೆರಳಿತು. ಬೆಂಗಾವಲು ವಾಹನ ಸಿಬ್ಬಂದಿ ಮುಖ್ಯಮಂತ್ರಿಗಳು ತೆರಳಬೇಕಾದ ಮಾರ್ಗ ನಕ್ಷೆಯಲ್ಲಿ ಗೊಂದಲ ಮಾಡಿಕೊಂಡಿರುವುದು ಈ ಗೊಂದಲಕ್ಕೆ ಕಾರಣವಾಗಿದೆ. ಕಾಪೆರ್ರೇಷನ್ ಸರ್ಕಲ್‍ನಿಂದ ಬಸವನಗುಡಿಗೆ ಬರಬೇಕಿದ್ದ …

Read More »

ಸಿಎಂ ಕಾರ್ಯಕ್ರಮಕ್ಕಿಲ್ಲಾ ಕೊರೋನಾ ರೂಲ್ಸ್-ಮಾಸ್ಕ್,ಇಲ್ಲಾ ಸಾಮಾಜಿಕ ಅಂತರ ಮಾಯ !

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಇಂದು ಪರಿಹಾರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಜನ ಬಸ್‍ಗಳ ಮೂಲಕ ಗುಂಪು, ಗುಂಪಾಗಿ ಆಗಮಿಸಿದ್ದು, ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ. ಬಸವಗುಡಿ ಮೈದಾನದಲ್ಲಿ ಇಂದು ಬೆಳಗ್ಗೆ 11:30ಕ್ಕೆ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ನೂರಾರು ಮಂದಿ ಬಸ್ ಏರಿ ಬಂದಿದ್ದರು. ಅಲ್ಲದೇ ಈ ವೇಳೆ ಎಲ್ಲರೂ ಮಾಸ್ಕ್ …

Read More »

ಏಳು ಬಾರಿಯ ರಾಜ್ಯಸಭಾ ಸಂಸದ ಮಹೇಂದ್ರ ಪ್ರಸಾದ್ ಇನ್ನಿಲ್ಲ

ನವದೆಹಲಿ:ಜನತಾ ದಳ (ಯುನೈಟೆಡ್) ನ ರಾಜ್ಯಸಭಾ ಸಂಸದ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಪ್ರಸಾದ್ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಸಂಸತ್ತಿನ ಶ್ರೀಮಂತ ಸದಸ್ಯರಲ್ಲಿ ಒಬ್ಬರು ಎಂದು ಅಂದಾಜಿಸಲಾಗಿದೆ. ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಮ್ಮೆ ಲೋಕಸಭೆಗೆ ಚುನಾಯಿತರಾಗಿದ್ದರು.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. …

Read More »

ರಾಜ್ಯ ಬಿಜೆಪಿ ಸರ್ಕಾರ ‘ನೈಟ್ ಕರ್ಪ್ಯೂ’ ಬಗ್ಗೆ, ಸ್ವಪಕ್ಷೀಯ ನಾಯಕರಿಂದಲೇ ಅಸಮಾಧಾನ.!

ಚಿಕ್ಕಮಗಳೂರು: ರಾಜ್ಯ ಸರ್ಕಾರ ನಾಳೆಯಿಂದ ಜಾರಿಗೊಳಿಸುತ್ತಿರುವಂತ ನೈಟ್ ಕರ್ಪ್ಯೂ ಆದೇಶದ ಬಗ್ಗೆ ಹೋಟೆಲ್ ಮಾಲೀಕರು, ಚಿತ್ರಮಂದಿರದ ಮಾಲೀಕರು ಸೇರಿದಂತೆ ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಇತ್ತ ಬಿಜೆಪಿ ಸರ್ಕಾರದ ಈ ಆದೇಶ ವಿರುದ್ಧವೇ ಸ್ವಪಕ್ಷೀಯ ನಾಯಕ ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಓಮಿಕ್ರಾನ್ ವೈರಸ್ ಬಗ್ಗೆ ಭಯಪಡಬೇಡಿ ಎಂಬುದಾಗಿ ವಿಜ್ಞಾನಿಗಳೇ ತಿಳಿಸಿದ್ದಾರೆ. ಅಲ್ಲದೇ ಮೂಗು …

Read More »

ಹೊಸ ವರ್ಷಕ್ಕೆ ಜನ ಓಡಾಡುವಂತಿಲ್ಲ; ಕರ್ಫ್ಯೂ ಉಲ್ಲಂಘಿಸಿದರೆ NDMA ಅಡಿ ಕೇಸ್ ದಾಖಲು; ಕಮಲ್ ಪಂತ್ ಎಚ್ಚರಿಕೆ

ಬೆಂಗಳೂರು: ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಡಿಸೆಂಬರ್ 28ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಯಾರೂ ಹೊರಗಡೆ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಎಲ್ಲೆಡೆ ನಾಕಾಬಂದಿ ಹಾಕಿ ನಿರ್ಬಂಧ ವಿಧಿಸಲಾಗುತ್ತಿದೆ ಎಂದರು. ಬಸ್, ಕ್ಯಾಬ್ ಸೇವೆ ಇರಲಿದೆ. …

Read More »