Breaking News

admin

ಒಕ್ಕಲಿಗ ಸಂಘದ ಚುನಾವಣೆ; ಚಿಕ್ಕಮಗಳೂರಲ್ಲಿ ಎ.ಪೂರ್ಣೇಶ್ ಗೆಲುವು

ಚಿಕ್ಕಮಗಳೂರು ; ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಿಂದ ಎ. ಪೂರ್ಣೇಶ್ 1,158 ಮತಗಳ‌ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು. ಪೂರ್ಣೇಶ್ 1,158 ಮತಗಳ‌ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಬಿ. ಎಲ್. ಸಂದೀಪ್ 3,270 ಮತಗಳನ್ನು ಪಡೆದಿದ್ದಾರೆ. ಬ್ಯಾರವಳ್ಳಿ ನಾಗರಾಜು …

Read More »

ಕಾರು-ಬೈಕ್ ಡಿಕ್ಕಿ – ಬೈಕ್ ಸವಾರ ಬೀಳುತ್ತಿರುವ ವೀಡಿಯೋ ವೈರಲ್

ಹಾಸನ: ವೇಗವಾಗಿ ಬಂದ ಕಾರು ಹಿಂಬದಿಯಿಂದ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗೆ ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಬಸ್ತಿಹಳ್ಳಿಯ ಮಂಜುನಾಥ್ ಗಾಯಗೊಂಡ ಬೈಕ್ ಸವಾರ. ವೇಗವಾಗಿ ಬರುತ್ತಿದ್ದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿ ರಭಸಕ್ಕೆ ಬೈಕ್ ಸವಾರ, ಬೈಕ್ ಸಮೇತ ಕಾರಿನ ಮೇಲೆ ಜಂಪ್ ಆಗಿ ಬಿದ್ದಿದ್ದಾರೆ. ಈ ಭೀಕರ ಅಪಘಾತದ ದೃಶ್ಯ …

Read More »

ಶಿಕ್ಷಣ ಸಂಸ್ಥೆ ಗುರುತಿನ ಪತ್ರ ನೀಡಿದ ತಕ್ಷಣವೇ ಬಸ್‍ಪಾಸ್ -ಶ್ರೀರಾಮುಲು

ಬೆಳಗಾವಿ,: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಯಾವುದಾದರೂ ಗುರುತಿನ ಪತ್ರ ನೀಡಿದರೆ ಅವರಿಗೆ ತಕ್ಷಣವೇ ಪಾಸ್ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ಜೆಡಿಎಸ್‍ನ ಎಚ್.ಕೆ.ಕುಮಾರಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿದ್ಯಾರ್ಥಿಗಳಿಗಾಗಿ ಬಸ್‍ಪಾಸ್ ವಿತರಿಸಲು ಸೇವಾಸಿಂಧು ಪೋರ್ಟಲ್(ಆನ್‍ಲೈನ್) ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ಯಾವುದಾದರೊಂದು ಗುರುತಿನ ಚೀಟಿ ನೀಡಿದರೂ …

Read More »

ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ …

Read More »

ಮೇಲ್ಮನೆಯಲ್ಲಿ ಮಾದಕ ದ್ರವ್ಯಗಳ ತಿದ್ದುಪಡಿ ವಿಧೇಯಕ ಮಂಡನೆ

ನವದೆಹಲಿ,:ಲೋಕಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡ ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್‍ಸ್ಟ್ರಾನ್ಸಸ್ (ತಿದ್ದುಪಡಿ) ವಿಧೇಯಕ 2021 ಇಂದು ರಾಜ್ಯಸಭೆಯ ಮುಂದೆ ಪರಿಗಣನೆ ಮತ್ತು ಅನುಮೋದನೆಗಾಗಿ ಬರಲಿದೆ. ಮೇಲ್ಮನೆ ಕಲಾಪದ ದ್ವಿತೀಯಾರ್ಧದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಧೇಯಕವನ್ನು ಮಂಡಿಸುವ ಸಾಧ್ಯತೆ ಇದೆ. ಪಿ ಆರ್‌ ಎಸ್‌. ಶಾಸಕಾಂಗ ಸಂಶೋಧನೆ ಪ್ರಕಾರ ಈ ಮಸೂದೆಯು ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್‍ಸ್ಟ್ಯಾನ್ಸಸ್ ಕಾಯ್ದೆ 1985ಕ್ಕೆ ತಿದ್ದುಪಡಿ ತರಲಿದೆ. ಆ ಕಾಯ್ದೆಯ ಒಂದು …

Read More »

‘ವರುಣ್ ಸಿಂಗ್’ ಸೇವೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ- ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ರಾಷ್ಟ್ರಕ್ಕಾಗಿ ಅವರ ಶ್ರೀಮಂತ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಡಿಸೆಂಬರ್ 8ರಂದು ತಮಿಳುನಾಡಿನ ಊಟಿ ಸಮೀಪ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಹಾಗೂ 12 ಮಂದಿಯಿದ್ದಂತ …

Read More »

ಆಂಧ್ರಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 8 ಪ್ರಯಾಣಿಕರು ಸಾವು

ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ( Privet Bus ) ಒಂದು ಸೇತುವೆಯ ಮೇಲಿನಿಂದ ನದಿಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೇರಿ ಸಮೀಪದ ಜಲ್ಲೇರು ಬಳಿಯಲ್ಲಿ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. …

Read More »

ದೇವಸ್ಥಾನದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಕ್ಷಮೆಯಾಚಿಸಿದ ಪಾಲಿಕೆ ಸದಸ್ಯ ಬಡಿಗೇರ

ಹುಬ್ಬಳ್ಳಿ: ದೇವಸ್ಥಾನದ ವಿರುದ್ಧ ಅವಹೇಳನಕಾರಿ ಹೇಳಿಕೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಅಚಾತುರ್ಯದಿಂದ ಘಟನೆ ಸಂಭವಿಸಿರುವುದಾಗಿ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಕ್ಷಮೆಯಾಚನೆ ಮಾಡಿದ್ದಾರೆ. ಹೌದು…ಹು-ಧಾ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಅಚಾತುರ್ಯದಿಂದ ನಡೆದ ಘಟನೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ. ಮೊನ್ನೆ ರಾಮಣ್ಣ ಬಡಿಗೇರ ವಿರುದ್ಧ ಬೆಳಗಾವಿ ಜಿಲ್ಲೆಯ ಸಿರಸಂಗಿ ಕಾಳಿಕಾದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರಿಂದ ಆರೋಪ …

Read More »

ಮೊಟ್ಟೆ ವಿತರಣೆಗೆ ವಿರೋಧಿಸಿದವರ ವಿರುದ್ಧ ಧಿಕ್ಕಾರ: ವಾಣಿಜ್ಯನಗರಿಯಲ್ಲಿ ಸ್ವಾಮೀಜಿಗಳ ನಡೆಗೆ ವಿರೋಧ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಮಠಾಧೀಶರಿಂದ ವಿರೋಧ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಠಾಧೀಶರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಮೊಟ್ಟೆ ವಿರೋಧಿಗಳಿಗೆ, ಸಂತರಿಗೆ ಧಿಕ್ಕಾರ ಕೂಗಿ ಪ್ರತಿಭಟನೆ …

Read More »

ಮುಂದಿನ 4 ದಿನಗಳವರೆಗೆ ಈ ಕಾರಣಕ್ಕೆ ಬ್ಯಾಂಕ್‌ ಕ್ಲೋಸ್‌, ಇಂದೇ ನಿಮ್ಮ ವ್ಯವಹಾರ ಮುಗಿಸಿಕೊಳ್ಳಿ..

ನವದೆಹಲಿ: ಡಿಸೆಂಬರ್ 16ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.16 ಮತ್ತು 17ರಂದು ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 18 ಮತ್ತು 19 ವಾರಾಂತ್ಯಗಳು, ಹೀಗಾಗಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಯುನೈಟೆಡ್ ಫೋರಂ ಆಫ್ ಬ್ಯಾಂಕ್ …

Read More »