Breaking News

admin

ಸಭೆ, ಅಂತ್ಯಕ್ರಿಯೆ, ಮದುವೆಗಳಲ್ಲಿ ಜನಜಂಗುಳಿ ನಿರ್ಭಂಧಿಸಿ : ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗ್ತಿದೆ. ಈ ನಡುವೆ ಹೊಸ ರೂಪಾಂತರಿ ಒಮಿಕ್ರಾನ್‌ ಆತಂಕ ಸೃಷ್ಟಿಸ್ತಿದೆ. ಈಗಲೇ ಹೆಚ್ಚೆತ್ತುಕೊಳ್ಳದಿದ್ರೆ, ಅಪಾಯ ಖಂಡಿತ ಎಂದು ಮನಗೊಂಡಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಎಚ್ಚರಿಸಿದೆ. ದೇಶದಲ್ಲಿ ಕಳೆದ 2 ವಾರಗಳಲ್ಲಿ ಕೋವಿಡ್‌ ಪಾಸಿಟಿವಿಟಿ ಹೆಚ್ಚಳದ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಕಾರ್ಯಕರ್ಶಿ ರಾಜೇಶ್‌ ಭೂಷಣ್‌ ಪತ್ರ ಬರೆದಿದ್ದು, ಕೊರೊನಾ ಕಟ್ಟಿ ಹಾಕಲು ಕಟ್ಟುನಿಟ್ಟಿನ …

Read More »

ಅರಿಶಿನ ಶಾಸ್ತ್ರ ಸಂಭ್ರಮದ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್

ಮುಂಬೈ: ಬಾಲಿವುಡ್ ಸೆಲೆಬ್ರೆಟಿ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಶುಕ್ರವಾರ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ಇಂದು ಕತ್ರಿನಾ ತಮ್ಮ ಅರಿಶಿನ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕತ್ರಿನಾ-ವಿಕ್ಕಿ ಶುಕ್ರವಾರ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರಾದಲ್ಲಿರುವ ಸಿಕ್ಸ್ ಸೆನ್ಸಸ್ ರೆಸಾರ್ಟ್‍ನಲ್ಲಿ ಅದ್ಧೂರಿಯಾಗಿ ವಿವಾಹವಾದರು. ನೆಚ್ಚಿನ ನಟಿಯ ಮದುವೆ ಫೋಟೋಗಳನ್ನು ನೋಡಲು ಅಭಿಮಾನಿಗಳು ಸಹ ಕಾತುರರಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಮದುವೆ ಫೋಟೊವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದ ಕತ್ರಿನಾ, …

Read More »

ಪೂಜಾರಿಯ ಬೆತ್ತದೇಟಿಗೆ ಮಹಿಳೆ ಮೃತಪಟ್ಟ ಆರೋಪ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಹಾಸನ : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಪಾರ್ವತಿ (47) ಎಂಬುವರು ಮೃತಪಟ್ಟ ಮಹಿಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.ಹೀಗಾಗಿ, ದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಹಿರಿಯಾಪಟ್ಟಣದಮ್ಮ ದೇವರ ಪೂಜಾರಿ ತಿಳಿಸಿದ್ದನಂತೆ. ನಂತರ ಪೂಜೆ …

Read More »

13ರಂದು ಭವ್ಯ ಕಾಶಿ ದಿವ್ಯ ಕಾಶಿ ನೇರ ಪ್ರಸಾರ: ಟೆಂಗಿನಕಾಯಿ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಇದೇ 13ರಂದು ನಡೆಯಲಿರುವ ಎಲ್ಲಾ ಜ್ಯೋತಿರ್ಲಿಂಗಗಳ ಕೇಂದ್ರಗಳಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ದೇಶಾದ್ಯಂತ 51,000 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ನೇತೃತ್ವದಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಎಂಬುವಂತ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ …

Read More »

ಮಂಗಳೂರಿನ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ..ಮತಾಂತರ ಆರೋಪದಡಿ ಮಹಿಳೆ ಬಂಧನ

ಮಂಗಳೂರು : ಹಿಂದೂ ಧರ್ಮದ ಮಹಿಳೆಯನ್ನು ಮುಸ್ಲಿಂ ಧರ್ಮಕ್ಕೆ‌ ಮತಾಂತರ ಮಾಡಲು ಪ್ರಯತ್ನಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೂರ್ ಜಹಾನ್ ಅವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 8ರಂದು ಮಂಗಳೂರಿನ ಮೋರ್ಗನ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ನಾಗೇಶ್ ಎಂಬ ವ್ಯಕ್ತಿ ತನ್ನಿಬ್ಬರು ಮಕ್ಕಳು ಮತ್ತು ಹೆಂಡತಿಯನ್ನು …

Read More »

ವಿಕೃತ ಮನಸುಗಳಿಗೆ ಸಿಎಂ ಖಡಕ್​ ಎಚ್ಚರಿಕೆ

ಹಾವೇರಿ :ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡದರು.

Read More »

ಬೈಕ್‌ನಲ್ಲಿ ಅಡಗಿ ಕುಳಿತಿದ್ದ ಬುಸ್‌ ಬುಸ್‌ ನಾಗಪ್ಪ!

ಧಾರವಾಡ: ಬೈಕ್‌ ಒಂದರಲ್ಲಿ ಅಡಗಿ ಕುಳಿತಿದ್ದ ಆಭರಣದ ಹಾವನ್ನು ಉರಗ ತಜ್ಞ ತಿಪ್ಪಣ್ಣ ರಕ್ಷಿಸಿದ್ದಾರೆ.ಧಾರವಾಡದ ಹೊಸಯಲ್ಲಾಪುರದ ಬೈಕ್‌ ಒಂದರಲ್ಲಿ ಈ ಹಾವು ಅಡಗಿ ಕುಳಿತಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಉರಗ ತಜ್ಞ ತಿಪ್ಪಣ್ಣ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ತಿಪ್ಪಣ್ಣ ಆ ಹಾವನ್ನು ಹೊರ ತೆಗೆದು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.

Read More »

ತವರು ಮನೆಯಿಂದ ಹೆಂಡತಿ ವಾಪಸ್‌ ಕಳಿಸದಿದ್ದಕ್ಕೆ ಅತ್ತೆಯ ಕುತ್ತಿಗೆಗೆ ಬ್ಲೇಡ್‌ ಹಾಕಿದ ಗಲಾಟೆ ಅಳಿಯ

ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ತವರು ಮನೆ ಸೇರಿರುವ ಹೆಂಡತಿಯನ್ನು ವಾಪಸ್ ಕಳುಹಿಸಲಿಲ್ಲ ಎಂಬ ಆಕ್ರೋಶದಿಂದ, ಅಳಿಯನೊಬ್ಬ ಅತ್ತೆಗೆ ಬ್ಲೇಡ್ ನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರದ ನಿವಾಸಿ ಸೋಮವ್ವ ಮಲ್ಲಾಡ ಹಲ್ಲೆಗೀಡಾದವರು. ಪಡದಯ್ಯನ ಹಕ್ಕಲದ ರಮೇಶ ದೊಡ್ಡಮನಿ ಎಂಬ ಅಳಿಯನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ನಾಲೈದು ವರ್ಷಗಳ ಹಿಂದೆ ಪತಿ ರಮೇಶನೊಂದಿಗೆ ಜಗಳವಾಡಿ ಪತ್ನಿ ತವರು ಸೇರಿದ್ದರು. ಡಿ .7 ರಂದು ಪತ್ನಿ ಜೊತೆ ರಮೇಶ ಜಗಳ …

Read More »

ವಿನೋದ್ ಕಾಂಬ್ಳಿಗೆ ಸೈಬರ್ ಕಳ್ಳರಿಂದ ವಂಚನೆ-ಕೆವೈಸಿ ಅಪಡಟ್‌ ನೆಪ ಹೇಳಿ 1 ಲಕ್ಷ ಎಗರಸಿದ ಭೂಪರು

ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬಾಂದ್ರಾದಲ್ಲಿ ನಡೆದಿದೆ.ಪ್ರಸಿದ್ಧ ಬ್ಯಾಂಕ್‌ನ ಪ್ರತಿನಿಧಿಯೆಂದು ಕಾಂಬ್ಳಿಗೆ ಕರೆ ಮಾಡಿದ್ದಾರೆ. ನಂತರ ಕೆವೈಸಿ ಅಪ್ಡೇಟ್ ಮಾಡಲು ತಿಳಿಸಿದ್ದಾರೆ. ಬಳಿಕ ಅವರ ಬ್ಯಾಂಕ್ ವಿವರಗಳನ್ನೆಲ್ಲಾ ತೆಗೆದುಕೊಂಡು ಅಪ್‌ಲೊಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ಒಂದು ಲಕ್ಷ ರೂ.ವನ್ನು ವಂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಬ್ಳಿ ಅಪರಿಚಿತ ವ್ಯಕ್ತಿಯ …

Read More »

ಹುಬ್ಬಳ್ಳಿ- ಬಿದರ್ ನಡುವೆ ಸ್ಲೀಪರ್ ಬಸ್ ಆರಂಭ

ಹುಬ್ಬಳ್ಳಿ: ಸಾರ್ವಜನಿಕರ ಬಹುದಿನಗಳ ಬೇಡಿಕೆ ಮೇರೆಗೆ ಹುಬ್ಬಳ್ಳಿಯಿಂದ ಬೀದರ್ ಗೆ ನಾನ್ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಾಕರಸಾಸಂಸ್ಥೆ ಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಇದುವರೆಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಬೀದರ್ ಗೆ ನೇರವಾಗಿ ಐಷಾರಾಮಿ ಬಸ್ ಸಂಚಾರ ಇರಲಿಲ್ಲ. ಹುಬ್ಬಳ್ಳಿಯಿಂದ ಬೀದರ್ ಗೆ ಹೋಗುವವರು ಕಲಬುರಗಿ ವರೆಗೆ ಹೋಗಿ ಅಲ್ಲಿಂದ ಮತ್ತೊಂದು ಬಸ್ ಹತ್ತಿ ಬೀದರ್ ಗೆ ತಲುಪಬೇಕಾಗಿತ್ತು. ಬೆಳಗಿನ …

Read More »