ಕಣ್ಣೂರು-ಮಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನಃ ಪ್ರಾರಂಭಿಸುವಂತೆ ಒತ್ತಾಯಿಸಿ ಮಂಗಳೂರು ರೈಲ್ವೆ ನಿಲ್ದಾಣದ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಂಗಳೂರು: ಕೇರಳದ ಕಣ್ಣೂರು ಮತ್ತು ಮಂಗಳೂರು ನಡುವೆ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನಾರಂಭಿಸುವಂತೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.ದಿನನಿತ್ಯ ನಗರಕ್ಕೆ ಕೇರಳದಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದು, ಪ್ಯಾಸೆಂಜರ್ ರೈಲು ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈಲು ಸಂಚಾರ ಸ್ಥಗಿತ ಹಿನ್ನೆಲೆ …
Read More »ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ. ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ
Read More »ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಲಿಂಗರಾಜ ಅಂಗಡಿ ಸ್ಫರ್ಧೆ
ಡಾ.ಲಿಂಗರಾಜ ರುದ್ರಪ್ಪ ಅಂಗಡಿ ಧಾರವಾಡ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಹಿರಿಯ, ಕಿರಿಯ ಸಾಹಿತಿಗಳು, ಕಲಾವಿದರು, ಕನ್ನಡಾಭಿಮಾನಿಗಳ ಒತ್ತಾಸೆ ಬೆಂಬಲದೊಂದಿಗೆ ಪುನರ್ ಆಯ್ಕೆ ಬಯಸಿ ಸ್ಪರ್ಧೆ ಮಾಡಿದ್ದು, ನನ್ನ ಆಯ್ಕೆ ನೂರಕ್ಕೆ ನೂರರಷ್ಟು ಖಚಿತವಾಗಿದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಲಿಂಗರಾಜ ರುದ್ರಪ್ಪ ಅಂಗಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದ …
Read More »ಕಾರ್ತಿಕ ಮಾಸ ಮುಗಿಯೊವರೆಗೂ ಮಳೆ ಮುಂದುವರೆಯಕಿದೆ-ಕೋಡಿಮಠದ ಸ್ವಾಮೀಜಿ ಭವಿಷ್ಯ
ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಧಾರವಾಡ: ರಾಜ್ಯದಲ್ಲಿ ಕಾರ್ತಿಕ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮಳೆ ಹೆಚ್ಚಾಗುವ ಲಕ್ಷಣ ಇದೆ. ಕಾರ್ತಿಕ ಕಳೆಯುವವರೆಗೂ ಮಳೆ ಇರುತ್ತದೆ. ಸದ್ಯ ಪ್ರಕೃತಿ ವಿಕೋಪವಾಗಿದೆ. ಏನೂ ಮಾಡಲು ಆಗುವುದಿಲ್ಲ ಎಂದರು.ಅನಾಹುತಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಕ್ರಾಂತಿವರೆಗೂ ಮಳೆ ಇರಲಿದೆ ಎಂದರು. ಇದೇ ವೇಳೆ ರಾಜಕೀಯದ ಬಗ್ಗೆ ಭವಿಷ್ಯ …
Read More »ಆರೋಗ್ಯ ಸಲಹೆ: ನೀವು ಸಕ್ಕರೆ ಪ್ರಿಯರೇ?.. ಅತಿ ಬಳಕೆಗೂ ಮೊದಲು ಕೊಂಚ ಯೋಚಿಸೋದು ಒಳ್ಳೇದು..
ಬೆಂಗಳೂರು : ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸ ಎನ್ನುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಸಕ್ಕರೆ ಸೇವನೆ ಒಂದು ರೀತಿಯ ಸ್ಲೋ ಪಾಯಿಸನ್ (ನಿಧಾನಗತಿಯ ವಿಷ). ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆ ನಮ್ಮನ್ನು ಕಾಡುತ್ತದೆ. ಎಲ್ಲಾ ಬಗೆಯ ಆರೋಗ್ಯ ಸಮಸ್ಯೆಗೆ ಸಕ್ಕರೆಯೇ ಮುಖ್ಯ ಕಾರಣ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ?. ಖಂಡಿತ ಮಾಡಬಹುದು. ಎಷ್ಟು ಪ್ರಮಾಣದಲ್ಲಿ ಮಾಡಬೇಕು, ಯಾವ …
Read More »ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರವಿದೆ-ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರು: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರವಿದೆ. ರಾಜ್ಯಪಾಲರು ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಪತ್ರ ಬರೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕಾಮಗಾರಿ ತೆಗೆದುಕೊಳ್ಳಬೇಕಾದರೆ ಮಂತ್ರಿಗಳಿಗೆ, ಎಂಎಲ್ಎಗಳಿಗೆ 40 ಪರ್ಸೆಂಟ್ ಕಮಿಷನ್ ಕೊಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದಿದೆ ಎಂದರು. ಇಷ್ಟೊಂದು ಕಮಿಷನ್ ತೆಗೆದುಕೊಳ್ಳುವ ಸರ್ಕಾರವನ್ನು …
Read More »ಬಿಜೆಪಿಯವರು ರೈತರಲ್ಲಿ ಕ್ಷಮೆಯಾಚಿಸಲಿ: ಶಾಸಕ ಯು.ಟಿ.ಖಾದರ್
ಮಂಗಳೂರು: ಕೇಂದ್ರ ಸರ್ಕಾರವು ದೇಶಕ್ಕೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ರೈತರ ಜನಾಂದೋಲನಕ್ಕೆ ಮಣಿದು ಹಿಂಪಡೆದಿದೆ. ಆದರೆ 1 ವರ್ಷ 2 ತಿಂಗಳಲ್ಲಿ ಎಷ್ಟು ಶ್ರೀಮಂತರು ಈ ಕಾಯ್ದೆಯಿಂದ ಲಾಭ ಪಡೆದುಕೊಂಡಿದ್ದಾರೆಂದು ಸರ್ಕಾರ ಬಹಿರಂಗಪಡಿಸಲಿ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ‘ಬಿಜೆಪಿ ಮುಖಂಡರು ಕ್ಷಮೆ ಯಾಚಿಸಲಿ’: ಕಾಂಗ್ರೆಸ್ ಸರ್ಕಾರ ರೈತ ಮಸೂದೆಯನ್ನು ಜಾರಿಗೊಳಿಸಿತ್ತು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಕಾನೂನನ್ನು ತಿದ್ದುಪಡಿ ಮಾಡಿತು. ಹಾಗಾಗಿ ರೈತರು ನಿರಂತರ …
Read More »ಸೋಮಶೇಖರ್ ಆಪ್ತ ಸಹಾಯಕನಿಗೆ ಕೈ ಟಿಕೆಟ್.. ಕಾಂಗ್ರೆಸ್ ಬಿಜೆಪಿಯ ‘ಸಿ’ ಟೀಂ.. HDK ವ್ಯಂಗ್ಯ
ಬೆಂಗಳೂರು : ಸಚಿವ ಎಸ್ ಟಿ ಸೋಮಶೇಖರ್ ಅವರ ಆಪ್ತ ಸಹಾಯಕ ದಿನೇಶ್ ಗೂಳಿಗೌಡ ಅವರಿಗೆ ಮಂಡ್ಯದಿಂದ ವಿಧಾನಪರಿಷತ್ತಿಗೆ ಟಿಕೆಟ್ ನೀಡಲು ಹೊರಟಿರುವ ಕಾಂಗ್ರೆಸ್ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಸಿ ಟೀಂ ಎಂಬುದನ್ನು ಕಾಂಗ್ರೆಸ್ ನಾಯಕರೇ ಹೇಳಬೇಕು ಎಂದರು. ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್.ಟಿ. ಸೋಮಶೇಖರ್ ಆಪ್ತ ಸಹಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ನಮ್ಮ …
Read More »ಧಾರಾಕಾರ ಮಳೆಗೆ ಅಸ್ತವ್ಯಸ್ತವಾದ ಪೇಡಾನಗರಿ ಜನ
ಧಾರವಾಡ : ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅವಳಿ-ನಗರದ ಜನತೆ ಪರದಾಡುವಂತಾಗಿದೆ. ವಾಹನ ಸವಾರರಿಗೆ ಸಂಚಾರಕ್ಕೆ ಅಡೆತಡೆ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಯಿತು. ಅಲ್ಲದೆ ಕೆಲ ಮನೆಗಳ ಮಾಳಿಗೆ ಹಾಗೂ ಗೋಡೆಗಳು ಸಹ ಕುಸಿದಿರುವುದು ಕಂಡು ಬಂತು. , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಲಗಳಲ್ಲಿ …
Read More »ನ. 23ರವರೆಗೂ ಭಾರೀ ಮಳೆ ಸಾಧ್ಯತೆ : ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ಕಳೆದು ಹಲವು ದಿನಗಳಿಂದಲೂ ಸುರಿಯುತ್ತಿರುವ ಅಕಾಲಿಕ ಮಳೆ ಬಹುತೇಕ ಜಿಲ್ಲೆಯ ಅನ್ನದಾತರನ್ನ ಕಂಗಾಲು ಮಾಡಿದೆ. ಜತೆಗೆ ನಿರಂತರ ಮಳೆಯಿಂದಾಗಿ ರಾಜ್ಯದಾಂದ್ಯಂತ ಹಲವು ಅವಾಂತರಗಳು ಕೂಡ ಸೃಷ್ಠಿಯಾಗುತ್ತಿವೆ. ಸದ್ಯ ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣವೂ ಕಾಣುತ್ತಿಲ್ಲ. ಈ ಮಧ್ಯೆ ಹವಾಮಾನ ಇಲಾಖೆಯೂ ಕೂಡ ಮುನ್ನೆಚ್ಚರಿಕೆ ನೀಡಿದ್ದು, ನ.23ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





