ಮಂಗಳೂರು: ನಿನ್ನೆ ಪಂಪ್ ವೆಲ್ ನಲ್ಲಿ ಗೂಡ್ಸ್ ಟೆಂಪೋ ಚಾಲಕನ ಮೇಲೆ ಹಲ್ಲೆ ಮಾಡಿದ ರೌಡಿ ಶೀಟರ್ ಮೇಲೆ ಪೊಲೀಸ್ ಗುಂಡಿನ ದಾಳಿ ನಡೆಸಿದ್ದಾರೆ.ಹಲ್ಲೆ ಕೇಸಲ್ಲಿ ಭವಿತ್ ರಾಜ್ ಭಾಗಿಯಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕಂಕನಾಡಿ ಪೊಲೀಸರು ಬಂಧಿಸಲು ಹೋದಾಗ ಆರೋಪಿ ಭವಿತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.ಹೀಗಾಗಿ ಪೊಲೀಸರು ಸ್ವರಕ್ಷಣೆಗಾಗಿ ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಭಂಡ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ.
ಚಿತ್ರದುರ್ಗ: ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಅಲ್ಪಮತ ದೊರೆತಿದ್ದರೂ ಸಹ ರಾಜ್ಯಭಾರ ಮಾಡುವ ಬಂಡತನ ತೋರಿಸುತ್ತಿರುವ ಮೈತ್ರಿ ಸರ್ಕಾರ ವಿರುದ್ದ ಇಂದು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಕ್ಷದ ನಾಯಕರು ಈಗಲಾದರೂ ಎಚ್ಚೆತ್ತು ರಾಜೀನಾಮೆ ನೀಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.
Read More »ಸಿಎಂ ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಧಾರವಾಡ: ರಾಜ್ಯದಲ್ಲಿ ಅಲ್ಪ ಮತಕ್ಕೆ ಕುಸಿದ ರಾಜ್ಯ ಸಮ್ಮಿಶ್ರ ಸರಕಾರದ ಮುಖ್ಯ ಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿಯವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜಿನಾಮೆ ನೀಡಲು ಒತ್ತಾಯಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಇಂದು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ನಡೆಸಿದರು. ರಾಜ್ಯದಲ್ಲಿ ಜನವಿರೋಧಿ ಸಮ್ಮಿಶ್ರ ಸರಕಾರ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಈ ಸರಕಾರದ ಕಾರ್ಯವೈಖರಿಯಿಂದಾಗಿ ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ಶಾಸಕರು, ಸಚಿವರು ರಾಜಿನಾಮೆ ನೀಡುವ …
Read More »ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ರಾಮನಗರ: ಬಹುಮತವಿಲ್ಲದ ಸರ್ಕಾರವನ್ನು ನಡೆಸುತ್ತಿರುವ ಹೆಚ್ಡಿಕೆಗೆ ವಿರುದ್ಧ ಸಿಎಂ ಸ್ವ ಕ್ಷೇತ್ರ ರಾಮನಗರದಲ್ಲಿ ರಾಮನಗರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.೧೪ ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿ ಬಹುಮತ ಕಳೆದುಕೊಂಡ ಸರ್ಕಾರದಸಿಎಂ ಗೆ ನೈತಿಕತೆ ಇದ್ರೆ ರಾಜೀನಾಮೆ ನೀಡಬೇಕೆಂಬ ಒತ್ತಾಯಿಸಿದರು.
Read More »ರಾಜ್ಯದ ಶಾಸಕರಿಗೆ ಅಂತ್ಯ ಸಂಸ್ಕಾರ ನಡೆಸಿ ವಿನೂತನ ಪ್ರತಿಭಟನೆ
ಕೋಲಾರ: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶಾಸಕರ ರಾಜೀನಾಮೆಯ ಹೈ ಡ್ರಾಮಾ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಕೋಲಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ಸರ್ಕಾರ ಅಂತ್ಯ ಸಂಸ್ಕಾರ ಮಾಡಿ ವಿನೂತನ ಪ್ರತಿಭಟನೆ ನಡೆಸಲಾಯಿತು.ರಾಜ್ಯದ ರಾಜಕೀಯ ಅಸ್ಥಿರತೆ ಹಿನ್ನೆಲೆಯಲ್ಲಿ ರಾಜ್ಯದ 224 ಶಾಸಕರುಗಳಿಗೆ ನಗರದ ಮೆಕ್ಕೆ ವೃತ್ತದಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳ ಅಣಕು ಪ್ರದರ್ಶನ ಮಾಡಲಾಯಿತು.ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮಾಡದೇ ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಶಾಸಕರ ವಿರುದ್ಧ ಪ್ರತಿಭಟನಾನಿರತರು …
Read More »ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯ
ಕೋಲಾರ: ಸಿಎಂ ಕುಮಾರಸ್ಚಾಮಿ ರಾಜಿನಾಮೆಗೆ ಒತ್ತಾಯಿಸಿ ಕೋಲಾರದಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇಲ್ಲಿನ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆ ಮಾಡಿ ಧರಣಿ ನಡೆಸಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಶಾಸಕರು ಈಗಾಗಲೇ ರಾಜೀನಾಮೆ ನೀಡಿ ಪಕ್ಷಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿದ್ದಾರೆ. ಹೀಗಾಗಿ ಸಿಎಂ ಕೂಡಲೇ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
Read More »ಶಿಕ್ಷಕರ ಸಂಘಟನೆ ನೀಡಿದ್ದ ಬಂದ ಕರೆ ವಿಫಲ.
ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇಂದು ರಾಜ್ಯಾದ್ಯಂತ ರಾಜ್ಯದ 55,066 ಸರ್ಕಾರಿ ಶಾಲೆಗಳ ಬಂದ್ ಗೆ ಕರೆ ನೀಡಲಾಗಿತ್ತು. ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ವರ್ಗಾವಣೆ ಸೇರಿದಂತೆ ಇತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘ ಬಂದ್ ಗೆ ಕರೆ ನೀಡಿತ್ತು.ಆದರೆ ಬಂದ್ ಗೆ ಧಾರವಾಡದಲ್ಲಿ ನೀರಸ ವ್ಯಕ್ತವಾಗಿದೆ. ಪ್ರತಿದಿನದಂತೆ ಶಾಲಾ ತರಗತಿಗಳು ಯಥಾ ಪ್ರಕಾರ ನಡೆಯುವ ಮೂಲಕ ಶಿಕ್ಷಕರು ಬಂದ್ ಗೆ …
Read More »ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಚಿಕ್ಕೋಡಿ: ಸಿಎಂ ಹಾಗೂ ಡಿಸಿಎಂ ಸ್ಥಾನಕ್ಕೇ ರಾಜಿನಾಮೆ ಕೊಟ್ಟು ಪ್ರಜಾತಂತ್ರ ಗೌರವಿಸುವಂತೆ ಆಗ್ರಹಿಸಿ ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿಂದುವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
Read More »ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಗದಗ : ಸಿ ಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಗದಗನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪದರತಿಭಟನೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇನ್ನು ತಕ್ಷಣ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಧರಣಿಯಲ್ಲಿ ಬಿಜೆಪಿಗರು ಆಗ್ರಹಿಸಿದ್ರು. ಮೈತ್ರಿ ಸರಕಾರ ಬಹುಮತವನ್ನ ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಬಿಟ್ಟು ಸರಕಾರ ಉಳಿಸಿಕೊಳ್ಳುವಲ್ಲಿ ಬಡಿದಾಡ್ತಿದೆ. ರಾಜ್ಯದ ಜನತೆಗೆ ಮೈತ್ರಿ ಸರಕಾರ ಅನ್ಯಾಯ ಎಸಗಿದೆ …
Read More »ಕತ್ತು ಕೊಯ್ದು ಗೃಹಿಣಿಯ ಕೊಲೆ
ಚಾಮರಾಜನಗರ: ಜಿಲ್ಲೆಯಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತದ ಬಳಿ ಕತ್ತು ಕೊಯ್ದು ಗೃಹಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಭರಚುಕ್ಕಿ ಜಲಪಾತ ಬಳಿಯ ಮಯೂರ ಪ್ರವಾಸಿ ಮಂದಿರದ ಕಾವೇರಿ ನದಿ ದಂಡೆ ಮೇಲೆ ಗೃಹಿಣಿಯ ಕೊಲೆ ಮಾಡಲಾಗಿದೆ. ಬಂಡೆ ಮೇಲೆ ಕತ್ತು ಸೀಳಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದರು. ಶವದ ಪಕ್ಕದಲ್ಲಿ ಪುರುಷನ ಪ್ಯಾಂಟ್, ಗೃಹಿಣಿಯ ಚಪ್ಪಲಿ, ಜ್ಯೂಸ್ ಬಾಟಲಿ, ಬಟ್ಟೆಸೋಪು ಮತ್ತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





