Breaking News

admin

ಉಚಿತ ಕಣ್ಣಿನ ತಪಾಸಣೆ ಶಿಬಿರ

ಗದಗ: ನಗರದ ವಾರ್ಡ್ ನಂಬರ್ 20ರಲ್ಲಿ ಕೆ.ಎಚ್. ಪಾಟೀಲ ಶಾಸಕರ ಸೇವಾ ತಂಡದಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಚಸ್ಮಾ ವಿತರಣೆ ಕಾರ್ಯಕ್ರಮ ಜರುಗಿತು. ನಗರಸಭೆ ಸದಸ್ಯೆ ಪರವಿನಬಾನು ಮುಲ್ಲಾ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿದ್ದು, ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಸುಮಾರು ನೂರಕ್ಕೂ ಅಧಿಕ ಜನರು ಕಣ್ಣಿನ ತಪಾಸಣೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಖಾಜೇಸಾಬ್ ಕೊಪ್ಪಳ, ಶಿವಪ್ಪ ಕುರಿ, ಮಾದೇವಪ್ಪ ಪಾಟೀಲ, ಪರಶುರಾಮ ಬೆಳದಡಿ, ಸಂಜೀವ ಕೌತಾಳ, ಹುಲಿಗೆಮ್ಮ, ಇಸುಪ್ …

Read More »

ಕಾಲೇಜು ಆವರಣದಲ್ಲಿ ಧರೆಗುರುಳಿದ ಮರ

ಧಾರವಾಡ: ಜೆಎಸ್‌ಎಸ್ ಕಾಲೇಜು ಆವರಣದಲ್ಲಿ, ತಳಭಾಗದಲ್ಲಿ ಕೊಳೆತಿದ್ದ ಮರವೊಂದು ಗಾಳಿಗೆ ಬಿದ್ದಿರುವ ಘಟನೆ ನಡೆದಿದೆ. ಈ ವೇಳೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದು, ಮರದ ಕೆಳಗೆ ಪಾರ್ಕ್ ಮಾಡಲಾಗಿದ್ದ ಹಲವು ಬೈಕ್‌ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Read More »

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ

ವಾಹನಗಳು ಹೆಚ್ಚಾಗುತ್ತಿದ್ದು, ವಾಹನಗಳ ಅಪಘಾತವೂ ಹೆಚ್ಚಗುತ್ತಿವೆ. ಧಾರವಾಡ ತಾಲೂಕಿನ ಯಾದವಾಡ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಯಾದವಾಡ ಕಡೆಯಿಂದ ಬರುತ್ತಿದ್ದ ಈ ಟ್ರ್ಯಾಕ್ಟರ್, ಚಾಲಕನ ನಿಯಂತ್ರಣ ತಪ್ಪಿ ಅಪ್ಪು ದಾಬಾ ಬಳಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Read More »

ಶಿಕ್ಷಕರಿಗೆ ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸಬೇಕು

ಹುಬ್ಬಳ್ಳಿ: ಶಿಕ್ಷಕರಿಗೆ ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸಬೇಕು ಎಂದು ಕಳೆದ ೩೦ ವರ್ಷದಿಂದ ಹೋರಾಟ ಮಾಡಲಾಗುತ್ತಿದೆ. ೨೦೦೬ ನಂತರ ನೇಮಕವಾದ ಅನುದಾನಿತ ಶಾಲಾ ಕಾಲೇಜು ಶಿಕ್ಷಕರಿಗೆ ಹಳೇ ಪಿಂಚಣಿ ನೀಡಬೇಕು. ಹಲವಾರು ಬಾರಿ ಸರ್ಕಾರಕ್ಕೆ ಗಮನಕ್ಕೆ ತಂದರು ಸಹ ಪ್ರಯೋಜನವಾಗಿಲ್ಲ. ಇಬ್ಬರು ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಿಕ್ಷಕ ಹಾಗೂ ಉಪಾಧ್ಯಯ ವಿಭಾಗ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಆಗ್ರಹಿಸಿದರು. ರಾಜ್ಯದ ಅನುದಾನಿತ ,ಅನುದಾನರಹಿತ ಶಿಕ್ಷಣ ಸಂಸ್ಥೆ ಶಾಲಾ …

Read More »

ಮಾ. 25ಕ್ಕೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮನ

ಚಿಕ್ಕಬಳ್ಳಾಪುರ: ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. ಸತ್ಯಸಾಯಿ ಗ್ರಾಮದಲ್ಲಿ ವಿನೂತನ ಶೈಲಿಯಲ್ಲಿ 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿದೆ. ಕಟ್ಟಡಕ್ಕೆ ಶ್ರೀ ಸತ್ಯಸಾಯಿ ರಾಜೇಶ್ವರಿ ಕಟ್ಟಡ ಎಂದು ನಾಮಕರಣ ಮಾಡಲಾಗಿದೆ. ಮೆಡಿಕಲ್ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಇದರಿಂದ ಎಲ್ಲ ಅಂದುಕೊಂಡಂತೆ ಆದರೆ 2023-24ರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ …

Read More »

ಪ್ರಕೃತಿಯ ನಿರ್ಲಕ್ಷ್ಯ: ಕಾಂಕ್ರಿಟ್ ಕಾಡುಗಳ ನಿರ್ಮಾಣ

ಹುಬ್ಬಳ್ಳಿ: ನಮ್ಮ ಜೀವನದ ಅಸ್ತಿತ್ವ ಮತ್ತು ಸುಸ್ಥಿರತೆಯು ನಮ್ಮ ಪರಿಸರದಿಂದ ಮಾತ್ರ ಸಾಧ್ಯ. ಆದರೆ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳು ವೇಗವಾಗಿ ಬೆಳೆಯುತ್ತಿದ್ದರೆ, ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನೃಪತುಂಗ ಬೆಟ್ಟದಲ್ಲಿ ಮರಗಳ ಮಾರಣ ಹೋಮವಾಗುತ್ತಿದೆ. ನಗರಗಳು ಬೆಳೆದಂತೆ ಜನರಿಗೆ ಶುದ್ಧ ಗಾಳಿ ಸಿಗುತ್ತಿಲ್ಲ. ಮರಗಳನ್ನು ಕಡಿದು ಕಾಂಕ್ರಿಟ್ ಕಾಡುಗಳನ್ನು ನಿರ್ಮಿಸಲಾಗುತ್ತಿದೆ. ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಸುಂದರವಾದ ಬೆಟ್ಟವೆಂದು ಕರೆಯುವ ನೃಪತುಂಗ ಬೆಟ್ಟವೊಂದಿದೆ. ಈ ಬೆಟ್ಟದಲ್ಲಿ ಪ್ರಾಕೃತಿಕವಾಗಿ ಸಾವಿರಾರು ಸಂಖ್ಯೆಯಲ್ಲಿ …

Read More »

ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾದ ಬಸವರಾಜ ಮಲಕಾರಿ ಅವರಿಂದಾ ಯುವಕರಿಗೆ ಕ್ರೀಡಾ ಮಹತ್ವ

ಹುಬ್ಬಳ್ಳಿ-ಧಾರವಾಡ: ಕ್ರೀಡೆಗಳನ್ನು ಆಡುವುದರಿಂದಾ ಜವಾಬ್ದಾರಿ, ನಾಯಕತ್ವ ಮತ್ತು ಆತ್ಮವಿಶ್ವಾಸದಿಂದ ಕೆಲಸ ಮಾಡಲು ಕಲಿಯುವಂತಹ ಕೌಶಲ್ಯಗಳನ್ನು ಬೇಳೆಯುತ್ತವೆ. ದೇಹವನ್ನು ಪೋಷಿಸಲು ಆರೋಗ್ಯಕರ ಪೋಷಕಾಂಶಗಳ ಆಹಾರ ಅಗತ್ಯವಿರುವಂತೆ, ಕ್ರೀಡೆಗಳನ್ನು ಆಡುವುದು ನಮ್ಮ ಜೀವನವನ್ನು ವಿಶೇಷವಾಗಿ ಬೆಳೆಯುವ ಮಕ್ಕಳಿಗೆ ಮಹತ್ತರವಾದ ಮಹತ್ವವನ್ನು ಹೊಂದಿದೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ 74 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ ೧೩ ರಲ್ಲಿ ಕರ್ನಾಟಕ ಯುನಿವರ್ಸಿಟಿ ಮೈದಾನದಲ್ಲಿ ವಾರ್ಡ್ ನಂಬರ್ 19 ವಾರ್ಡ್ ನಂಬರ್ 20ರ ಯುವಕರಿಗೆ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದ ಹುಬ್ಬಳ್ಳಿ ಧಾರವಾಡ …

Read More »

ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಸೇವೆ: ಸಿಎಂ ಬೊಮ್ಮಾಯಿ

ಬೆವಿಕಂ ವ್ಯಾಪ್ತಿಯ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆ, ಕಚೇರಿ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನರವೇರಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಮಾರು 16 ಸಾವಿರ ಕೋಟಿ ರೂ.ಗಳ ವಿದ್ಯುತ್ ಸಬ್ಸಿಡಿಯನ್ನು ನೀಡಿದ್ದರೂ ಎಸ್ಕಾಂಗಳು ಸಾಲದಲ್ಲಿದೆ ಎಂದರು. ಕಳೆದ ಒಂದೂವರೆ ವರ್ಷದಲ್ಲಿ ಇಂಧನ ಕ್ಷೇತ್ರಕ್ಕೆ 9 ಸಾವಿರ ರೂ.ಗಳನ್ನು ನೀಡಲಾಗಿದೆ. ಎಸ್ಕಾಮ್ ಹಾಗೂ ಕರ್ನಾಟಕ ವಿದ್ಯುತ್ ನಿಗಮಕ್ಕೆ …

Read More »

H3N2 ವೈರಸ್‌ ಸೋಂಕು: ಜನರಿಗೆ ಮುನ್ನೆಚ್ಚರಿಕೆ

ಎಚ್‌3ಎನ್‌2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸಭೆ ನಡೆದಿದ್ದು, H3N2 ವೈರಸ್‌ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇನ್‌ಫ್ಲುಯೆಂಜಗೆ …

Read More »

ಬಿಜೆಪಿ ರಥಯಾತ್ರೆ ಪ್ರಾರಂಭ ಮಧ್ಯದಲ್ಲಿಯೇ ಮೊಟಕು

ಬಿಜೆಪಿ ರಥಯಾತ್ರೆ ಪ್ರಾರಂಭವಾಗಿದ್ದು, ಅಶೋಕ್ ಮತ್ತು ಸೋಮಣ್ಣ ಮಧ್ಯೆ ಗೊಂದಲ ಸೃಷ್ಟಿಯಾದ ಹಿನ್ನೆಲೆಯಲ್ಲಿ ನಾಯಂಡನಹಳ್ಳಿವರೆಗೂ ಸಾಗದೇ ರಥಯಾತ್ರೆ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ನಾಗರಭಾವಿಯಿಂದ ನಾಯಂಡಹಳ್ಳಿ ವರೆಗೂ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ನಾಯಂಡಹಳ್ಳಿವರೆಗೂ ರಥಯಾತ್ರೆಯಲ್ಲಿ ತೆರಳಲು ಸಾಧ್ಯವಿಲ್ಲವೆಂದು ಅಶೋಕ್ ನಿರಾಕರಿಸಿ ಯಾತ್ರೆಯಿಂದ ಹೊರಹೊರಟರು. ಅಶೋಲ್ ಹೋದ‌ ಹಿನ್ನೆಲೆಯಲ್ಲಿ ಕೋಪಗೊಂಡು ಸೋಮಣ್ಣನವರು ನಾಗರಬಾವಿಯಲ್ಲೆ ಯಾತ್ರೆ ಮೊಟಕುಗೊಳಿಸಿ, ತಮ್ಮ ಕ್ಷೇತ್ರದಲ್ಲಿ ಸಾಗುತ್ತಿದ್ದ ರಥಯಾತ್ರೆ ವಾಹನ ಬಿಟ್ಟು ಕಾರಿನಲ್ಲಿ ತೆರಳಿದ್ದಾರೆ.

Read More »