ಬೆಂಗಳೂರು: ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
Read More »ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆ
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ
ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ …
Read More »ಯುಗಾದಿ ದಿನ ಘೋರ ದುರಂತ : 11 ಜನ ಸಾವು
ಚೆನ್ನೈ: ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದ ಘಟನೆ ತಮಿಳುನಾಡಿನ ತಿರುಪತ್ತೂರ್ ಬಳಿಯ ಜವಡುಮಲೈನಲ್ಲಿ ನಡೆದಿದೆ. ಪೊಲೀಸರ ವರದಿ ಪ್ರಕಾರ, ವ್ಯಾನ್ನಲ್ಲಿ ಗುಡ್ಡಗಾಡು ಪ್ರದೇಶದಲ್ಲಿದ್ದ ಪುಲಿಯೂರಿನಿಂದ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇವರೆಲ್ಲ ಸೆಂಬರೈ ಪ್ರದೇಶ ಆಂಜನೇಯಾರ್ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ವ್ಯಾನ್ ಪುದುತ್ನಾಡು ಸಮೀಪ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ 100 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿದೆ. 11 ಮಂದಿ …
Read More »ಯಂತ್ರಕ್ಕೆ ಸಿಲುಕಿ ಯುವತಿ ಸಾವು
ಬೆಂಗಳೂರು: ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವುನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಶಾಜಿಯಾ ಮೃತಪಟ್ಟಿದ್ದಾರೆ.ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಅವಘಡ ನಡೆದಿದೆ. ಮಾಲೀಕನ ಬೇಜವಾಬ್ದಾರಿಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಭಾಸ್ಕರ್ ರಾವ್ ನಿವೃತ್ತಿ : ಭಾವನಾತ್ಮಕವಾಗಿ ಟ್ವೀಟ್
ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಐಪಿಎಸ್ನಲ್ಲಿ 32 ವರ್ಷಗಳ ಸೇವೆ ಮುಗಿಸಿದ ನಂತರ ಆಫೀಸ್ನಿಂದ ಮನೆಗೆ ನನ್ನ ಕೊನೆಯ ಪ್ರವಾಸ. ನನ್ನ ಸಾರ್ವಜನಿಕ ಜೀವನದಲ್ಲಿ ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕರ್ನಾಟಕದ ಜನತೆಗೆ, ನನ್ನ ಎಲ್ಲಾ ಸಹೋದ್ಯೋಗಿಗಳು, ಸ್ನೇಹಿತರು, ಹಿರಿಯರು ಮತ್ತು ಯುವಜನರಿಗೆ ಧನ್ಯವಾದಗಳು. ಪಕ್ಷಾತೀತವಾಗಿ ವಿವಿಧ …
Read More »ಏ. 6 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Read More »ಟೋಲ್ ಶುಲ್ಕ ಹೆಸರಲ್ಲಿ ಪ್ರಯಾಣಿಕರ ಜೇಬಿಗೆ ಕತ್ತರಿ
ಹುಬ್ಬಳ್ಳಿ: ಹುಬ್ಬಳ್ಳಿ-ಗದಗ ನಡುವೆ ಪ್ರಯಾಣಿಸುವ ಬಸ್ಗಳ ದರವನ್ನು ಸಾರಿಗೆ ಸಂಸ್ಥೆ ದಿಢೀರ್ ಆಗಿ 15 ರೂ. ಹೆಚ್ಚಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯಿಂದ ಗದಗ ನಡುವೆ 60 ಕಿಲೋ ಮೀಟರ್ ಪ್ರಯಾಣಕ್ಕೆ ನಿನ್ನೆಯವರೆಗೂ 60 ರೂ.ಗಳ ದರವನ್ನು ನಿಗದಿ ಮಾಡಲಾಗಿತ್ತು. ಶನಿವಾರದಿಂದ 15 ರೂ. ಹೆಚ್ಚಿಸಲಾಗಿದ್ದು, 75 ರೂ.ಗಳಿಗೆ ಏರಿಕೆಯಾಗಿದೆ. ಹೀಗಾಗಿ ನಿತ್ಯ ಹುಬ್ಬಳ್ಳಿಗೆ ಕೆಲಸ ಕಾರ್ಯಗಳಿಗೆ ಬರುವ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹುಬ್ಬಳ್ಳಿಗೆ ನಿತ್ಯ ಗದಗ ಭಾಗದಿಂದ ರೈತರು, ವ್ಯಾಪಾರಸ್ಥರು, …
Read More »ಹನುಮಾನ್ ದೇವಸ್ಥಾನದಲ್ಲಿ ಬೇವು ಬೆಲ್ಲ ವಿತರಣೆ
ಹುಬ್ಬಳ್ಳಿ: ನಗರದ ಗೋಕುಲ್ ದಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಶ್ರೀರಾಮುಲು ದೂರು ಹುಬ್ಬಳ್ಳಿ ಸಂಘದ ವತಿಯಿಂದ ಹೊಸ ವರುಷ ಯುಗಾದಿ ಹಬ್ಬವನ್ನು ದೇವಸ್ಥಾನಕ್ಕೆ ಬಂದಂತಹ ಭಕ್ತಾಧಿಗಳಿಗೆ ಬೇವು ಬೆಲ್ಲ ವಿತರಣೆ ಮಾಡುವ ಮೂಲಕ ಹೊಸ ವರ್ಷ ಯುಗಾದಿ ಹಬ್ಬವನ್ನು ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಪ್ರಮುಖರು ಉಪಸ್ಥಿತಿಯಿದ್ದರು
Read More »ಪೊಲೀಸ್ ಧ್ವಜ ದಿನಾಚರಣೆ : ಖಾಕಿಪಡೆಯಿಂದ ಆಕರ್ಷಕ ಪಥಸಂಚಲನ
ಹುಬ್ಬಳ್ಳಿ : ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ರಿಂದ ಆಕರ್ಷಕ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಅನಿಲ ಕುಲಕರ್ಣಿ ಹಾಗೂ ಅರುಣ ಕುಮಾರ ಸಾಳುಂಕೆ ಅವರು ವಂದನೆ ಸ್ವೀಕರಿಸಿದರು. ಸಂತೋಷ ಭೋಜಪ್ಪಗೋಳ ಅವರು ಪೊಲೀಸ್ ಪಡೆಗಳ ಪಥ ಸಂಚಲನದ ನೇತೃತ್ವ ವಹಿಸಿದ್ದರು. ಎಡ್ವೀನ್ ಡಿಸೋಜಾ ಅವರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಪಥ ಸಂಚಲನ ನಡೆಸಿತು. ಆರ್ ಎಸ್ ಐ ಭಾಗಣ್ಣ ವಾಲೀಕಾರ ಅವರು ರಾಷ್ಟ್ರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





