Breaking News

admin

ಪ್ರಧಾನಿ ಸಂವಾದ ಕಾರ್ಯಕ್ರಮದಲ್ಲಿ ಧಾರವಾಡ 2 ವಿದ್ಯಾರ್ಥಿನಗಳು ಆಯ್ಕೆ

ದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಯುವ ಸಂವಾದದಲ್ಲಿ ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ . ಇಬ್ಬರು ವಿದ್ಯಾರ್ಥಿಗಳಾದ ಬಿ . ಮುರಳೀಧರ , ಪ್ರಣವ ಲಿಂಗದಳ್ಳಿ ಹಾಗೂ ಪಾಲಕರಾದ ಜ್ಯೋತಿ . ಬಿ.ಎನ್.ಅವರಿಗೆ ನೇರವಾಗಿ ಪ್ರಧಾನ ಮಂತ್ರಿಯವರೊಡನೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ದೊರೆತಿದೆ . ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6 ನೇ …

Read More »

ಬೆಂಗಳೂರುಗೆ ಅಮಿತ್ ಶಾ ಆಗಮನ : ಕೆಲವು ರಸ್ತೆಗಳಲ್ಲಿ ಸಂಚಾರ ನಿಷೇಧ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ. ಅಮಿತ್‌ ಶಾ ಅವರು ಮಲ್ಲೇಶ್ವರದ ಸಂಪಿಗೆ ರಸ್ತೆ, ಮಾರ್ಗೋಸಾ ರಸ್ತೆ, 18ನೇ ಅಡ್ಡ ರಸ್ತೆ, 15ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆ, 2ನೇ ಟೆಂಪಲ್‌ ಸ್ಟ್ರೀಟ್‌ ರಸ್ತೆಗಳಲ್ಲಿ ಸಂಚರಿಸಲಿದ್ದಾರೆ. ಈ …

Read More »

ಸಿದ್ಧಲಿಂಗಾ ಮಠಕ್ಕೆ ಇಂದು ಅಮಿತ್‌ ಶಾ ಭೇಟಿ

ತುಮಕೂರು:ನಡೆದಾಡುವ ದೇವರ 115 ಜನ್ಮ ದಿನೋತ್ಸವದ ಹಿನ್ನೆಲೆ ಮಠದಲ್ಲಿ ಹಬ್ಬದ ಅಂಗವಾಗಿ  ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಿದ್ಧಲಿಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.  ಅಮಿತ್‌ ಶಾ ಸ್ವಾಗತಕ್ಕೆ ಸಜ್ಜಾಗಿದೆ.  ಭಕ್ತಾದಿಗಳು ಶ್ರೀಗಳ ಹುಟ್ಟುಹಬ್ಬದ ತಯಾರಿ ನಡೆಸಿದ್ದಾರೆ. ಜೊತೆಗೆ ಅಮಿತ್‌ ಶಾ ಸ್ವಾಗತಕ್ಕೆ ಸಿದ್ಧತೆಯನ್ನು ಮಾಡಿದ್ದಾರೆ. ಶ್ರೀಗಳಿಗೆ ಇಂದು ನಾಲ್ಕು ಲಕ್ಷ ಜನರು ನುಡಿನಮನ ಸಲ್ಲಿಸಲಿದ್ದಾರೆ.

Read More »

ರಾಜ್ಯದಲ್ಲಿ ಏ. 3ರವರೆಗೆ ಭಾರಿ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 3 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More »

ಪವರ್ ಸ್ಟಾರ್ ಮನೆಗೆ ಭೇಟಿ : ಅಶ್ವಿನಿ ಗೆ ಸಾಂತ್ವನ ಹೇಳಿದ ರಾಹುಲ್ ಗಾಂಧಿ

ಬೆಂಗಳೂರು : ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರನ್ನು ರಾಜ್ಯದ ಜನತೆ ಪ್ರತಿದಿನವೂ ಸ್ಮರಿಸಿಕೊಂಡು ಅವರು ಮಾಡಿರುವ ಮಾನವೀಯ ಕಾರ್ಯಗಳನ್ನು ಕೊಂಡಾಡುತ್ತಿದ್ದಾರೆ.ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಪುನೀತ್‌ ರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರಿಗೆ ಸಾಂತ್ವನ ಹೇಳಿದ್ದಾರೆ. ಪುನೀತ್‌ ರಾಜ್‌ ಕುಮಾರ್‌ ಅವರ ಸಮಾಧಿಗೆ ಈಗಲೂ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಇದೀಗ ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ …

Read More »

ಯುಗಾದಿ ಹಬ್ಬದ ದಿನ ಜನತೆಗೆ ಬಿಗ್ ಶಾಕ್

ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ .

Read More »

ಸಿಎಂ ಬೊಮ್ಮಾಯಿ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ಕೆಂಡಾಮಂಡಲ

Read More »

ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ

ಕೆಪಿಸಿಸಿ ಆದೇಶದಂತೆ ಇಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ 30 ರಲ್ಲಿ, ಗಗನಕ್ಕೇರಿರುವ ಪೆಟ್ರೋಲ್/ಡಿಸೇಲ್/ಗ್ಯಾಸ್/ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ದಿನಸಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸಿಲಿಂಡರ್ ಹಾಗೂ ದ್ವಿಚಕ್ರ ವಾಹನಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯದ ಡಬಲ್ ಇಂಜೆನ್ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ನವೀದ್ ಮುಲ್ಲಾ, …

Read More »

ಬಿ.ಇಡಿ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ

ಹುಬ್ಬಳ್ಳಿ : ಶ್ರೀ ಬಸವೇಶ್ವರ ರೂರಲ್ ಎಜ್ಯುಕೇಶನ್ ಮತ್ತು ಡೆವಲಪ್ಮೆಂಟ್ ಟ್ರಸ್ಟ್ ನ ರೂರಲ್ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಪರೀಕ್ಷೆಯಲ್ಲಿ ೯೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪೂಜಾ ಬೆಣ್ಣಿ ಶೇ ೯೩ ಅಂಕದೊಂದಿಗೆ ಪ್ರಥಮ, ಬಸವರಾಜ ಶೇ ೯೨.೫೦ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ೬೫ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ. ೯೦ ಕ್ಕೂ ಅಧಿಕ ಅಂಕಗಳನ್ನು …

Read More »

ಪೋಲಿಸ್ ಯಲ್ಲಪ್ಪ ಭಜಂತ್ರಿಗೆ ಮುಖ್ಯಮಂತ್ರಿ ಪದಕ

ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೊಡಮಾಡುವ ಮುಖ್ಯಮಂತ್ರಿ ಪದಕಕ್ಕೆ ಈ ಬಾರಿ ಬೆಳಗಾವಿಯ ನಾಲ್ವರು ಅಧಿಕಾರಿಗಳು ಭಾಜನರಾಗಿದ್ದಾರೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಇಲಾಖೆಯಲ್ಲಿ ವಾದ್ಯ ವೃಂದದಲ್ಲಿ ಕಾರ್ಯ ನಿರ್ವಹಿಸುತ್ತಿರುವ ARSI ಯಲ್ಲಪ್ಪ ಬಾಳಪ್ಪ ಭಜಂತ್ರಿ ಅವರಿಗೆ ಏಪ್ರಿಲ್ 2 ರಂದು ಕೊಡಮಾಡುವ ಮುಖ್ಯಮಂತ್ರಿ ಪದಕ ದೊರೆತಿದ್ದು ಇಲಾಖೆಯ ಹಿರಿಯ ಅಧಿಕಾರಿಗಳು, ಸಂಬಂಧಿಕರು ಸ್ನೇಹಿತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಯಲ್ಲಪ್ಪ …

Read More »